ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಭೀತಿ: ಕುವೆಂಪು ವಿವಿಯ ಘಟಿಕೋತ್ಸವ ಮುಂದೂಡಿಕೆ

|
Google Oneindia Kannada News

ಕರ್ನಾಟಕ, ಮಾರ್ಚ್ 13: ಕರ್ನಾಟಕದಲ್ಲಿ ಕೊರೊನಾ ಆತಂಕ ಹೆಚ್ಚಾಗಿದೆ. ಪರಿಣಾಮ, ನಾಳೆಯಿಂದ ಒಂದು ವಾರ ಕಾಲ ರಾಜ್ಯಾದ್ಯಂತ ಎಲ್ಲಾ ಮಾಲ್ ಗಳು, ಸಿನಿಮಾ ಥಿಯೇಟರ್ ಗಳು, ಪಬ್, ಕ್ಲಬ್ ಗಳನ್ನು ಬಂದ್ ಮಾಡುವಂತೆ ಕರ್ನಾಟಕ ಸರ್ಕಾರ ಆದೇಶಿಸಿದೆ.

ಶಾಲಾ-ಕಾಲೇಜುಗಳು ಮತ್ತು ಎಲ್ಲಾ ವಿಶ್ವವಿದ್ಯಾನಿಲಯಗಳಿಗೂ ರಜೆ ನೀಡುವಂತೆ ರಾಜ್ಯ ಸರ್ಕಾರ ಸೂಚಿಸಿದೆ. ಈ ಹಿನ್ನಲೆಯಲ್ಲಿ ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಇದೇ ಮಾರ್ಚ್‌ 16 ಮತ್ತು 17 ಕ್ಕೆ ನಿಗದಿಯಾಗಿದ್ದ ಪ್ರತಿಭಾ ದಿನಾಚರಣೆ ಮತ್ತು ಕಾಲೇಜ್‌ ಡೇಯನ್ನು ರದ್ದು ಪಡಿಸಲಾಗಿದೆ.

ಮಾರ್ಚ್ 14ರಿಂದ ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ಆದೇಶಮಾರ್ಚ್ 14ರಿಂದ ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ಆದೇಶ

ಕೊರೊನಾ ವೈರಸ್‌ ಸಾಂಕ್ರಾಮಿಕವಾಗಿ ಹರಡುತ್ತಿರುವುದರಿಂದ ಜಿಲ್ಲಾಡಳಿತ ತುರ್ತು ಕಾರ್ಯಕ್ರಮಗಳನ್ನು ಮಾತ್ರ ನಡೆಸಲು ಸೂಚನೆ ನೀಡಿರುವುದರಿಂದ, ಯಾರಿಗೂ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ ಕಾರ್ಯಕ್ರಮ ಮುಂದೂಡಲು ಆಡಳಿತ ಮಂಡಳಿ ನಿರ್ಧರಿಸಿದೆ.

Coronavirus Scare: Mangalore And Kuvempu University Programs Have Postponed

ಇನ್ನೂ, ಕೋವಿಡ್-19 ಭೀತಿಯಿಂದ ಕುವೆಂಪು ವಿಶ್ವವಿದ್ಯಾಲಯದ 30ನೇ ವಾರ್ಷಿಕ ಘಟಿಕೋತ್ಸವವನ್ನೂ ಮುಂದೂಡಲಾಗಿದೆ.

''ಮಾರಣಾಂತಿಕ ಕೊರೊನಾ ಹರಡುವುದನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ಕಾಲೇಜು-ವಿವಿಗಳಲ್ಲಿ ಸಭೆ-ಸಮಾರಂಭಗಳನ್ನು ಹಮ್ಮಿಕೊಳ್ಳದಿರಲು ಯುಜಿಸಿ ಮತ್ತು ಕರ್ನಾಟಕ ಸರ್ಕಾರ ಸೂಚನೆ ನೀಡಿವೆ. ಹೀಗಾಗಿ ಮಾರ್ಚ್ 28ಕ್ಕೆ ನಿಗದಿಯಾಗಿದ್ದ ವಿವಿಯ ಘಟಿಕೋತ್ಸವವನ್ನು ಅನಿರ್ದಿಷ್ಠಾವಧಿಗೆ ಮುಂದೂಡಲಾಗಿದೆ ಮತ್ತು ವಿಶ್ವವಿದ್ಯಾಲಯದಲ್ಲಿ ನಡೆಯಲಿದ್ದ ವಿಚಾರ ಸಂಕಿರಣ, ಸಮಾವೇಶಗಳನ್ನು ಮುಂದೂಡಲಾಗಿದೆ'' ಎಂದು ವಿವಿಯ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ತಿಳಿಸಿದ್ದಾರೆ.

English summary
Coronavirus Scare: Mangalore and Kuvempu University programs have postponed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X