ಲೋಕಾಯುಕ್ತದಲ್ಲಿ ಭ್ರಷ್ಟಾಚಾರ, ನಾಲ್ವರು ಆರೋಪಿಗಳಿಗೆ ಜೈಲೇ ಗತಿ

ಬೆಂಗಳೂರು, ಆಗಸ್ಟ್ 14 : ಕರ್ನಾಟಕ ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಲೋಕಾಯುಕ್ತ ಕೋರ್ಟ್ ವಜಾಗೊಳಿಸಿದೆ. ಎಲ್ಲಾ ಆರೋಪಿಗಳಿಗೂ ಆ.27ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಲಾಗಿದೆ.

ಶುಕ್ರವಾರ ಸೈಯದ್ ರಿಯಾಜ್, ಅಶೋಕ್ ಕುಮಾರ್, ಶ್ರೀನಿವಾಸ ಗೌಡ, ಶಂಕರೇಗೌಡ ಅವರನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಎಸ್‌ಐಟಿಯಿಂದ ಬಂಧಿತರಾಗಿರುವ ನಾಲ್ವರು ಆರೋಪಿಗಳು ಪ್ರಕರಣದಲ್ಲಿ ಜಾಮೀನು ನೀಡುವಂತೆ ಮನವಿ ಸಲ್ಲಿಸಿದರು.

lokayukta

ಎಲ್ಲಾ ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಾಧೀಶ ಜಿ.ವಿ.ಬೋಪಯ್ಯ ಅವರು ಜಾಮೀನು ಅರ್ಜಿಯನ್ನು ತಿಸ್ಕರಿಸಿದರು. ಎಲ್ಲಾ ಆರೋಪಿಗಳನ್ನು ಆ.27ರ ಗುರುವಾರದ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದರು. [ಲೋಕಾಯುಕ್ತದಲ್ಲಿ ಭ್ರಷ್ಟಾಚಾರ : ಪತ್ರಕರ್ತ ಸೇರಿ ಇಬ್ಬರ ಬಂಧನ]

ಲೋಕಾಯುಕ್ತ ನ್ಯಾ.ಭಾಸ್ಕರಾವ್ ಅವರ ಪುತ್ರ ಅಶ್ವಿನ್ ರಾವ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಕೋರ್ಟ್ ಪೂರ್ಣಗೊಳಿಸಿದ್ದು. ಆ.17ರ ಸೋಮವಾರ ತೀರ್ಪು ನೀಡಲಿದೆ. ಅಶ್ವಿನ್ ರಾವ್ ಅವರು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಯದ್ ರಿಯಾಜ್, ಅಶೋಕ್ ಕುಮಾರ್, ಶ್ರೀನಿವಾಸ ಗೌಡ, ಶಂಕರೇಗೌಡ, ಅಶ್ವಿನ್ ರಾವ್ ಮತ್ತು ವಿ.ಭಾಸ್ಕರ್‌ ಅವರನ್ನು ಎಸ್‌ಐಟಿ ತಂಡ ಬಂಧಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+