ಮಹಿಳಾ ಪೇದೆಗಳಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣ: ಡಿವೈಎಸ್ಪಿ ಕಚೇರಿಯಲ್ಲಿ ಕೌನ್ಸಿಲಿಂಗ್
ಚಿಕ್ಕಮಗಳೂರು ಸೆಪ್ಟೆಂಬರ್ 7: ಮಹಿಳಾ ಪೇದೆಗಳಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪ ಡಿವೈಎಸ್ಪಿ ಕಚೇರಿಯಲ್ಲಿ ಕೌನ್ಸಿಲಿಂಗ್ ನಡೆಯುತ್ತಿದೆ. ಕೊಪ್ಪ ಪಿಎಸ್ಐ ಬಸವರಾಜ್ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿತ್ತು. ಹೀಗಾಗಿ ಮಹಿಳಾ ಪೇದೆಗಳ ಕೌನ್ಸಲಿಂಗ್ ನಡೆಸಲಾಗುತ್ತಿದೆ.
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಪೋಲಿಸ್ ಠಾಣೆಯ ಪಿಎಸ್ಐ ಬಸವರಾಜ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪವಿದೆ. ಕಳೆದ 2 ದಿನಗಳ ಹಿಂದೆ ಮಹಿಳಾ ಪೇದೆ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದರು. ಹೀಗಾಗಿ ಐವರು ಮಹಿಳಾ ಸಿಬ್ಬಂದಿಗಳಿಂದ ಡಿವೈಎಸ್ಪಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸದ್ಯ ಕೊಪ್ಪ ಡಿವೈಎಸ್ಪಿ ಹಾಗೂ ಹಿರಿಯ ಮಹಿಳಾ ಅಧಿಕಾರಿ ಮಹಿಳಾ ಪೇದೆಗಳ ಕೌನ್ಸಿಲಿಂಗ್ ನಡೆಸಿದ್ದಾರೆ.

ಪಿಎಸ್ಐ ಬಸವರಾಜು ಅವರಿಂದ ಬೇಸತ್ತಿರುವ ಮಹಿಳಾ ಸಿಬ್ಬಂದಿಗಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸುವಾಗ, ಸಹ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ವೇಳೆ ಮೇಲಾಧಿಕಾರಿಗಳಿಂದ ಡೆತ್ ನೋಟ್ ನಾಶಪಡಿಸಿರುವ ಆರೋಪ ಕೂಡ ಕೇಳಿ ಬಂದಿದೆ. ಈ ಹಿಂದೆ ಕೆಲಸ ಮಾಡಿದ್ದ ಹಲವು ಠಾಣೆಗಳಲ್ಲೂ ಬಸವರಾಜ್ ರಿಂದ ಕಿರುಕುಳದ ಆರೋಪವಿದೆ. ಈ ಹಿನ್ನೆಲೆ ಹಿರಿಯ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.
ವಸತಿ ಶಾಲೆಯ ಶಿಕ್ಷಕನ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರ ಸಾವಿರಾರು ನಗ್ನ ವಿಡಿಯೋ
ಮೊರಾರ್ಜಿ ದೇಸಾಯಿ ವಸತಿ ಶಾಲೆ ಶಿಕ್ಷಕನ ಮೊಬೈಲ್‌ನಲ್ಲಿ ಬರೋಬ್ಬರಿ ಐದು ಸಾವಿರ ನಗ್ನ ವಿಡಿಯೋಗಳು ಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಈತನ ಬಳಿ ಇದ್ದದ್ದು ಬೇರೊಂದು ನಗ್ನ ವಿಡಿಯೋಗಳು ಅಲ್ಲದೆ ಶಾಲೆಯ ಹೆಣ್ಣು ಮಕ್ಕಳ ಫೋಟೋಗಳು ಹಾಗೂ ವಿಡಿಯೋಗಳು ಪತ್ತೆಯಾಗಿವೆ. ಈ ಘಟನೆಯಿಂದಾಗಿ ಹೈಕೋರ್ಟ್ ಅಘಾತ ವ್ಯಕ್ತಪಡಿಸಿದೆ.

ಕೋಲಾರ ಜಿಲ್ಲೆಯ ಮಾಲೂರು ತಾಲೂನಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಚಿತ್ರಕಲಾ ಶಿಕ್ಷಕ ಮುನಿಯಪ್ಪ ಮೊಬೈಲ್‌ನಲ್ಲಿ ವಿಡಿಯೋಗಳು ಪತ್ತೆಯಾಗಿವೆ. ಹೀಗಾಗಿ ಈತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಬಳಿಕ ಈತ ಎಫ್‌ಐಆರ್ ರದ್ದತಿ ಕೋರಿ ಅರ್ಜಿ ಸಲ್ಲಿಸಿದ್ದು ಸದ್ಯ ಕೋರ್ಟ್ ಅರ್ಜಿ ವಜಾಗೊಳಿಸಿದೆ.
ಮಾಸ್ತಿ ಪೊಲೀಸ್ ಠಾಣೆಯಲ್ಲಿ ಶಿಕ್ಷಕನ ವಿರುದ್ಧ ಪೋಕ್ಸೋ ಅಡಿ ಪ್ರಕರಣ ದಾಖಲಾಗಿತ್ತು. 2023 ಡಿಸೆಂಬರ್ 17ರಂದು ನಡೆದಿದ್ದ ಪ್ರಕರಣದಲ್ಲಿ ವಸತಿ ಶಾಲೆಯ ಚಿತ್ರಕಲಾ ಶಿಕ್ಷಕನಾಗಿರುವ ಮುನಿಯಪ್ಪ ಮಕ್ಕಳಿಗೆ ಚಿತ್ರಹಿಂಸೆ ನೀಡಿದ್ದ ವಿಡಿಯೋ ವೈರಲ್ ಆಗಿತ್ತು. ಶಾಲೆಯಲ್ಲಿ ಸ್ವಚ್ಚತೆಯ ನೆಪದಲ್ಲಿ ಮಕ್ಕಳನ್ನೇ ಮಲದ ಗುಂಡಿಗೆ ಇಳಿಸಿದ ಪ್ರಕರಣ ಹೊರಬಂದಿತ್ತು. ಇದರ ಜೊತೆಗೆ ಶಾಲೆಯ ಒಂದೊಂದೇ ಹುಳುಕುಗಳು ಗೊತ್ತಾಗತೊಡಗಿತ್ತು. ಶಾಲೆಯ ಶಿಕ್ಷಕರ ವಿರುದ್ಧ ಮಕ್ಕಳು ಸಿಡಿದೆದ್ದಿದ್ದರು. ವೈಯರ್‌ನಿಂದ ಹೊಡೆದಿದ್ದಾರೆ ಎಂದು ಆರೋಪಿಸಿದ್ದರು.
ಶಿಕ್ಷಕ ರಾತ್ರಿ ಒಂಬತ್ತರಿಂದ ರಾತ್ರಿ ಹನ್ನೊಂದು ಗಂಟೆಯವರೆಗೆ ಶಿಕ್ಷೆ ನೀಡಿದ್ದಾನೆ ಎಂದು ಪೋಷಕರು ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಇನ್ನು ಶಾಲೆಯ ಮಹಿಳೆಯರು ತಾವು ಬಟ್ಟೆ ಬದಲಾಯಿಸುವಾಗ ಫೋಟೋ ಹಾಗೂ ವಿಡಿಯೋವನ್ನು ಸೆರೆ ಹಿಡಿಯಲಾಗಿದೆ ಎಂದು ಆರೋಪಿಸಿದ್ದರು.












Click it and Unblock the Notifications