ಕರ್ನಾಟಕದಲ್ಲಿ 4 ಕೋಟಿ ಜನರಿಗೆ ಕೊರೊನಾವೈರಸ್ ಪರೀಕ್ಷೆ

ಬೆಂಗಳೂರು, ಆಗಸ್ಟ್ 11: ಕರ್ನಾಟಕವು ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ. ರಾಜ್ಯದಲ್ಲಿ 4 ಕೋಟಿಗೂ ಅಧಿಕ ಮಂದಿಗೆ ಕೊವಿಡ್-19 ಸೋಂಕಿನ ಪರೀಕ್ಷೆ ನಡೆಸಲಾಗಿದೆ.

"ಕರ್ನಾಟಕ 4 ಕೋಟಿ ಕೋವಿಡ್-19 ಪರೀಕ್ಷೆಗಳನ್ನು ಪೂರೈಸಿದ್ದು ಕೊರೊನಾ ವಿರುದ್ಧದ ಹೋರಾಟದಲ್ಲಿ ಮತ್ತೊಂದು ಮಹತ್ತರ ಮೈಲಿಗಲ್ಲು ಸಾಧಿಸಿದೆ. ರಾಜ್ಯದ ಒಟ್ಟು ಕೋವಿಡ್ ಪರೀಕ್ಷೆಗಳ ಪೈಕಿ ಶೇ.80% ಕ್ಕಿಂತ ಹೆಚ್ಚು ಆರ್ ಟಿ-ಪಿಸಿಆರ್ ಆಗಿದ್ದು, ಕರ್ನಾಟಕ ಇಡೀ ದೇಶದಲ್ಲೇ ಅತೀ ಹೆಚ್ಚು ಪರೀಕ್ಷೆಗಳು ನಡೆಸಿರುವ ರಾಜ್ಯಗಳಲ್ಲಿ ಮೂರನೇ ಸ್ಥಾನದಲ್ಲಿದೆ," ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.05ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 2.31ರಷ್ಟಿದೆ. ಕಳೆದ ಒಂದು ದಿನದಲ್ಲಿ 1338 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1947 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 31 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 36848 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2921049ಕ್ಕೆ ಏರಿಕೆಯಾಗಿದೆ. ಒಟ್ಟು 2861499 ಸೋಂಕಿತರು ಗುಣಮುಖರಾಗಿದ್ದು. 22676 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Coronavirus tests: COVID-19 tests breach four crore mark in Karnataka

ರಾಜ್ಯ ರಾಜಧಾನಿಯಲ್ಲಿ 315 ಜನರಿಗೆ ಕೊವಿಡ್-19:

ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 315 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1231097ಕ್ಕೆ ಏರಿಕೆಯಾಗಿದೆ. 3 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15918ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 8398 ಸಕ್ರಿಯ ಪ್ರಕರಣಗಳಿವೆ.

ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?:

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 35614 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 90,786 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,26,400 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 74,36,330 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,26,68,585 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,01,04,915 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?:

ರಾಜ್ಯದಲ್ಲಿ ಒಟ್ಟು 1338 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 1, ಬಳ್ಳಾರಿ 3, ಬೆಳಗಾವಿ 21, ಬೆಂಗಳೂರು ಗ್ರಾಮಾಂತರ 11 ಬೆಂಗಳೂರು 315, ಬೀದರ್ 5, ಚಾಮರಾಜನಗರ 18, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 93, ಚಿತ್ರದುರ್ಗ 12, ದಕ್ಷಿಣ ಕನ್ನಡ 378, ದಾವಣಗೆರೆ 7, ಧಾರವಾಡ 16, ಗದಗ 0, ಹಾಸನ 47, ಹಾವೇರಿ 5, ಕಲಬುರಗಿ 5, ಕೊಡಗು 50, ಕೋಲಾರ 16, ಕೊಪ್ಪಳ 3, ಮಂಡ್ಯ 26, ಮೈಸೂರು 71, ರಾಯಚೂರು 1, ರಾಮನಗರ 6, ಶಿವಮೊಗ್ಗ 48, ತುಮಕೂರು 18, ಉಡುಪಿ 92, ಉತ್ತರ ಕನ್ನಡ 61, ವಿಜಯಪುರ 3, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?:

ರಾಜ್ಯದಲ್ಲಿ ಈವರೆಗೂ 7,61,764 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,56,595 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,32,514 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 3,83,145 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,25,07,598 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 56,64,438 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 2,59,23,692 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 74,76,414 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Recommended Video

      ಕೊರೋನ ಮೂರನೇ ಅಲೆ ಶುರು! | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+