ಕರ್ನಾಟಕದ ಮತ್ತೊಬ್ಬ ಪ್ರಭಾವಿ ಸಚಿವರ ವಿರುದ್ಧ ಭ್ರಷ್ಟಚಾರ ಆರೋಪ!
ರಾಜ್ಯದಲ್ಲಿ ಮತ್ತೊಬ್ಬರು ಪ್ರಭಾವಿ ಸಚಿವರಿಗೆ ಸಂಕಷ್ಟ ಎದುರಾಗುವ ಆತಂಕ ಎದುರಾಗಿದೆ. ಹೌದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ಹಲವು ಸಚಿವರು ವಿವಿಧ ಕಾರಣಗಳಿಗೆ ಸಂಕಷ್ಟದಲ್ಲಿ ಇದ್ದಾರೆ. ಪರಿಸ್ಥಿತಿ ಈ ರೀತಿ ಇರುವಾಗಲೇ ರಾಜ್ಯದ ಪ್ರಭಾವಿ ಸಚಿವರ ಮೇಲೆಯೂ ಹಗರಣಕ್ಕೆ ಸಂಬಂಧಿಸಿದಂತೆ ಆರೋಪವೊಂದು ಕೇಳಿ ಬಂದಿದೆ.
ಇದೀಗ ರಾಜ್ಯದ ಪ್ರಭಾವಿ ಸಚಿವರಾದ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಆರೋಪ ಮಾಡಿದ್ದು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ಗೆ ಅವರಿಗೆ ದೂರು ಕೊಟ್ಟಿದ್ದಾರೆ.

ಕರ್ನಾಟಕದಲ್ಲಿ ಕಳೆದ ಆರು ತಿಂಗಳಿನಿಂದಲೂ ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಒಂದಿಲ್ಲೊಂದು ಆರೋಪಗಳು ಕೇಳಿ ಬರುತ್ತಲ್ಲೇ ಇವೆ. ಇದೀಗ ಕೃಷ್ಣಬೈರೇಗೌಡ ಅವರ ವಿರುದ್ಧ ಆರೋಪ ಕೇಳಿ ಬಂದಿದೆ. ರಾಜ್ಯದಲ್ಲಿ ಸಾಲು ಸಾಲು ಸಚಿವರ ಮೇಲೆ ಗಂಭೀರ ಆರೋಪಗಳು ಕೇಳಿ ಬರುತ್ತಿದ್ದು ವಿರೋಧ ಪಕ್ಷಗಳು ಇದನ್ನೇ ಅಸ್ತ್ರವನ್ನಾಗಿಸಿಕೊಂಡಿವೆ. ಇದೀಗ ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಮಿತಿ ಮೀರಿದೆ ಎನ್ನುವ ಗಂಭೀರ ಆರೋಪಗಳು ಕೇಳಿ ಬಂದಿವೆ.
ಕೃಷ್ಣಬೈರೇಗೌಡ ಅವರ ವಿರುದ್ಧ ಕೇಳಿ ಬಂದ ಆರೋಪ: ಇನ್ನು ಇದೀಗ ಕೃಷ್ಣಬೈರೇಗೌಡ ಅವರ ವಿರುದ್ಧ ನೇರ ಆರೋಪ ಕೇಳಿ ಬಂದಿಲ್ಲ. ಆದರೆ ಅವರ ಇಲಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಆರೋಪಗಳು ಕೇಳಿ ಬಂದಿದೆ. ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಕೃಷ್ಣಬೈರೇಗೌಡ ಅವರು ಯಾವುದೇ ಗಂಭೀರ ಕ್ರಮಗಳನ್ನು ತೆಗೆದುಕೊಂಡಿಲ್ಲ. ಇಲಾಖೆಯಲ್ಲಿ ಅಕ್ರಮವಾಗಿ ಹಣ ತೆಗೆದುಕೊಳ್ಳುತ್ತಿರುವವರ ಬಗ್ಗೆ ದೂರು ನೀಡಿದ್ದರು.
ಆ ದೂರುಗಳಿಗೆ ಸ್ಪಂದಿಸುತ್ತಿಲ್ಲ. ಅವ್ಯವಹಾರಗಳನ್ನು ನಡೆಸುತ್ತಿರುವವರ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಹಲವು ಬಾರಿ ದೂರು ಕೊಟ್ಟರೂ ಸ್ಪಂದಿಸುತ್ತಿಲ್ಲ. ಪರೋಕ್ಷವಾಗಿ ಇವರೂ ಭ್ರಷ್ಟಾಚಾರಕ್ಕೆ ಕಾರಣರಾಗಿದ್ದಾರೆ. ಹೀಗಾಗಿ, ಈ ಸಂಬಂಧ ತನಿಖೆ ನಡೆಸುವುದಕ್ಕೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೊಡುವಂತೆ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ.
ಸುಧಾರಣೆ ಕ್ರಮಗಳ ನಡುವೆ ಆರೋಪ: ಇನ್ನು ಕಂದಾಯ ಇಲಾಖೆಯಲ್ಲಿ ಹಲವು ಸುಧಾರಣೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಕಂದಾಯ ಇಲಾಖೆ ಹೇಳಿದೆ. ಇ ಖಾತಾ, ಖಾತಾ ಹಾಗೂ ಆಸ್ತಿ ತೆರಿಗೆ ಸಂಗ್ರಹ ವಿಚಾರದಲ್ಲಿ ಸುಧಾರಣೆಯ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದಾಗಿ ಕಂದಾಯ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಬೆಂಗಳೂರು ಮಾತ್ರವಲ್ಲದೇ ರಾಜ್ಯದಾದ್ಯಂತ ಲಕ್ಷಾಂತರ ಆಸ್ತಿಗಳು ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿವೆ. ಇದೀಗ ಈ ಎಲ್ಲಾ ಆಸ್ತಿಗಳನ್ನು ಸರ್ಕಾರವು ಆಸ್ತಿ ತೆರಿಗೆ ವ್ಯಾಪ್ತಿಗೆ ತರುವುದಕ್ಕೆ ಮುಂದಾಗಿದೆ. ಈ ರೀತಿ ಇರುವಾಗಲೇ ರಾಜ್ಯದಲ್ಲಿ ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಇನ್ನು ಇತ್ತೀಚಿನ ದಿನಗಳಲ್ಲಿ ಒಂದಿಲ್ಲೊಬ್ಬರು ರಾಜ್ಯ ಸರ್ಕಾರದ ಸಚಿವರ ಮೇಲೆ ಗಂಭೀರ ಆರೋಪಗಳು ಕೇಳಿ ಬರುತ್ತಲ್ಲೇ ಇವೆ.
ಕರ್ನಾಟಕದ ಹಲವು ಸಚಿವರ ಮೇಲೆ ಈಗಾಗಲೇ ಆರೋಪ ಕೇಳಿ ಬಂದಿದ್ದು. ಇದೀಗ ಕೃಷ್ಣಬೈರೇಗೌಡ ಅವರ ಮೇಲೂ ಆರೋಪ ಕೇಳಿ ಬಂದಿದೆ. ಆದರೆ, ಈ ಆರೋಪಕ್ಕೆ ಸಂಬಂಧಿಸಿದಂತೆ ಕೃಷ್ಣಬೈರೇಗೌಡ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.












Click it and Unblock the Notifications