ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನಲ್ಲಿ ಕೊರೊನಾ ವೈರಸ್ ಹಿನ್ನೆಲೆ ಪ್ರತಿಭಟನೆಗಳೆಲ್ಲ ಬ್ರೇಕ್

|
Google Oneindia Kannada News

ಬೆಂಗಳೂರು, ಮಾರ್ಚ್.10: ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ವೈರಸ್ ಕರ್ನಾಟಕಕ್ಕೂ ಕಾಲಿಟ್ಟಿದೆ. ರಾಜ್ಯದಲ್ಲಿ ಮಾರಕ ಸೋಂಕು ನಾಲ್ವರಲ್ಲಿ ಇರುವುದನ್ನು ವೈದ್ಯರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆ ಸರ್ಕಾರ ಮತ್ತು ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ವೈರಸ್ ಕಾರ್ಮೋಡ ಆವರಿಸಿದ್ದು ನಗರದಲ್ಲಿ ನಡೆಸುವ ಪ್ರತಿಭಟನೆಗಳಿಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದೆ. ಸದ್ಯದ ಮಟ್ಟಿಗೆ ಬೆಂಗಳೂರಿನಲ್ಲಿ ಯಾವುದೇ ಪ್ರತಿಭಟನೆಗಳನ್ನು ನಡೆಸದಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮನವಿ ಮಾಡಿಕೊಂಡಿದ್ದಾರೆ.

ಕೊರೊನಾ ವೈರಸ್ ಗೆ ಆಲ್ಕೋಹಾಲ್ ಮದ್ದು: ವದಂತಿಗೆ 27 ಮಂದಿ ಬಲಿ!ಕೊರೊನಾ ವೈರಸ್ ಗೆ ಆಲ್ಕೋಹಾಲ್ ಮದ್ದು: ವದಂತಿಗೆ 27 ಮಂದಿ ಬಲಿ!

ಕಳೆದ ಮಾರ್ಚ್.01ರಂದು ಅಮೆರಿಕಾದಿಂದ ಬೆಂಗಳೂರಿಗೆ ಆಗಮಿಸಿದ ಟೆಕ್ಕಿಯಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಅವರ ಪತ್ನಿ, ಮಗು ಹಾಗೂ ಕಾರ್ ಚಾಲಕನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಎಲ್ಲರಲ್ಲೂ ಸೋಂಕು ಪತ್ತೆಯಾಗಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

Coronavirus Effect: All Protests Postponed In Bangalore City.

ಹೆಚ್ಚು ಜನ ಸೇರುವುದರಿಂದ ಸೋಂಕು ಹರಡುವ ಆತಂಕ:

ಬೆಂಗಳೂರಿನಲ್ಲಿ ನಾಲ್ವರು ಕೊರೊನಾ ವೈರಸ್ ಸೋಂಕಿತರು ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಸರ್ಕಾರವು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದೆ. ರಾಜ್ಯದಲ್ಲಿ ಪ್ರತಭಟನೆ ನಡೆಸುವುದರಿಂದ ಸಾಕಷ್ಟು ಜನರು ಒಂದು ಕಡೆಯಲ್ಲಿ ಸೇರುತ್ತಾರೆ. ಇಂಥ ಸಂದರ್ಭದಲ್ಲಿ ಮಾರಕ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವ ಅಪಾಯ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಅವಕಾಶ ನೀಡದಿರಲು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

English summary
Coronavirus Effect: All Protests Postponed In Bangalore City. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X