ಭಯ ಪಡಬೇಡಿ, ವೈಯುಕ್ತಿಕ ಸ್ವಚ್ಛತೆ ಕಾಪಾಡಿ: ಕೊರೊನಾ ಬಗ್ಗೆ ಪುನೀತ್ ಸಂದೇಶ

ಕರ್ನಾಟಕ, ಮಾರ್ಚ್ 16: ಮಾರಣಾಂತಿಕ ಕೊರೊನಾ ವೈರಸ್ ಸೋಂಕಿನಿಂದಾಗಿ ಭಾರತದಲ್ಲಿ 112 ಪ್ರಕರಣಗಳು ದಾಖಲಾಗಿವೆ. ಕೊರೊನಾ ವೈರಸ್ ಸೋಂಕಿನಿಂದ ಕರ್ನಾಟಕದಲ್ಲಿ ಓರ್ವ ವ್ಯಕ್ತಿ ಕೂಡ ಸಾವನ್ನಪ್ಪಿದ್ದಾರೆ.

ಕಾಡ್ಗಿಚ್ಚಿನಂತೆ ಹಬ್ಬುತ್ತಿರುವ ಕೊರೊನಾ ವೈರಸ್ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಲು ಕನ್ನಡ ಚಲನಚಿತ್ರ ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಡಿಯೋ ಸಂದೇಶ ನೀಡಿದ್ದಾರೆ.

''ಈಗ ಎಲ್ಲಾ ಕಡೆ ಕೊರೊನಾ ವೈರಸ್ ಹರಡಿದೆ. ಭಯ ಪಡಬೇಡಿ, ವೈಯುಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಿ. ಎಲ್ಲರೂ ಒಟ್ಟಾಗಿ ಈ ವೈರಸ್ ವಿರುದ್ಧ ಹೋರಾಡೋಣ. ಜಾಗೃತಿಯಿಂದಿರಿ. ಸ್ವಚ್ಛತೆ ತುಂಬಾ ಮುಖ್ಯ'' ಎಂದು ವಿಡಿಯೋ ಮೂಲಕ ಎಲ್ಲರಿಗೂ ಸಂದೇಶ ನೀಡಿದ್ದಾರೆ ಪುನೀತ್ ರಾಜ್ ಕುಮಾರ್.

Coronavirus Scare: Kannada Actor Puneeth Rajkumars video message

ಕೊರೊನಾ ವೈರಸ್ ಸೋಂಕು ಹರಡದಂತೆ ನೋಡಿಕೊಳ್ಳಲು ಕರ್ನಾಟಕ ಸರ್ಕಾರ ಹೆಚ್ಚು ಜನ ಒಂದೆಡೆ ಸೇರುವ ಸಿನಿಮಾ ಥಿಯೇಟರ್ ಗಳು, ಪಬ್, ಕ್ಲಬ್ ಗಳನ್ನು ಬಂದ್ ಮಾಡುವಂತೆ ಆದೇಶ ನೀಡಿರುವ ಬೆನ್ನಲ್ಲೇ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ಪುನೀತ್ ರಾಜ್ ಕುಮಾರ್ ನಿರ್ಧಾರ ಮಾಡಿದ್ದಾರೆ.

ಪ್ರತಿ ಬಾರಿ ಅಭಿಮಾನಿಗಳ ಜೊತೆಗೆ ಜನ್ಮದಿನವನ್ನು ಸೆಲೆಬ್ರೇಟ್ ಮಾಡುತ್ತಿದ್ದ ಪುನೀತ್ ರಾಜ್ ಕುಮಾರ್, ಈ ಬಾರಿ ಅದಕ್ಕೆ ಬ್ರೇಕ್ ಹಾಕಿ, ''ನಮ್ಮ ಮನೆ ತನಕ ಯಾರೂ ಬರಬೇಡಿ. ನೀವು ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತವಾಗಿರುವುದೇ ನನಗೆ ಕೊಡುವ ಒಂದು ದೊಡ್ಡ ಉಡುಗೊರೆ'' ಎಂದು ಪುನೀತ್ ರಾಜ್ ಕುಮಾರ್ ಅಭಿಮಾನಿಗಳಲ್ಲಿ ಮನವಿ ಕೂಡ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+