ಕೊರೊನಾ ಭಯ; ರಾಜ್ಯದ ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ

ಬೆಂಗಳೂರು, ಮಾರ್ಚ್ 13: ಕರ್ನಾಟಕದಲ್ಲಿ ಮಾರಕ ಕೊರೊನಾ ವೈರಸ್ (ಕೋವಿಡ್ 19)​ ಆತಂಕ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪದವಿ ಕಾಲೇಜುಗಳಿಗೆ ಶಿಕ್ಷಣ ಇಲಾಖೆ 15 ದಿನ ರಜೆ ಘೋಷಣೆ ಮಾಡಿದೆ.

ಹಾಗೇ ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಿಗೆ (1 ರಿಂದ 6 ನೇ ತರಗತಿವರೆಗೆ) ಮುಂದಿನ ಆದೇಶದವರೆಗೆ ರಜೆ ನೀಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಮಾಡಿದೆ.

ಈ ಬಗ್ಗೆ ಕಾಲೇಜು ಶಿಕ್ಷಣ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರು ಶುಕ್ರವಾರ ಸುತ್ತೋಲೆ ಹೊರಡಿಸಿದ್ದಾರೆ. ಕೊರೊನಾ ವೈರಸ್​ ರೋಗವು ಸಾಂಕ್ರಾಮಿಕವಾಗಿ ಹರಡುತ್ತಿದೆ. ಈ ಬಗ್ಗೆ ರಾಜ್ಯ ಸರ್ಕಾರ ಕೊರೊನಾ ವೈರಸ್ ಸಾಂಕ್ರಾಮಿಕ ರೋಗವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಲಾಖೆ ವ್ಯಾಪ್ತಿಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪರೀಕ್ಷೆಗಳನ್ನು ಕೂಡ ರದ್ದುಗೊಳಿಸಲಾಗಿದೆ

ಪರೀಕ್ಷೆಗಳನ್ನು ಕೂಡ ರದ್ದುಗೊಳಿಸಲಾಗಿದೆ

ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಿಗೆ 1 ರಿಂದ 6 ನೇ ತರಗತಿವರೆಗೆ ರಜೆ ನೀಡಲಾಗಿದೆ. ಈ ವೇಳೆ ನಡೆಯುವ ಪರೀಕ್ಷೆಗಳನ್ನು ಕೂಡ ರದ್ದುಗೊಳಿಸಲಾಗಿದೆ. ಇದು ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ಅನ್ವಯ ಆಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

ಸಿಬ್ಬಂದಿ ಕೆಲಸ ಮಾಡಬೇಕು

ಸಿಬ್ಬಂದಿ ಕೆಲಸ ಮಾಡಬೇಕು

ಕಾಲೇಜು ಶಿಕ್ಷಣ ಇಲಾಖೆ ಮಾರ್ಚ್​​ 14 ರಿಂದ 28ರವರೆಗೆ ರಜೆ ಘೋಷಣೆ ಮಾಡಿದೆ. ಆದರೆ ಎಂದಿನಂತೆ ಕಾಲೇಜಿನ ಕಚೇರಿಗಳಲ್ಲಿ ಕೆಲಸ ಕಾರ್ಯಗಳು ನಿರ್ವಹಿಸಲಿವೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ಇದರಿಂದ ವಿವಿಧ ಪರೀಕ್ಷೆಗಳ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಮುಂದೇನು ಎಂಬ ಆತಂಕ ಎದುರ

ರಾಜ್ಯ ಸರ್ಕಾರ ಹೈ ಅಲರ್ಟ್

ರಾಜ್ಯ ಸರ್ಕಾರ ಹೈ ಅಲರ್ಟ್

ಇದುವರೆಗೆ ರಾಜ್ಯದಲ್ಲಿ ಕೊರೊನಾಕ್ಕೆ ಒಬ್ಬ ವ್ಯಕ್ತಿ ಮೃತಪಟ್ಟು, ಐವರಲ್ಲಿ ಸೋಂಕು ಕಾಣಿಸಿಕೊಂಡಿರುವುದರಿಂದ ರಾಜ್ಯ ಸರ್ಕಾರ ಹೈ ಅಲರ್ಟ್ ಘೊಷಿಸಿದೆ. ಕೊರೊನಾ ಹರಡದಂತೆ ತಡೆಯಲು ಕರ್ನಾಟಕ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಒಂದು ವಾರಗಳ ಕಾಲ ಮಾಲ್, ಚಿತ್ರಮಂದಿರ, ಪಬ್, ಸಾರ್ವಜನಿಕ ಕಾರ್ಯಕ್ರಮಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿದೆ.

ಒಂದು ವಾರ ಕರ್ನಾಟಕ ಬಂದ್!

ಒಂದು ವಾರ ಕರ್ನಾಟಕ ಬಂದ್!

ಕೊರೊನಾ ಹರಡದಂತೆ ತಡೆಯಲು ಕರ್ನಾಟಕ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಒಂದು ವಾರಗಳ ಕಾಲ ಮಾಲ್, ಚಿತ್ರಮಂದಿರ, ಪಬ್, ಸಾರ್ವಜನಿಕ ಕಾರ್ಯಕ್ರಮಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿದೆ. ಶುಕ್ರವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆರೋಗ್ಯ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಬಳಿಕ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಜನರು ಸರ್ಕಾರದ ಜೊತೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಐವರಲ್ಲಿ ಸೋಂಕು

ಐವರಲ್ಲಿ ಸೋಂಕು

ಜಾಗತಿಕವಾಗಿ ತೀವ್ರ ಆತಂಕ ಸೃಷ್ಟಿಸಿರುವ ಕೊರೊನಾ ಮಹಾಮಾರಿ (ಕೋವಿಡ್19) ಕರ್ನಾಟಕದಲ್ಲೂ ಭಯಾನಕ ವಾತವರಣವನ್ನು ಸೃಷ್ಟಿಸಿದೆ. ಇದುವರೆಗೆ ರಾಜ್ಯದಲ್ಲಿ ಕೊರೊನಾಕ್ಕೆ ಒಬ್ಬ ವ್ಯಕ್ತಿ ಮೃತಪಟ್ಟು, ಐವರಲ್ಲಿ ಸೋಂಕು ಕಾಣಿಸಿಕೊಂಡಿರುವುದರಿಂದ ರಾಜ್ಯ ಸರ್ಕಾರ ಹೈ ಅಲರ್ಟ್ ಘೊಷಿಸಿದೆ. ಆದರೆ, ಕೊರನಾ ಸೋಂಕಿತರ ಬಗ್ಗೆ ಸೂಕ್ತ ತಪಾಸಣೆ ನಡೆಸಿ, ವರದಿಯನ್ನು ಅಂಗೀಕರಿಸಲು ರಾಜ್ಯದಲ್ಲಿ ಸೂಕ್ತ ಪ್ರಯೋಗಾಲಯ ಇಲ್ಲದಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+