ಎಚ್ಚರಿಕೆ: ಕರ್ನಾಟಕದಲ್ಲಿ ಕೊರೊನಾವೈರಸ್ 3ನೇ ಅಲೆಗೆ ಒಂದೇ ತಿಂಗಳು ಬಾಕಿ!?

ಬೆಂಗಳೂರು, ಸೆಪ್ಟೆಂಬರ್ 12: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ನಿಟ್ಟಿನಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸುವುದು ಅತ್ಯಗತ್ಯವಾಗಿದೆ ಎಂದು ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಅಕ್ಟೋಬರ್ ಮತ್ತು ನವೆಂಬರ್ ತಿಂಗಳ ಹೊತ್ತಿಗೆ ಮೂರನೇ ಅಲೆ ಆರಂಭವಾಗಲಿದೆ. ಅಷ್ಟರಲ್ಲಿ ಕೊವಿಡ್-19 ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸುದಕ್ಕೆ ಸಲಹೆ ನೀಡಿದ್ದಾರೆ. "ಈ ಹಂತದಲ್ಲಿ ಮಾರ್ಗಸೂಚಿಗಳನ್ನು ಅನುಸರಿಸದಿದ್ದರೆ ಅದು ಸಂಪೂರ್ಣ ಅವ್ಯವಸ್ಥೆವಾಗುತ್ತದೆ," ಎಂದು ಹೇಳಿದ್ದಾರೆ.

ಒಂದು ವೇಳೆ ಕರ್ನಾಟಕದಲ್ಲಿ ಪ್ರತಿನಿತ್ಯ ದಾಖಲಾಗುತ್ತಿರುವ ಕೊವಿಡ್-19 ಸೋಂಕಿತ ಪ್ರಕರಣಗಳು ಇಳಿಮುಖವಾದಲ್ಲಿ ನಿರ್ಲಕ್ಷ್ಯ ತೋರುವಂತಿಲ್ಲ. ಹಬ್ಬ ಮತ್ತು ಆಚರಣೆಗಳಿಗೆ ಅನುಮತಿ ನೀಡುವ ಮೂಲಕ ಕೊರೊನಾವೈರಸ್ ಮೂರನೇ ಅಲೆಗೆ ದಾರಿ ಮಾಡಿಕೊಟ್ಟಂತೆ ಆಗುತ್ತದೆ ಎಂದು ಎಚ್ಚರಿಸಿದ್ದಾರೆ.

ಕೊರೊನಾವೈರಸ್ ಬಗ್ಗೆ ಆಗಸ್ಟ್ ತಿಂಗಳಿನಲ್ಲೇ ಎಚ್ಚರಿಕೆ

ಕೊರೊನಾವೈರಸ್ ಬಗ್ಗೆ ಆಗಸ್ಟ್ ತಿಂಗಳಿನಲ್ಲೇ ಎಚ್ಚರಿಕೆ

ಕಳೆದ ಆಗಸ್ಟ್ 28 ರಂದೇ ಕೊರೊನಾವೈರಸ್ ಸೋಂಕು ಹರಡುವಿಕೆ ಬಗ್ಗೆ ಕೇಂದ್ರ ಸರ್ಕಾರವು ಎಚ್ಚರಿಕೆ ನೀಡಿತ್ತು. ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಯಾವುದೇ ದೊಡ್ಡ ಔತಣಕೂಟ ಮತ್ತು ಸಭೆ ಸಮಾರಂಭಗಳಿಗೆ ಅವಕಾಶ ನೀಡದಂತೆ ಜಾಗೃತಿ ವಹಿಸಬೇಕು. ಕೊವಿಡ್-19 ಸೋಂಕು ಹರಡುವಿಕೆಯನ್ನು ಪರೀಕ್ಷಿಸುವುದಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸರ್ಕಾರವು ಖಡಕ್ ಸೂಚನೆಯನ್ನು ನೀಡಿತ್ತು. "ಕೊರೊನಾವೈರಸ್ ಸೋಂಕಿನ ಲಕ್ಷಣಗಳನ್ನು ಮತ್ತು ಎಚ್ಚರಿಕೆಯ ಚಿಹ್ನೆಗಳನ್ನು ಮೊದಲೇ ಗುರುತಿಸಬೇಕು. ಆ ಮೂಲಕ ಸೋಂಕು ಹರಡುವುದನ್ನು ತಡೆಯಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. "ಕಳೆದ ಏಪ್ರಿಲ್ 25 ಮತ್ತು ಜೂನ್ 28ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ (ಮೊಹೆಚ್‌ಎಫ್‌ಡಬ್ಲ್ಯೂ) ಸಲಹೆಗಳಲ್ಲಿ ಉಲ್ಲೇಖಿಸಿರುವಂತೆ ಸಲಹೆ ಸೂಚನೆಗಳನ್ನು ಸ್ಥಳೀಯ ಮಟ್ಟದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸುವ ಅಗತ್ಯವಿದೆ," ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ತಿಳಿಸಿದ್ದಾರೆ. ಸೆಪ್ಟೆಂಬರ್ 30ರವರೆಗೂ ಮಾರ್ಗಸೂಚಿಗಳನ್ನು ವಿಸ್ತರಿಸಿದ್ದರು.

ಕೊವಿಡ್-19 ಕ್ಲಸ್ಟರ್ ಗುರುತು ಹಾಕಿಕೊಂಡ ಇಲಾಖೆ

ಕೊವಿಡ್-19 ಕ್ಲಸ್ಟರ್ ಗುರುತು ಹಾಕಿಕೊಂಡ ಇಲಾಖೆ

ಹೊರಮಾವು ನರ್ಸಿಂಗ್ ಕಾಲೇಜು ಸೇರಿದಂತೆ ಬೆಂಗಳೂರು ಮತ್ತು ಮಂಗಳೂರಿನ ಕೆಲವು ಅಪಾರ್ಟ್ ಮೆಂಟ್ ಅನ್ನು ಕೊವಿಡ್-19 ಕ್ಲಸ್ಟರ್ ಎಂದು ಗುರುತಿಸಿಕೊಳ್ಳಲಾಗಿದೆ. ನ್ಯೂ ಇಂಡಿಯನ್ ಎಕ್ಸ್ ಪ್ರಸ್ ಪತ್ರಿ ವರದಿ ಪ್ರಕಾರ, ಕಳೆದ 2021ರ ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಅವಧಿಯಲ್ಲೇ ಇದೇ ಪರಿಸ್ಥಿತಿ ಸೃಷ್ಟಿಯಾಗಿತ್ತು. ಅದು ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಗೆ ಕಾರಣವಾಗಿತ್ತು. ಇದೇ ತಿಂಗಳ ಆರಂಭದಲ್ಲಿ ಬೆಂಗಳೂರಿನ ಹೊರಮಾವು ಪ್ರದೇಶದ ಕ್ರಿಶ್ಚಿಯನ್ ನರ್ಸಿಂಗ್ ಕಾಲೇಜಿನಲ್ಲಿ 34 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ ಹಿನ್ನೆಲೆ ಸಂಸ್ಥೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು. ಈ ಬೆಳವಣಿಗೆ ನಂತರದಲ್ಲೇ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವ ವಿದ್ಯಾರ್ಥಿಗಳ ಬಗ್ಗೆ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಆತಂಕ ವ್ಯಕ್ತಪಡಿಸಿದ್ದರು.

ಗಣೇಶ ಹಬ್ಬ ಆಚರಣೆ ನಂತರದಲ್ಲಿ ಪರಿಸ್ಥಿತಿ ಹೇಗಿರುತ್ತೆ?

ಗಣೇಶ ಹಬ್ಬ ಆಚರಣೆ ನಂತರದಲ್ಲಿ ಪರಿಸ್ಥಿತಿ ಹೇಗಿರುತ್ತೆ?

ಕರ್ನಾಟಕದಲ್ಲಿ ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರವು ಷರತ್ತುಬದ್ಧ ಅನುಮತಿ ನೀಡಿದೆ. ಅದರ ಹೊರತಾಗಿಯೂ ಕೊವಿಡ್-19 ಮಾರ್ಗಸೂಚಿಗಳ ಪಾಲನೆಯಲ್ಲಿ ಸಾರ್ವಜನಿಕರು ನಿರ್ಲಕ್ಷ್ಯ ತೋರುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಗಣೇಶೋತ್ಸವ ಆಚರಣೆ ನಂತರದಲ್ಲಿ ಕೊರೊನಾವೈರಸ್ ಸ್ಥಿತಿಗತಿಗಳನ್ನು ನೋಡಿಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ತಿಳಿಸುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ ಇಳಿಮುಖ

ರಾಜ್ಯದಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ ಇಳಿಮುಖ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಆತಂಕವು ರಾಜ್ಯದಲ್ಲಿ ಇಳಿಮುಖವಾಗಿದೆ. ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಕೊವಿಡ್-19 ಪಾಸಿಟಿವಿಟಿ ದರವು ಶೇ.2ರಷ್ಟಿದೆ. ಕೇರಳ ಮತ್ತು ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲೂ ವಾರಾಂತ್ಯದ ನಿಷೇಧಾಜ್ಞೆಯನ್ನು ತೆರೆವುಗೊಳಿಸಲಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳನ್ನು ಹೆಚ್ಚು ವರದಿ ಮಾಡುತ್ತಿರುವ ಕೇರಳ ಮತ್ತು ಮಹಾರಾಷ್ಟ್ರದಿಂದ ಆಗಮಿಸಿರುವ ಪ್ರಯಾಣಿಕರಿಗೆ ಸರ್ಕಾರದ ನಿರ್ಬಂಧಗಳನ್ನು ಅಕ್ಟೋಬರ್ 30ರವರೆಗೂ ವಿಸ್ತರಿಸಲಾಗಿದೆ.

ಕರ್ನಾಟಕದಲ್ಲಿ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.67ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.87ರಷ್ಟಿದೆ. ರಾಜ್ಯದಲ್ಲಿ ಒಂದು ದಿನದಲ್ಲಿ 801 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1142 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 15 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 37487 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಶನಿವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2960932ಕ್ಕೆ ಏರಿಕೆಯಾಗಿದೆ. ಒಟ್ಟು 2906746 ಸೋಂಕಿತರು ಗುಣಮುಖರಾಗಿದ್ದು. 16672 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Recommended Video

    ವಿರಾಟ್ ಕೊಹ್ಲಿ ಬದಲಿಗೆ ಹೊಸ ನಾಯಕನಾಗಿ ರೋಹಿತ್ ಶರ್ಮಾ | Oneindia Kannada
    ಕೊವಿಡ್-19 ಪರೀಕ್ಷೆ ಮತ್ತು ಸೋಂಕಿತ ಪ್ರಕರಣಗಳು

    ಕೊವಿಡ್-19 ಪರೀಕ್ಷೆ ಮತ್ತು ಸೋಂಕಿತ ಪ್ರಕರಣಗಳು

    ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 17,191 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,02,312 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,19,503 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 84,26,144 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,67,68,608 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,51,94,752 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

    ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

    ರಾಜ್ಯದಲ್ಲಿ ಒಟ್ಟು 801 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 1, ಬಳ್ಳಾರಿ 4, ಬೆಳಗಾವಿ 93, ಬೆಂಗಳೂರು ಗ್ರಾಮಾಂತರ 6 ಬೆಂಗಳೂರು 207, ಬೀದರ್ 2, ಚಾಮರಾಜನಗರ 6, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 39, ಚಿತ್ರದುರ್ಗ 2, ದಕ್ಷಿಣ ಕನ್ನಡ 133, ದಾವಣಗೆರೆ 8, ಧಾರವಾಡ 1, ಗದಗ 0, ಹಾಸನ 17, ಹಾವೇರಿ 0, ಕಲಬುರಗಿ 6, ಕೊಡಗು 59, ಕೋಲಾರ 2, ಕೊಪ್ಪಳ 1, ಮಂಡ್ಯ 12, ಮೈಸೂರು 47, ರಾಯಚೂರು 2, ರಾಮನಗರ 0, ಶಿವಮೊಗ್ಗ 30, ತುಮಕೂರು 26, ಉಡುಪಿ 86, ಉತ್ತರ ಕನ್ನಡ 11, ವಿಜಯಪುರ 0, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+