ಲೋಕಾಯುಕ್ತದಲ್ಲಿ ಭ್ರಷ್ಟಾಚಾರ : ಜಾಮೀನು ನೀಡದ ಸುಪ್ರೀಂಕೋರ್ಟ್

Posted By:
Subscribe to Oneindia Kannada

ಬೆಂಗಳೂರು, ಡಿಸೆಂಬರ್ 07 : ಕರ್ನಾಟಕ ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಾಲ್ವರು ಆರೋಪಿಗಳಿಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 16ಕ್ಕೆ ಕೋರ್ಟ್ ಮುಂದೂಡಿದೆ.

ಲೋಕಾಯುಕ್ತ ಮಾಜಿ ಪಿಆರ್‌ಒ ಸೈಯದ್ ರಿಯಾಜ್, ಶ್ರೀನಿವಾಸ ಗೌಡ, ಶಂಕರೇಗೌಡ, ಅಶೋಕ್ ಕುಮಾರ್ ಅವರು ಜಾಮೀನು ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಸೋಮವಾರ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. [ನಾಲ್ವರ ಬಿಡುಗಡೆಗೆ ಸುಪ್ರೀಂ ತಡೆ]

supreme court

ಭ್ರಷ್ಟಾಚಾರ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಆದ್ದರಿಂದ, ಜಾಮೀನು ನೀಡಲು ಬರುವುದಿಲ್ಲ ಎಂದು ಕೋರ್ಟ್ ಹೇಳಿದೆ. ಆರೋಪಿಗಳ ಪರ ವಕೀಲರು ಪ್ರಕರಣದ ವಿಚಾರಣೆ ಮುಗಿದಿದೆ. ಚಾರ್ಚ್ ಶೀಟ್ ಸಹ ಹಾಕಲಾಗಿದೆ. ಆದ್ದರಿಂದ, ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು. [ಲೋಕಾಯುಕ್ತರನ್ನು ಪದಚ್ಯುತಿಗೊಳಿಸುವುದು ಹೇಗೆ?]

2015ರ ಸೆಪ್ಟೆಂಬರ್ 8ರಂದು ಸೈಯದ್ ರಿಯಾಜ್, ಶ್ರೀನಿವಾಸ ಗೌಡ, ಶಂಕರೇಗೌಡ, ಅಶೋಕ್ ಕುಮಾರ್ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಸುಪ್ರೀಂಕೋರ್ಟ್ ಜಾಮೀನಿಗೆ ತಡೆ ನೀಡಿದೆ. ಆರೋಪಿಗಳನ್ನು ಇದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದಾರೆ.

ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರರಾವ್ ಪುತ್ರ ಅಶ್ವಿನ್ ರಾವ್ ಸೇರಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Supreme Court of India on Monday rejected bail application flied by Syed Riyaz, Shankare Gowda, Ashok Kumar and Shrinivas Gowda, who arrested by SIT in the case of corruption in Karnataka lokayutha.
 
Please Wait while comments are loading...