ಕಾಂಗ್ರೆಸ್ ಕಾರ್ಯಕರ್ತರಿಗೆ ಗುಡ್ ನ್ಯೂಸ್: ನಿಗಮ ಮಂಡಳಿ ಸದಸ್ಯರ ನೇಮಕ!
ಬೆಂಗಳೂರು, ನವೆಂಬರ್ 08: ರಾಜ್ಯ ಕಾಂಗ್ರೆಸ್ನಲ್ಲಿ ನವೆಂಬರ್ ಕ್ರಾಂತಿಯಾಗಲಿದೆ ಎನ್ನುವ ಗುಸು ಗುಸು ಖೆಳಿ ಬರುತ್ತಿದೆ. ಅಲ್ಲದೇ ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಕುರಿತು ದೆಹಲಿ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ನಡುವೆ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವ ಸಂಪುಟ ಪುನಾರಚನೆ ಚರ್ಚೆಯ ನಡುವೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ನಿಗಮ ಮಂಡಳಿ ಸದಸ್ಯರ ನೇಮಕದ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, ಈಗಾಗಲೇ 3 ಸಾವಿರ ಕಾರ್ಯಕರ್ತರಿಗೆ ಅಧಿಕಾರ ನೀಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 15 ಜನರಿಗೆ ಗ್ಯಾರಂಟಿ ಸಮಿತಿ ಜವಾಬ್ದಾರಿ ನೀಡಿದ್ದೇವೆ. ಪ್ರತಿ ಕ್ಷೇತ್ರಗಳಲ್ಲಿ 60 ಜನರನ್ನು ನಾಮನಿರ್ದೇಶನ ಮಾಡಿದ್ದೇವೆ. ರಾಜ್ಯ ಮಟ್ಟದಲ್ಲಿ ನಿಗಮ ಮಂಡಳಿಗಳಲ್ಲಿ 600 ಸ್ಥಾನಗಳಿವೆ. ಇವುಗಳನ್ನು ಇನ್ನೊಂದು ವಾರದಲ್ಲಿ ಪ್ರಕಟಿಸುತ್ತೇವೆ ಎಂದು ತಿಳಿಸಿದರು.

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿರುವ ಕ್ಷೇತ್ರದಲ್ಲಿ ಓರ್ವ ಮಹಿಳೆ ಬಳಿ 200 ಮತಗಳಿವೆ ಎಂದು ಆರೋಪ ಮಾಡಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮತಪೆಟ್ಟಿಗೆಯಲ್ಲಿ 49 ಶೂನ್ಯಕ್ಕೆ ಸಮ, 51 ನೂರಕ್ಕೆ ಸಮ. ಕಾಂಗ್ರೆಸ್ ಅಭ್ಯರ್ಥಿಯಾದರೇನು, ಬಿಜೆಪಿ ಅಭ್ಯರ್ಥಿಯಾದರೇನು. ಎಲ್ಲಿ ಅಕ್ರಮ ನಡೆಡಿದೆಯೋ ಅದರ ಬಗ್ಗೆ ಮಾತನಾಡಿದ್ದೇವೆ. ಕೆಲವು ಕಡೆ ಅಕ್ರಮವನ್ನು ಮೀರಿ ನಾವು ಗೆದ್ದಿದ್ದೇವೆ. ಆಳಂದದಲ್ಲಿ ನಮ್ಮ ಅಭ್ಯರ್ಥಿ ಈ ಷಡ್ಯಂತ್ರ ಮೀರಿ ಗೆಲುವು ಸಾಧಿಸಿದ್ದಾರೆ. ಹರಿಯಾಣದಲ್ಲಿ ಆಗಿರುವ ಅಕ್ರಮದ ಬಗ್ಗೆ ರಾಹುಲ್ ಗಾಂಧಿ ಸಾಕ್ಷಿ ಸಮೇತ ಬಯಲು ಮಾಡಿದ್ದಾರೆ. ಆದರೂ ಆಯೋಗ ಯಾಕೆ ಇದನ್ನು ತಡೆಗಟ್ಟುತ್ತಿಲ್ಲ. ಈಗಿರುವ ತಂತ್ರಜ್ಞಾನದಲ್ಲಿ ಈ ಅಕ್ರಮ ತಡೆಯಲು ಯಾಕೆ ಸಾಧ್ಯವಾಗಿಲ್ಲ? ಚುನಾವಣಾ ಆಯೋಗವು ಈ ಅಕ್ರಮದಲ್ಲಿ ಭಾಗಿಯಾಗಿದೆ ಎಂದು ತಿಳಿಸಿದರು.
ಸಂವಿಧಾನದಲ್ಲಿ ಗೌಪ್ಯ ಮತದಾನ ಎಂದು ಇರುವಾಗ ಮತಗಟ್ಟೆಗಳ ಸಿಸಿಟಿವಿ ದೃಶ್ಯಗಳನ್ನು ನೀಡಬೇಕು ಎಂದು ರಾಹುಲ್ ಗಾಂಧಿ ಅವರು ಹೇಗೆ ಕೇಳುತ್ತಾರೆ ಎಂಬ ಬಗ್ಗೆ ಮಾತನಾಡಿ, ಮತದಾರ ಯಾರಿಗೆ ಮತಹಾಕಿದ ಎಂದು ತೋರಿಸದಿದ್ದರೂ, ಮತಗಟ್ಟೆಯೊಳಗೆ ಎಷ್ಟು ಮತದಾರರು ಹೋದರು, ಯಾವ ಸಮಯದಲ್ಲಿ ಹೋದರು ಎಂಬ ಮಾಹಿತಿ ನೀಡಲು ಸಮಸ್ಯೆ ಏನು? ಮಹಾರಾಷ್ಟ್ರದಲ್ಲಿ ಕೊನೆ ಒಂದು ಗಂಟೆ ಅವಧಿಯಲ್ಲಿ ಲಕ್ಷಾಂತರ ಮತ ಚಲಾವಣೆಯಾಗಿದೆ. ಈ ಮತಗಳನ್ನು ಯಾರು ಹಾಕಿದರು ಎಂಬುದು ದಾಖಲೆ ಬೇಕಲ್ಲವೇ? ಇದು ದೇಶದ ಮುಂದಿರುವ ಸವಾಲು ಎಂದರು.
ಮಹದೇವಪುರ ಕ್ಷೇತ್ರದಲ್ಲಿನ ಅಕ್ರಮದ ಬಗ್ಗೆ ತನಿಖೆ ಮಾಡಿಸುತ್ತೀರಾ ಎಂಬ ಬಗ್ಗೆ ಮಾತನಾಡಿ, ಈ ತನಿಖೆಯನ್ನು ಸರ್ಕಾರವೇ ಮಾಡಬೇಕಿಲ್ಲ. ಚುನಾವಣೆ ಪ್ರಕ್ರಿಯೆ ವೇಳೆ ಸಂಪೂರ್ಣ ನಿಯಂತ್ರಣ ಚುನಾವಣಾ ಆಯೋಗದ ಕೈಯಲ್ಲಿರುತ್ತದೆ. ಹೀಗಾಗಿ ರಾಜಕೀಯ ಪಕ್ಷವಾಗಿ ನಾವೇ ತನಿಖೆ ಮಾಡಿ ಅಕ್ರಮಗಳನ್ನು ದಾಖಲೆ ಸಮೇತ ಬಹಿರಂಗಪಡಿಸಿದ್ದೇವೆ. ಮಾಧ್ಯಮಗಳು ಕೂಡ ತನಿಖೆ ಮಾಡಿ ಈ ಆರೋಪ ನಿಜ ಎಂದು ವರದಿ ಮಾಡಿವೆ ಎಂದು ತಿಳಿಸಿದರು.
ಈ ಆರೋಪಗಳ ಬಗ್ಗೆ ಕಾಂಗ್ರೆಸ್ ಎಲ್ಲೂ ಅಫಿಡವಿಟ್ ಸಲ್ಲಿಸಿಲ್ಲ ಚುನಾವಣಾ ಆಯೋಗ, ನ್ಯಾಯಾಲಯದ ಮೆಟ್ಟಿಲೂ ಏರಿಲ್ಲ ಯಾಕೆ ಎಂಬ ಬಗ್ಗೆ ಮಾತನಾಡಿ, ನಾವು ಚುನಾವಣಾ ಅಯೋಗದ ಬಳಿ ಪೂರಕ ದಾಖಲೆಗಳನ್ನು ಕೇಳುತ್ತಿದ್ದೇವೆ. ಚುನಾವಣಾ ಆಯೋಗದ ಮಾಹಿತಿ ಸಾರ್ವಜನಿಕರಿಗೆ ಮುಕ್ತವಾಗಿರಬೇಕು. ಅವರು ಅಗತ್ಯ ಮಾಹಿತಿ ನೀಡಬೇಕು. ಆದರೆ ಅವರು ಈ ಮಾಹಿತಿ ನೀಡುತ್ತಿಲ್ಲ. ನಾವು ತನಿಖೆ ಮಾಡಿ ಸಂಗ್ರಹಿಸಿರುವ ಮಾಹಿತಿಗಳನ್ನು ಬಹಿರಂಗಪಡಿಸಿದ್ದೇವೆ. ನಾನೇ ಹೋಗಿ ಮಾಹಿತಿ ನೀಡುವಂತೆ ಅರ್ಜಿ ಕೊಟ್ಟಿದ್ದರೂ ಅವರೇ ನನ್ನ ಬಳಿ ದಾಖಲೆ ಕೇಳುತ್ತಿದ್ದಾರೆ. ಮಾಹಿತಿ ಕೇಳುವ ಹಕ್ಕು ನಮಗಿದೆ. ಆ ಮಾಹಿತಿಗಳನ್ನು ಕೊಡಬೇಕಾಗಿರುವುದು ಅವರ ಕರ್ತವ್ಯ. ಅವರು ಮೊದಲು ದಾಖಲೆ ನೀಡಲಿ. ಆಮೇಲೆ ನಾವು ಅಫಿಡವಿಟ್ ಸಲ್ಲಿಸುತ್ತೇವೆ.
-
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ












Click it and Unblock the Notifications