ಕೊರೊನಾ ವಿರುದ್ಧದ ಹೋರಾಟ; ದೇವೇಗೌಡರಿಗೆ ಮೋದಿ ಕರೆ

ಬೆಂಗಳೂರು, ಏಪ್ರಿಲ್ 05 : ಕೊರೊನಾ ವಿರುದ್ಧ ದೇಶದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರಿಗೆ ಮನವಿ ಮಾಡಿದರು.

ಭಾನುವಾರ ಪ್ರಧಾನಿ ನರೇಂದ್ರ ಮೋದಿ ಎಚ್. ಡಿ. ದೇವೇಗೌಡರ ಜೊತೆ ಮಾತುಕತೆ ನಡೆಸಿದ್ದಾರೆ. ಈ ಕುರಿತು ದೇವೇಗೌಡರು ಎರಡು ಟ್ವೀಟ್‌ಗಳನ್ನು ಮಾಡಿದ್ದಾರೆ. "ಮಾಜಿ ಪ್ರಧಾನಿಯಾಗಿ ಹೋರಾಟಕ್ಕೆ ತಮ್ಮ ಬೆಂಬಲವಿದೆ" ಎಂದು ದೇವೇಗೌಡರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮಾಜಿ ರಾಷ್ಟ್ರಪತಿಗಳು, ಮಾಜಿ ಪ್ರಧಾನಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಭಾನುವಾರ ಮಾತುಕತೆ ನಡೆಸಿದರು. ಕೊರೊನಾ ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದರು.

Coronavirus

ಎಚ್. ಡಿ. ದೇವೇಗೌಡರ ಜೊತೆಗೂ ಮೋದಿ ಮಾತುಕತೆ ನಡೆಸಿದ್ದಾರೆ. "ಕೊರೊನಾ ಪರಿಸ್ಥಿತಿ ಕುರಿತು ಮಾತನಾಡಲು ಪ್ರಧಾನಿ ಮೋದಿ ಕರೆ ಮಾಡಿದ್ದರು" ಎಂದು ಎಚ್. ಡಿ. ದೇವೇಗೌಡರು ಟ್ವೀಟ್ ಮಾಡಿದ್ದಾರೆ.

"ಕೊರೊನಾದಿಂದಾಗಿ ಸಾವಿರಾರು ಜನರು ಪ್ರಪಂಚದಾದ್ಯಂತ ಸಾಯುತ್ತಿದ್ದಾರೆ. ವೈರಸ್ ವಿರುದ್ಧ ಹೋರಾಡಲು ಬರುವ ವಾರ ಭಾರತಕ್ಕೆ ಬಹಳ ಮಹತ್ವದ್ದಾಗಿದೆ" ಎಂದು ದೇವೇಗೌಡರು ಹೇಳಿದ್ದಾರೆ.

"ಭಾರತ ಮಾತ್ರವಲ್ಲ ಇಡೀ ವಿಶ್ವದಲ್ಲಿ ಹಬ್ಬಿರುವ ಕೊರೊನಾ ವಿರುದ್ಧ ಹೋರಾಡಲು ಮಾಜಿ ಪ್ರಧಾನಿಯಾಗಿ ನನ್ನ ಸಂಪೂರ್ಣ ಬೆಂಬಲ ನೀಡುತ್ತೇನೆ ಭರವಸೆ ನೀಡಿದ್ದೇನೆ" ಎಂದು ದೇವೇಗೌಡರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+