ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಾಯುಕ್ತದಲ್ಲಿ ಭ್ರಷ್ಟಾಚಾರ : ಯಾರು, ಏನು ಹೇಳಿದರು?

|
Google Oneindia Kannada News

ಬೆಂಗಳೂರು, ಜು.02 : ಭ್ರಷ್ಟ ಸರ್ಕಾರಿ ಅಧಿಕಾರಿಗಳನ್ನು ಪತ್ತೆ ಹಚ್ಚಬೇಕಾದ ಲೋಕಾಯುಕ್ತದಲ್ಲಿಯೇ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳು ಕೇಳಿಬಂದಿವೆ. ಹಣದ ಬೇಡಿಕೆ ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಸುವಂತೆ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಒತ್ತಾಯಿಸಿವೆ. ಸರ್ಕಾರ ಎಸ್‌ಐಟಿ ರಚನೆ ಮಾಡಿ ತನಿಖೆಗೆ ಆದೇಶ ನಿಡಿದೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿಯೂ ಲೋಕಾಯುಕ್ತದ ಭ್ರಷ್ಟಾಚಾರದ ಕುರಿತು ಚರ್ಚೆ ನಡೆಯುತ್ತಿದೆ. ಇತ್ತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಕೀಲರು ಪ್ರತಿಭಟನೆ ನಡೆಸುತ್ತಿದ್ದು, ಲೋಕಾಯುಕ್ತ ನ್ಯಾ.ವೈ.ಭಾಸ್ಕರರಾವ್ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. [ಅಶ್ವಿನ್ ರಾವ್‌ ವಿರುದ್ಧ FIR]

ಲೋಕಾಯುಕ್ತ ನ್ಯಾ.ವೈ.ಭಾಸ್ಕರರಾವ್ ಪುತ್ರ ಅಶ್ವಿನ್ ರಾವ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬುದು ಆರೋಪ. ಆದ್ದರಿಂದ ಲೋಕಾಯುಕ್ತರು ರಾಜೀನಾಮೆ ನೀಡಬೇಕು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದಿವೆ. [ಲೋಕಾಯುಕ್ತ ಹಗರಣ, ಎಸ್ ಐಟಿಯಿಂದ ತನಿಖೆ]

'ನಿಮ್ಮ ಮೇಲೆ ದಾಳಿ ನಡೆಯಲಿದೆ, ನಿಮ್ಮ ವಿರುದ್ಧ ದಾಖಲೆಗಳನ್ನು ಸಂಗ್ರಹಣೆ ಮಾಡಲಾಗಿದೆ. ದಾಳಿ ತಪ್ಪಿಸಬೇಕಾದರೆ 1 ಕೋಟಿ ಕೊಡಿ' ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತ್‌ ಕಾರ್ಯನಿರ್ವಾಹಕ ಎಂಜಿನಿಯರ್‌ ಕೃಷ್ಣಮೂರ್ತಿ ಎಂಬುವವರಿಂದ ಕೃಷ್ಣರಾವ್‌ ಎಂಬುವವರು ಹಣ ಕೇಳಿದ್ದರು. ಎಂಬುದು ಬಹಿರಂಗಗೊಂಡು ಲೋಕಾಯುಕ್ತದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಲೋಕಾಯುಕ್ತದ ಹಗರಣದ ಬಗ್ಗೆ ಯಾರು, ಏನು ಹೇಳಿದರು ನೋಡೋಣ ಬನ್ನಿ

ಕಾನೂನು ತಜ್ಞರ ಜೊತೆ ಚರ್ಚಿಸುತ್ತೇನೆ

ಕಾನೂನು ತಜ್ಞರ ಜೊತೆ ಚರ್ಚಿಸುತ್ತೇನೆ

'ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ವರದಿಯಗಳು ಮಾಧ್ಯಮಗಳಲ್ಲಿ ಬಂದಿವೆ. ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿ ಪ್ರತಿಕ್ರಿಯೆ ನೀಡುತ್ತೇನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಗತ್ಯವಿದ್ದರೆ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತರಲಾಗುತ್ತದೆ ಎಂದು ಅವರು ವಿಧಾನಸಭೆಯಲ್ಲಿ ಹೇಳಿಕೆ ನೀಡಿದ್ದಾರೆ.

ಕೈ ಕಟ್ಟಿ ಕೂರಲು ಸಾಧ್ಯವಿಲ್ಲ

ಕೈ ಕಟ್ಟಿ ಕೂರಲು ಸಾಧ್ಯವಿಲ್ಲ

ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಈ ಲೋಕಾಯುಕ್ತದ ಹಗರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, 'ಇದು ತೀವ್ರ ಆತಂಕ ತರುವ ವಿಚಾರ. ಲೋಕಾಯುಕ್ತರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಕೈ ಕಟ್ಟಿ ಕೂರಲು ಸಾಧ್ಯವಿಲ್ಲ. ತಪ್ಪು ಮಾಡಿರುವವರಿಗೆ ಶಿಕ್ಷೆಯಾಗಲೇಬೇಕು. ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಒಪ್ಪಿದರೆ ಸದನ ಸಮತಿ ರಚಿಸಬಹುದು' ಎಂದು ಹೇಳಿದ್ದಾರೆ.

ಅಸಹಾಯಕತೆ ವ್ಯಕ್ತಪಡಿಸಬೇಡಿ

ಅಸಹಾಯಕತೆ ವ್ಯಕ್ತಪಡಿಸಬೇಡಿ

ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಿಧಾನಸಭೆ ಕಲಾಪದಲ್ಲಿ ಮಾತನಾಡಿ, 'ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 6ರಡಿ ಲೋಕಾಯುಕ್ತರನ್ನು ತೆಗೆಯಲು ಸದನಕ್ಕೆ ಅಧಿಕಾರವಿದೆ. ಲೋಕಾಯುಕ್ತರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರವಿಲ್ಲ ಎಂದು ಸರ್ಕಾರ ಅಸಹಾಯಕತೆ ವ್ಯಕ್ತಪಡಿಸಬಾರದು' ಎಂದರು.

ಕುಮಾರಸ್ವಾಮಿ ಹೊಸ ಬಾಂಬ್

ಕುಮಾರಸ್ವಾಮಿ ಹೊಸ ಬಾಂಬ್

ಲೋಕಾಯುಕ್ತದಲ್ಲಿನ ಭ್ರಷ್ಟಾಚಾರದ ಬಗ್ಗೆ ವಿವಾದ ಉಂಟಾಗಿರುವಾಗಲೇ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಹಾಕಿದ್ದಾರೆ. 'ರಾಜ್ಯದ ಹಿರಿಯ ಐಎಎಸ್ ಅಧಿಕಾರಿಗಳು ಹಾಗೂ ಪ್ರಮುಖ ಇಲಾಖೆಗಳಲ್ಲಿರುವ ಕೆಲವು ಅಧಿಕಾರಿಗಳು ತಮ್ಮ ಮೇಲೆ ದಾಳಿ ನಡೆಯದಂತೆ ಲೋಕಾಯುಕ್ತ ಸಂಸ್ಥೆಯಲ್ಲಿರುವವರಿಗೆ ಹಣ ನೀಡಿದ್ದಾರೆ' ಎಂದು ಹೇಳಿದ್ದಾರೆ.

ಲೋಕಾಯುಕ್ತದ ಬಗ್ಗೆ ಅಪಾರವಾದ ನಂಬಿಕೆ ಇದೆ

ಲೋಕಾಯುಕ್ತದ ಬಗ್ಗೆ ಅಪಾರವಾದ ನಂಬಿಕೆ ಇದೆ

ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರು ಲೋಕಾಯುಕ್ತ ಹಗರಣದ ಕುರಿತು ಪ್ರತಿಕ್ರಿಯೆ ನೀಡಿದ್ದು, 'ಲೋಕಾಯುಕ್ತ ಸಂಸ್ಥೆಯು ಭ್ರಷ್ಟಾಚಾರ ನಿಗ್ರಹಕ್ಕೆ ಇರುವ ಸಂಸ್ಥೆ. ಆದರೆ, ಅಲ್ಲಿಯೇ ಭ್ರಷ್ಟಾಚಾರ ನಡೆದಿರುವುದು ಗಂಭೀರ ವಿಷಯ.
ಸಂಸ್ಥೆ ಬಗ್ಗೆ ಜನರು ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ. ಆದ್ದರಿಂದ ಸರ್ಕಾರ ಹಗರಣದ ಬಗ್ಗೆ ಸಮಗ್ರ ತನಿಖೆಯಾಗಲು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು' ಎಂದು ಒತ್ತಾಯಿಸಿದರು.

ಭಾಸ್ಕರರಾವ್ ರಾಜೀನಾಮೆ ಕೊಡಬಾರದು

ಭಾಸ್ಕರರಾವ್ ರಾಜೀನಾಮೆ ಕೊಡಬಾರದು

'ಲೋಕಾಯುಕ್ತ ನ್ಯಾ. ಭಾಸ್ಕರರಾವ್ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು' ಎಂದು ಹಿರಿಯ ವಕೀಲ ಎ.ಕೆ.ಸುಬ್ಬಯ್ಯ ಹೇಳಿದ್ದಾರೆ. ಲೋಕಾಯುಕ್ತರು ರಾಜೀನಾಮೆ ನೀಡಿದರೆ ಸಂಸ್ಥೆಗೆ ಕಳಂಕ ಬರುತ್ತದೆ. ಆದ್ದರಿಂದ ಈಗ ಕೇಳಿಬಂದಿರುವ ಆರೋಪದ ಬಗ್ಗೆ ತನಿಖೆ ನಡೆಸಬೇಕು. ಹಿಂದಿನ ಲೋಕಾಯುಕ್ತರುಗಳಿಗಿಂತ ಭಾಸ್ಕರರಾವ್ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸುಬ್ಬಯ್ಯ ಹೇಳಿದ್ದಾರೆ.

ತಕ್ಷಣವೇ ಲೋಕಾಯುಕ್ತರು ರಾಜೀನಾಮೆ ನೀಡಲಿ

ತಕ್ಷಣವೇ ಲೋಕಾಯುಕ್ತರು ರಾಜೀನಾಮೆ ನೀಡಲಿ

ಲೋಕಾಯುಕ್ತರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಒತ್ತಾಯಿಸಿದ್ದಾರೆ. ಸಂಸ್ಥೆಯ ಪಾವಿತ್ರತೆ ಉಳಿಸುವ ಹಾಗೂ ನೈತಿಕತೆ ಆಧಾರದಲ್ಲಿ ವೈ.ಭಾಸ್ಕರ್‌ರಾವ್‌ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಅವರು ಹೇಳಿದ್ದಾರೆ.

English summary
FIR has been lodged against the Lokayukta Justice Y.Bhaskar Rao son Ashwin Rao and 2 others in Lokayukta corruption case. Who said, what about Corruption in Karnataka Lokayukta.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X