ಕಾರ್ಯಕರ್ತರಿಗೆ ಕಾಂಗ್ರೆಸ್ ಗುಡ್ ನ್ಯೂಸ್: ಮೂರ್ನಾಲ್ಕು ದಿನಗಳಲ್ಲಿ ನಿಗಮ ಮಂಡಳಿ ಪಟ್ಟಿ ಬಿಡುಗಡೆ!
ಬೆಂಗಳೂರು, ಜುಲೈ 31: ರಾಜ್ಯ ಕಾಂಗ್ರೆಸ್‌ನಲ್ಲಿ ಭಾರೀ ಬದಲಾವಣೆಯಾಗಲಿದೆ ಎನ್ನುವ ಮಾತುಗಳು ಬಹುದಿನಗಳಿಂದ ಕೇಳಿ ಬರುತ್ತಿದೆ. ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಎಂಬ ಚರ್ಚೆ ಹಲವು ದಿನಗಳಿಂದ ಹರಿದಾಡಿ ಹಾಗೇ ತಣ್ಣಗಾಗುತ್ತಿತ್ತು. ಅದೇ ರೀತಿ, ಇದೀಗ ರಾಜ್ಯ ಕಾಂಗ್ರೆಸ್ ಕಾರ್ಯಕರ್ತರಿಗೆ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯ ಬಗ್ಗೆಯೂ ಚರ್ಚೆ ನಡೆಯುತ್ತಿದ್ದು, ಶಾಸಕರನ್ನ ಹಾಗೂ ಕಾರ್ಯಕರ್ತರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ. ಈ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಗ್ ಅಪ್ ಡೇಟ್ ನೀಡಿದ್ದಾರೆ.
ನಿಗಮ ಮಂಡಳಿ ವಿಚಾರವಾಗಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಸರ್ಕಾರ ಬಂದ ನಂತರ ನಾವು ಕಾರ್ಯಕರ್ತರಿಗೆ ಅನೇಕ ಜವಾಬ್ದಾರಿ ನೀಡಿದ್ದೇವೆ. ಗ್ಯಾರಂಟಿ ಸಮಿತಿ, ನಾಮನಿರ್ದೇಶನ ಮಾಡಿದ್ದೇವೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮತ್ತಷ್ಟು ಜನರಿಗೆ ಜವಾಬ್ದಾರಿ ನೀಡಿ ನಿಗಮ ಮಂಡಲಿ ಪಟ್ಟಿ ಹೊರಬರಲಿದೆ. ಈಗಾಗಲೇ ಅದು ಸಿದ್ಧವಾಗುತ್ತಿದೆ. ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ಇಬ್ಬರಂತೆ ಸುಮಾರು 700 ಜನರಿಗೆ ಸ್ಥಾನಮಾನ ನೀಡಲು ಮುಂದಾಗಿದ್ದೇವೆ. ಉಳಿದ 30 ಜನರಿಗೆ ಕೆಲವು ನಿಗಮ ಮಂಡಳಿ, ಮತ್ತೆ ಕೆಲವರಿಗೆ ಉಪಾಧ್ಯಕ್ಷ ಹುದ್ದೆ ನೀಡಲಾಗುತ್ತಿದೆ. ಪಟ್ಟಿ ಹೈಕಮಾಂಡ್ ಬಳಿಗೆ ಹೋಗಿದ್ದು, ಅವರು ಅಂತಿಮ ತೀರ್ಮಾನ ಮಾಡಲಿದ್ದಾರೆ ಎಂದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಯಾರೆಲ್ಲಾ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಪರಿಶೀಲಿಸಿದ್ದಾರೆ. ನಮ್ಮ ಪಕ್ಷದಲ್ಲಿ ಸುಮಾರು 4-5 ಸಾವಿರ ಜನ ಈ ಸ್ಥಾನಮಾನಕ್ಕೆ ಅರ್ಹತೆ ಹೊಂದಿರುವವರು ಇದ್ದಾರೆ ಎಂದು ತಿಳಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಪರಾಜಿತ ಅಭ್ಯರ್ಥಿ ಹಾಗೂ ಶಾಸಕರ ಜತೆ ನೇರವಾಗಿ ಮಾತನಾಡಿ ಹೆಸರು ಪಡೆದಿದ್ದಾರೆ. ನಾವು ನಮ್ಮ ಸಲಹೆ ನೀಡಿದ್ದೇವೆ. ಈಗ ಕೆಲವರಿಗೆ ಸಿಗದೇ ಇರಬಹುದು. ಮುಂದೆ ನಾವು ಎರಡನೇ ಬಾರಿಗೆ ಮಾಡಿದಾಗ ಅವಕಾಶ ನೀಡುತ್ತೇವೆ. ಎಲ್ಲಾ ಸಮುದಾಯದವರಿಗೆ ಸಮಾನ ಅವಕಾಶ ನೀಡಲು ಚರ್ಚೆ ನಡೆಯುತ್ತಿದೆ. ಹೀಗಾಗಿ ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ.
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಗುರುವಾರ ಮಧ್ಯಾಹ್ನ 1 ಗಂಟೆಗೆ ಪಕ್ಷದ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಎಂಎಲ್ಎ ಹಾಗೂ ಎಂಪಿ ಅಭ್ಯರ್ಥಿಗಳು, ಎಂಎಲ್ ಸಿಗಳು, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರ ಜೊತೆ ಸಭೆ ಮಾಡಲಿದ್ದಾರೆ. ಪ್ರತಿಯೊಬ್ಬರಿಗೂ ಜವಾಬ್ದಾರಿ ನೀಡಲಿದ್ದಾರೆ. ನಮ್ಮ ಈ ಹೋರಾಟ ಬಿಹಾರದ ಚುನಾವಣೆಗಾಗಿ ಎಂದು ಕೆಲವು ಮಾಧ್ಯಮಗಳು ಹೇಳುತ್ತಿವೆ. ಆದರೆ ನಾವು ಬಿಹಾರ ಚುನಾವಣೆಗೆ ಮಾಡುತ್ತಿಲ್ಲ. ನಮ್ಮ ರಾಜ್ಯದಲ್ಲಿ ನಡೆದ ಚುನಾವಣೆಯಲ್ಲಿ ಹೇಗೆ ಅಕ್ರಮವಾಗಿದೆ, ಚುನಾವಣಾ ಆಯೋಗದಿಂದ ಆಗಿರುವ ಅನ್ಯಾಯದ ಬಗ್ಗೆ ಜನರಿಗೆ ತಿಳಿಸಬೇಕು. ನಮ್ಮ ನಾಯಕರು ಬಂದಾಗ ದೊಡ್ಡ ಸಂಖ್ಯೆಯಲ್ಲಿ ಸಂಘಟನೆ ಮಾಡಬೇಕು. ನಾನು ಈ ವಿಚಾರವಾಗಿ ಸಿಎಂ ಹಾಗೂ ಗೃಹ ಸಚಿವರ ಜೊತೆ ಚರ್ಚೆ ಮಾಡಿದ್ದೇನೆ ಎಂದು ತಿಳಿಸಿದರು.
ನಮ್ಮ ರಾಜ್ಯದ ಚುನಾವಣೆಯಲ್ಲಿ ಆಗಿರುವ ಅಕ್ರಮ, ಚುನಾವಣಾ ಆಯೋಗದಿಂದ ಆಗಿರುವ ಅನ್ಯಾಯವನ್ನು ಜನರಿಗೆ ಮನದಟ್ಟು ಮಾಡಬೇಕು. ನಮ್ಮ ಮತ, ನಮ್ಮ ಹಕ್ಕು ರಕ್ಷಣೆ ಮಾಡಿಕೊಳ್ಳಲು ಸಿದ್ಧರಾಗಬೇಕು. ಸಧ್ಯ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ನಡೆಸುವಾಗ ಮತದಾನ, ಮತಗಟ್ಟೆ, ಮತದಾರರ ಪಟ್ಟಿ ಎಲ್ಲವೂ ಚರ್ಚೆಯಾಗುತ್ತಿದೆ. ನಮ್ಮ ರಾಜ್ಯದಲ್ಲೂ ವಿಧಾನಸಭೆ ಚುನಾವಣೆ ವೇಳೆ ಮತದಾನದ ಅಕ್ರಮದ ಬಗ್ಗೆ ಸಂಶೋಧನೆ ಮಾಡಿದ್ದೆವು. ಬಿಜೆಪಿಯವರು ಚಿಲುಮೆ ಹಾಗೂ ಇತರೆ ಸಂಸ್ಥೆಗಳ ದುರ್ಬಳಕೆ ಮೂಲಕ ಅಕ್ರಮ ಮಾಡಲು ಮುಂದಾಗಿದ್ದರು. ಅದನ್ನು ನಾವು ಸಂಪೂರ್ಣವಾಗಿ ತಡೆಯಲು ಆಗಲಿಲ್ಲ. ಬಿಜೆಪಿಯವರು ತಮ್ಮ ಕಾರ್ಯಕರ್ತರಿಗೆ ಚುನಾವಣಾ ಆಯೋಗದ ಗುರುತಿನ ಚೀಟಿ ನೀಡಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಅಕ್ರಮ ಎಸಗಿದ್ದರು. ಇದರಿಂದ ಬೆಂಗಳೂರಿನಲ್ಲಿ ಹೆಚ್ಚುಕಮ್ಮಿ ಆಗಿತ್ತು ಎಂದರು.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications