ಲೋಕಾಯುಕ್ತದಲ್ಲಿ ಭ್ರಷ್ಟಾಚಾರ, ಆಮ್ ಆದ್ಮಿ ಪಕ್ಷದಿಂದ ದೂರು
ಬೆಂಗಳೂರು, ಜೂ. 29 : ಕರ್ನಾಟಕ ಲೋಕಾಯುಕ್ತದಲ್ಲಿ ನಡೆದಿದೆ ಎನ್ನಲಾದ ಹಣದ ಬೇಡಿಕೆ ಪ್ರಕರಣದ ಬಗ್ಗೆ ಆಮ್ ಆದ್ಮಿ ಪಕ್ಷ ಹೋರಾಟವನ್ನು ಮುಂದುವರೆಸಿದೆ. ಲೋಕಾಯುಕ್ತ ನ್ಯಾ.ಭಾಸ್ಕರ ರಾವ್ ಪುತ್ರ ಅಶ್ವಿನ್ ರಾವ್ ಮತ್ತು ಹಣದ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿರುವ ಕೃಷ್ಣರಾವ್ ವಿರುದ್ಧ ಪೊಲೀಸರಿಗೆ ದೂರು ನೀಡಿದೆ.
ಆಮ್ ಆದ್ಮಿ ಪಕ್ಷದ ನಾಯಕರಾದ ರವಿಕೃಷ್ಣಾ ರೆಡ್ಡಿ ಮತ್ತು ಸಿದ್ಧಾಂತ್ ಶರ್ಮಾ ಅವರು ಸೋಮವಾರ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಅಶ್ವಿನ್ ರಾವ್ ಮತ್ತು ಕೃಷ್ಣರಾವ್ ವಿರುದ್ಧ ದೂರು ನೀಡಿದ್ದಾರೆ. ಲೋಕಾಯುಕ್ತರ ಅಧಿಕೃತ ನಿವಾಸವನ್ನು ಅಕ್ರಮ ಚಟುವಟಿಕೆಗಳಿಗೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. [ಲೋಕಾಯುಕ್ತದಲ್ಲೇ ಭ್ರಷ್ಟಾಚಾರ, ಮುಂದೇನು?]

ಅಶ್ವಿನ್ ರಾವ್ ಮತ್ತು ಕೃಷ್ಣರಾವ್ ಎಂಬುವವರು ಸರ್ಕಾರಿ ಅಧಿಕಾರಿಗಳನ್ನು ಲೋಕಾಯುಕ್ತರ ಸರ್ಕಾರಿ ನಿವಾಸಕ್ಕೆ ಕರೆಸಿಕೊಂಡು ಬೆದರಿಕೆ ಹಾಕಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪಗಳಿವೆ. ಈ ಕುರಿತು ತಕ್ಷಣ ದೂರು ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ. [ಲೋಕಾಯುಕ್ತ ಪ್ರಕರಣ: ಕೈ ತೊಳೆದುಕೊಂಡ ಸಿದ್ದು]
ಕೃಷ್ಣರಾವ್ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಇಂಜಿನಿಯರ್ ಕೃಷ್ಣಮೂರ್ತಿ ಎಂಬುವವರನ್ನು ಲೋಕಾಯುಕ್ತ ಕಚೇರಿಗೆ ಕರೆಸಿಕೊಂಡು ಹಣದ ಬೇಡಿಕೆ ಇಟ್ಟಿದ್ದಾರೆ ಎಂದು ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ 2015ರ ಮೇ 11ರಂದು ಲೋಕಾಯುಕ್ತ ರಿಜಿಸ್ಟ್ರಾರ್ ಅವರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆಯೂ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.
High grounds police stn is not filing FIR in the lokayukta case, complaint by @AAPKarnataka @CPBlr action needed sir pic.twitter.com/t4N4o834PE
— AAP ka Chandan (@rchandan27) June 29, 2015 ಲೋಕಾಯುಕ್ತದಲ್ಲಿ ನಡೆದ ಹಣದ ಬೇಡಿಕೆ ಪ್ರಕರಣವನ್ನು ಸಿಸಿಬಿ ತನಿಖೆ ವಹಿಸುತ್ತೇನೆ ಎಂದು ನ್ಯಾ. ಭಾಸ್ಕರರಾವ್ ಹೇಳಿದ್ದರು. ಆದರೆ, ನಂತರ ಸ್ವತಂತ್ರ ತನಿಖಾ ಸಂಸ್ಥೆಗೆ ವಹಿಸಿ ಎಂದು ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. [ಲೋಕಾಯುಕ್ತ ಸಂಸ್ಥೆ ಘನತೆ ಉಳಿಸಲು ಎಎಪಿ ಕರೆ]












Click it and Unblock the Notifications