ನಿಗಮ ಮಂಡಳಿ ನೇಮಕಾತಿ ಫೈನಲ್ ಪಟ್ಟಿ ದೆಹಲಿಗೆ, ಯಾರಿಗೆ ನಿಗಮಾಧ್ಯಕ್ಷ ಭಾಗ್ಯ?

ಬೆಂಗಳೂರು, ನವೆಂಬರ್ 29 : 2024 ರ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳನ್ನ ಗೆಲ್ಲುವ ಟಾರ್ಗೆಟ್‌ ಹಾಕಿಕೊಂಡಿರುವ ಕೈ ಪಡೆ, ಮೊದಲು ಪಕ್ಷದಲ್ಲಿನ ಅಸಮಾಧಾನವನ್ನ ಶಮನಗೊಳಿಸಲು ನಿಗಮ ಮಂಡಳಿ ರಚನೆಗೆ ಮುಂದಾಗಿದೆ.

ಹೌದು, ನಿಗಮ-ಮಂಡಳಿ ಹುದ್ದೆ ನೇಮಕಾತಿ ಸಂಬಂಧಿಸಿದಂತೆ ಹಲವು ಸುತ್ತಿನ ಸಭೆಯನ್ನ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೆವಾಲಾ ನಡೆಸಿದ್ದು, ಅಂತಿಮ ಸಭೆ ಮಂಗಳವಾರ ನಡೆದಿದ್ದು,ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8ಗಂಟೆ ವರೆಗೂ ಸಭೆ ನಡೆಯಲಿದೆ. ಇನ್ನೂ ನಿಗಮ-ಮಂಡಳಿ ಹುದ್ದೆ ನೇಮಕಾತಿ ಸಂಬಂಧ ಮೊದಲ ಹಂತದ ಪಟ್ಟಿ ಬಹುತೇಕ ಅಂತಿಮಗೊಂಡಿದೆ.

Corporation Board Appointment: Siddaramaiah Said List Sent To Congress Highcommand

ಈಗಾಗಲೇ ಪಕ್ಷಕ್ಕಾಗಿ ದುಡಿದ ಸಾಕಷ್ಟು ಜನ ಕಾರ್ಯಕರ್ತರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರಿಗೆ ಪತ್ರ ಬರೆದಿದ್ದು, ನಮಗೂ ಸಹ ನಿಗಮ ಮಂಡಳಿಯಲ್ಲಿ ಸ್ಥಾನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಇತ್ತ ಸಂಭಾವ್ಯರ ಪಟ್ಟಿಯಲ್ಲಿರುವ ಶಾಸಕರು ಹಾಗೂ ನಾಯಕರ ಅಭಿಪ್ರಾಯಗಳನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸಂಗ್ರಹಿಸಿದ್ದು, ಈ ಅಭಿಪ್ರಾಯಗಳನ್ನು ಆಧಾರವಾಗಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೊಂದಿಗೆ ಸುರ್ಜೇವಾಲಾ ಅವರು ಅಂತಿಮ ಸಭೆಯಲ್ಲಿ ಪಟ್ಟಿಯನ್ನ ಪೈನಲ್‌ ಮಾಡಿದ್ದಾರೆ ಎನ್ನಲಾಗಿದೆ.

ಇನ್ನೂ ಮೊದಲ ಹಂತದಲ್ಲಿ 25 ಮಂದಿ ಸಂಭಾವ್ಯರ ಪಟ್ಟಿ ಈಗಾಗಲೇ ಸಿದ್ಧವಾಗಿದೆ.ಇದರಲ್ಲಿ ಕೆಲವರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದು ನಿಗಮ-ಮಂಡಳಿ ಹುದ್ದೆ ಬೇಡ ಎನ್ನುವ ಮಾತುಗಳನ್ನಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ನಾಯಕರು ಹಾಗೂ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಿದ್ದಾರೆ.

ಮೊದಲ ಹಂತದ ಪಟ್ಟಿಯಲ್ಲಿರುವ 25 ಮಂದಿಯೂ ಶಾಸಕರು ಹಾಗೂ ವಿಧಾನಪರಿಷತ್‌ ಸದಸ್ಯರೇ ಆಗಿದ್ದಾರೆ. ಇನ್ನು ಲೋಕಸಭೆ ಚುನಾವಣೆ ದೃಷ್ಟಿಯಿಂದ 15 ಕಾರ್ಯಕರ್ತರ ಪಟ್ಟಿಯನ್ನೂ ಅಂತಿಮಗೊಳಿಸುವ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಅಲ್ಲದೇ ಸಚಿವ ಸ್ಥಾನದಿಂದ ವಂಚಿತರಾದ ಶಾಸಕರ ಜೊತೆಗೆ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್‌ ಹಾಗೂ ಕಾಂಗ್ರೆಸ್‌ ಉಸ್ತುವಾರಿ ಸುರ್ಜೆವಾಲಾ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

Corporation Board Appointment: Siddaramaiah Said List Sent To Congress Highcommand

ನಿಗಮ ಮಂಡಳಿ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಹೌದು, ಲೋಕಸಭಾ ಚುನಾವಣೆಯಲ್ಲಿ ಪಕ್ಷದಲ್ಲಿರುವ ಅಸಮಾಧಾನವನ್ನ ಶಮನಗೊಳಿಸಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಅಂತಿಮವಾಗಿ ಮಂಗಳವಾರ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ಅವರ ಜೊತೆಗೆ ಚರ್ಚಿಸಿದ್ದು, ನಿಗಮ ಮಂಡಳಿ ಪಟ್ಟಿ ಫೈನಲ್‌ ಆಗಿದೆ. ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ವಿಚಾರದಲ್ಲಿ ಪಕ್ಷದ ವರಿಷ್ಠರಿಗೆ ಅಂತಿಮ ಪಟ್ಟಿಯನ್ನು ಕಳುಹಿಸಿಕೊಡಲಾಗಿದೆ. ಅವರು ಒಪ್ಪಿಗೆ ನೀಡಿದ ನಂತರ ನೇಮಕಾತಿ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಿಗಮ ಮಂಡಳಿಯ ಸಂಭಾವ್ಯ ಪಟ್ಟಿ ಇಲ್ಲಿದೆ?

ಪಿ.ಎಂ ನರೇಂದ್ರ ಸ್ವಾಮಿ

ರಮೇಶ್ ಬಾಬು ಬಂಡಿಸಿದ್ದೇಗೌಡ

ಅನಿಲ್ ಚಿಕ್ಕಮಾದು

ಟಿ.ಡಿ ರಾಜೇಗೌಡ

ಶಿವಲಿಂಗೇಗೌಡ

ಬಿ.ಕೆ ಸಂಗಮೇಶ್

ಬಂಗಾರಪೇಟೆ ನಾರಾಯಣಸ್ವಾಮಿ

ಕೆ.ವೈ ನಂಜೇಗೌಡ

ಬಿ.ಆರ್ ಪಾಟೀಲ್

ಗಣೇಶ್ ಹುಕ್ಕೇರಿ

ಮಹಾಂತೇಶ್ ಕೌಜಲಗಿ

ಯಶವಂತ್ ರಾಯ್ ಗೌಡ ಪಾಟೀಲ್

ಬಿ.ಜಿ ಗೋವಿಂದಪ್ಪ

ರಾಘವೇಂದ್ರ ಹಿಟ್ನಾಳ್

ರಘುಮೂರ್ತಿ

ಭೀಮಣ್ಣ ನಾಯ್ಕ್

ಸತೀಶ್ ಸೈಲ್

ಪ್ರಸಾದ್ ಅಬ್ಬಯ್ಯ

ಜಿ.ಟಿ ಪಾಟೀಲ್

ಡಿ.ಆರ್ ಪಾಟೀಲ್

ಬಸನಗೌಡ ತುರುವಿಹಾಳ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+