ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಕುರಿತ ಸರ್ವ ಪಕ್ಷಗಳ ಸಭೆ - ತೆಗೆದುಕೊಂಡ ನಿರ್ಣಯಗಳು

|
Google Oneindia Kannada News

ಬೆಂಗಳೂರು, ಮಾರ್ಚ್ 29: ಕೊರೊನಾವೈರಸ್ ವಿರುದ್ಧದ ನಿರ್ಣಾಯಕ ಹೋರಾಟದಲ್ಲಿ ಕರ್ನಾಟಕ ಸರ್ಕಾರ ಕೈಗೊಂಡಿರುವ ಕ್ರಮದ ಬಗ್ಗೆ ಬೆಂಬಲ ವ್ಯಕ್ತಪಡಿಸಿದ ಸರ್ವಪಕ್ಷದ ಮುಖಂಡರು ಕೆಲವು ಸೂಕ್ತ ಸಲಹೆಗಳನ್ನು ನೀಡಿದ್ದಾರೆ.

ಸರ್ವ ಪಕ್ಷಗಳ ಸಭೆಯಲ್ಲಿ ನಾಯಕರು ಉಪಯುಕ್ತ ಸಲಹೆಗಳನ್ನು ನೀಡಿರುತ್ತಾರೆ. ಸರ್ಕಾರ ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಲಿದೆ ಎಂದು ಸಭೆ ನಂತರ ಬಿ.ಎಸ್ ಯಡಿಯೂರಪ್ಪ ಹೇಳಿದರು.

ಪ್ರಮುಖ ನಿರ್ಣಯಗಳು ಹೀಗಿವೆ:
* ಸರ್ವ ಪಕ್ಷದ ಮುಖಂಡರು ಸರ್ಕಾರದ ಕ್ರಮಗಳಿಗೆ ಒಕ್ಕೊರಲಿನ ಬೆಂಬಲ ವ್ಯಕ್ತಪಡಿಸಿ, ಈ ಸಂಕಷ್ಟದ ಸನ್ನಿವೇಶದಲ್ಲಿ ಸರ್ಕಾರದ ಜೊತೆ ಕೈಜೋಡಿಸುವುದಾಗಿ ಸಹಮತ ವ್ಯಕ್ತಪಡಿಸಿದರು.

* ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, ನರ್ಸ್‍ಗಳು ಹಾಗೂ ಅರೇ ವೈದ್ಯಕೀಯ ಸಿಬ್ಬಂದಿಗೆ ಪಿಪಿಇ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಜರ್ ಬಾಟಲಿ ಗಳನ್ನು ಸರಬರಾಜು ಮಾಡಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು.

Coronavirus: Key decisions taken during the all party meeting

* ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ರಕ್ಷಣಾ ಸಾಧನಗಳನ್ನು ಒದಗಿಸಲು ಕೂಡಲೇ ಕ್ರಮಕೈಗೊಳ್ಳಲಾಗುವುದು.

* ರಾಜ್ಯದ ಗಡಿಗಳಲ್ಲಿ ಸಿಕ್ಕಿಕೊಂಡಿರುವ ಜನರ ವೈದ್ಯಕೀಯ ತಪಾಸಣೆ ನಡೆಸಿ, ಅವರಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡಲಾಗುವುದು.

* ಸೋಂಕಿಗೊಳಗಾಗಿರುವ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲು ಹಾಗೂ ಆರೋಗ್ಯವಾಗಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು.

* ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಅಗತ್ಯ ಸಂಖ್ಯೆಯಲ್ಲಿ ಟೆಸ್ಟಿಂಗ್ ಕಿಟ್ (ಪರೀಕ್ಷಾ ಸಾಧನಗಳು) ವಿತರಿಸಲಾಗುವುದು.

* ರೈತರ ಕೃಷಿ ಉತ್ಪನ್ನಗಳ, ಸಾಗಣೆ, ಮಾರಾಟ ಮತ್ತು ಒಳಕೆದಾರರಿಗೆ ಸೂಕ್ತವಾಗಿ ವಿತರಿಸಲು ವ್ಯವಸ್ಥೆ ಮಾಡಲಾಗುವುದು.

* ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಇತ್ಯಾದಿಗಳ ವಿತರಣೆ ಸೂಕ್ತ ವ್ಯವಸ್ಥೆ ಮಾಡಲಾಗುವುದು.

* ಪಡಿತರವನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಸಲಹೆಯನ್ನು ವಿರೋಧ ಪಕ್ಷದ ನಾಯಕರು ನೀಡಿದ್ದು, ಆ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು.

* ಮುಸ್ಲಿಂ ಬಾಂಧವರ ಜೊತೆ ನಾನು ಸಭೆ ನಡೆಸಿದ್ದು, ಅವರೆಲ್ಲರೂ ತಮ್ಮ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆಯನ್ನು ನಡೆಸಲು ಒಪ್ಪಿ ಸಹಕರಿಸಿರುತ್ತಾರೆ. ಅವರನ್ನು ಅಭಿನಂದಿಸುತ್ತೇನೆ.

English summary
Key decisions taken during the all party meeting that was presided over by Chief Minister BS Yediyurappa, held today at Conference hall, Vidhana Soudha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X