ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಆತಂಕ: ಎಲ್‌ಕೆಜಿ, ಯುಕೆಜಿ ಜೊತೆಗೆ ಪ್ರಾಥಮಿಕ ಶಾಲೆಗಳಿಗೂ ರಜೆ

|
Google Oneindia Kannada News

ಬೆಂಗಳೂರು, ಮಾರ್ಚ್ 9: ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗಿದ್ದು, ಪೂರ್ವ ಪ್ರಾಥಮಿಕ (ನರ್ಸರಿ, ಎಲ್‌ಕೆಜಿ, ಯುಕೆಜಿ) ಶಾಲೆಗಳಿಗೆ ಇಂದಿನಿಂದ ಮುಂದಿನ ಆದೇಶದವರೆಗೂ ರಜೆ ಘೋಷಿಸಲಾಗಿತ್ತು.

Recommended Video

Karnataka Government Declared Holiday For primary (5th standard) Students | School Holiday

ಇದೀಗ, ಪ್ರಾಥಮಿಕ ಶಾಲೆಗಳಿಗೂ ರಜೆ ಘೋಷಿಸಲಾಗಿದೆ. 'ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಿದಂತೆ ಬಿಬಿಎಂಪಿ, ಬೆಂಗಳೂರು‌ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ಮುಂದಿನ ಆದೇಶದವರೆಗೆ ರಜೆ ಘೋಷಿಸಲಾಗಿದೆ' ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕೃತವಾಗಿ ಟ್ವೀಟ್ ಮಾಡಿದ್ದಾರೆ.

ಕೊರೊನಾ ಭೀತಿ: ಬೆಂಗಳೂರಿನ ಎಲ್‌ಕೆಜಿ, ಯುಕೆಜಿ ಶಾಲೆಗಳಿಗೆ ಇಂದಿನಿಂದ ರಜೆಕೊರೊನಾ ಭೀತಿ: ಬೆಂಗಳೂರಿನ ಎಲ್‌ಕೆಜಿ, ಯುಕೆಜಿ ಶಾಲೆಗಳಿಗೆ ಇಂದಿನಿಂದ ರಜೆ

ಇಂದು ಮಧ್ಯಾಹ್ನ ಕರ್ನಾಟಕದಲ್ಲಿ ಮೊಟ್ಟ ಮೊದಲ ಕೊರೊನಾ ಪ್ರಕರಣ ಪತ್ತೆಯಾಗಿದೆ. ಅಮೇರಿಕಾದಿಂದ ಬಂದ ಟೆಕ್ಕಿಗೆ ಕೊರೊನಾ ಸೋಂಕು ತಗುಲಿರುವುದು ಧೃಢವಾಗಿದೆ. ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಆ ವ್ಯಕ್ತಿ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ವ್ಯಕ್ತಿ ಜೊತೆಗೆ ಆ ಕುಟುಂಬದ ಸದಸ್ಯರನ್ನು ಪ್ರತ್ಯೇಕವಾಗಿ ನಿಗಾವಹಿಸಲಾಗಿದೆ.

Karnataka Declares Holiday for Primary Schools

ಕೊರೊನಾ ವೈರಸ್ ಭಾರತದಲ್ಲಿ ಮೊದಲು ಕಾಣಿಸಿಕೊಂಡಿದ್ದು ಕೇರಳದಲ್ಲಿ, ವುಹಾನ್‌ನಿಂದ ಒಟ್ಟಿಗೆ ಪ್ರಯಾಣಿಸಿದ್ದ ಮೂವರು ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿತ್ತು. ಅವರೆಲ್ಲರೂ ಈಗ ಗುಣಮುಖರಾಗಿದ್ದಾರೆ.

ಇನ್ನು ಭಾರತದಲ್ಲಿ ಇದುವರೆಗೂ ಒಟ್ಟು 43 ಕೊರೊನಾ ಕೇಸ್ ದಾಖಲಾಗಿದೆ. ಯಾವುದೇ ಸಾವು ಸಂಭವಿಸಿಲ್ಲ. ಜಗತ್ತಿನಾದ್ಯಂತ 1,11,650ಕ್ಕೂ ಹೆಚ್ಚು ಕೊರೊನಾ ಕೇಸ್ ಬೆಳಕಿಗೆ ಬಂದಿದ್ದು, 3886ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

English summary
Effect Of Coronavirus, Minister Dr Sudhakar announces that Karnataka Government Declared Holiday For primary (5th standard) Students From March 9.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X