ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿರಾ, ಆರ್‌ಆರ್‌ ನಗರ ಉಪ ಚುನಾವಣೆ ಮತ ಎಣಿಕೆ: ಗೆಲ್ಲೋದು ಇವರೇನಾ?

|
Google Oneindia Kannada News

ಬೆಂಗಳೂರು, ನ. 09: ಮೂರು ರಾಜಕೀಯನ ಪಕ್ಷಗಳಿಗೆ ಪ್ರತಿಷ್ಠೆಯ ಉಪ ಚುನಾವಣೆಯಬ ಫಲಿತಾಂಶ ನಾಳೆ (ನ. 10) ಪ್ರಕಟವಾಗಲಿದೆ. ಸೋಮವಾರ ಮಧ್ಯಾಹ್ನದ ಹೊತ್ತಿಗೆ ಅಧಿಕೃಕವಾಗಿ ಆರ್ ಆರ್ ನಗರ ಹಾಗೂ ಶಿರಾ ವಿಧಾನಸಭೆ ಉಪ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಎರಡೂ ಕ್ಷೇತ್ರಗಳಲ್ಲಿ ಮೂರು ಪಕ್ಷಗಳ ಅಭ್ಯರ್ಥಿಗಳು ಪ್ರಬಲರಾಗಿದ್ದಾರೆ. ಆದರೂ ವಿಜಯಲಕ್ಷ್ಮಿ ಒಬ್ಬರಿಗೆ ಮಾತ್ರ ಒಲಿಯುವುದು ಸಾಧ್ಯ. ಹೀಗಾಗಿ ಶಿರಾ ಹಾಗೂ ಆರ್ ಆರ್ ನಗರದಲ್ಲಿ ಗೆಲ್ಲುವ ಅಭ್ಯರ್ಥಿ ಯಾರು ಎಂಬುದು ನಿಗೂಢವಾಗಿದ್ದರೂ ಗೆಲುವಿಗೆ ಹತ್ತಿರವಾಗಿರುವವರ ಹೆಸರುಗಳು ಬಹಿರಂಗವಾಗಿವೆ.

ನಾಳೆ (ನವೆಂಬರ್ 10) ಬೆಳಗ್ಗೆ 10 ಗಂಟೆಯ ಹೊತ್ತಿಗೆ ಎರಡೂ ಕ್ಷೇತ್ರಗಳ ಸಂಪೂರ್ಣ ಚಿತ್ರಣ ಸಿಗಲಿದೆ. ಕಳೆದ ಚುನಾವಣೆಗೆ ಹೋಲಿಕೆ ಮಾಡಿದರೆ ಆರ್ ಆರ್ ನಗರ ಹಾಗೂ ಶಿರಾ ಎರಡೂ ಕ್ಷೇತ್ರಗಳಲ್ಲಿ ಕಡಿಮೆ ಮತದಾನವಾಗಿದೆ. ಮತದಾನದ ಆಧಾರದಲ್ಲಿ ಗೆಲುವಿನ ಲೆಕ್ಕಾಚಾರ ಮಾಡಲಾಗಿದೆ. ಜೊತೆಗೆ ನಾಳೆ ಬೆಳಗ್ಗೆ 8ಕ್ಕೆ ಶಿರಾ ಹಾಗೂ ಆರ್‌ಆರ್‌ ನಗರದ ಮತ ಎಣಿಕೆ ಕೇಂದ್ರಗಳಲ್ಲಿ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ.

ಆರ್ ಆರ್ ನಗರ ಚುನಾವಣೆ

ಆರ್ ಆರ್ ನಗರ ಚುನಾವಣೆ

ಜಿದ್ದಾಜಿದ್ದಿನಿಂದ ಕೂಡಿದ್ದ ಆರ್ ಆರ್ ನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಮಧ್ಯೆ ಸಮಾನ ಪೈಪೋಟಿ ಇತ್ತು. ಆದರೂ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯ ಮಧ್ಯೆ ನೇರ ಹಣಾಹಣಿ ಕಂಡು ಬಂದಿದ್ದು ಆರ್ ಆರ್ ನಗರದಲ್ಲಿ ಮಾಜಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಗೆಲವು ಸಾಧಿಸಲಿದ್ದಾರೆ ಎಂದು ವಿಶ್ಲೆಷಣೆ ಮಾಡಲಾಗಿದೆ.

ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಅವರು ಕ್ಷೇತ್ರಕ್ಕೆ ಹೊಸಬರಾಗಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರ ಭಿರುಸಿನ ಪ್ರಚಾರ ಕಾಂಗ್ರೆಸ್ ಅಭ್ಯರ್ಥಿಯ ಕೈಹಿಡಿದರೆ ಮುನಿರತ್ನ ಅವರಿಗೆ ಸೋಲು ಖಂಡಿತ ಎನ್ನಲಾಗಿದೆ.

ಶಿರಾ ಉಪ ಚುನಾವಣೆ

ಶಿರಾ ಉಪ ಚುನಾವಣೆ

ಜೆಡಿಎಸ್ ಶಾಸಕ ಬಿ. ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದ ನಡೆದಿರುವ ಶಿರಾ ಉಪ ಚುನಾವಣೆಯಲ್ಲಿ ಅನುಕಂಪದ ಅಲೆಯಿದೆ. ಹಾಗೆನಾದರೂ ಆದಲ್ಲಿ ದಿ. ಮಾಜಿ ಶಾಸಕ ಬಿ. ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರು ಗೆಲವು ಸಾಧಿಸಲಿದ್ದಾರೆ. ಅದಕ್ಕೆ ಪೂರಕವಾಗಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಶಿರಾ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರ ಆರಂಭದಿಂದ ಬಹಿರಂಗ ಪ್ರಚಾರ ಅಂತ್ಯವಾಗುವವರೆಗೆ ವಾಸ್ತವ್ಯ ಹೂಡಿದ್ದರು. ಇದು ಮತದಾರರ ಮೇಲೆ ಪ್ರಭಾವ ಬೀರಿದೆ ಎನ್ನಲಾಗಿದೆ.

ಜೊತೆಗೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಎಚ್‌.ಡಿ. ದೇವೇಗೌಡ ಅವರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಹೀಗಾಗಿ ಈ ಬಾರಿ ಇದು ನನ್ನ ಕೊನೆಯ ಚುನಾವನೆ ಎಂದು ದೇವೇಗೌಡರು ಪ್ರಚಾರ ಮಾಡಿದ್ದಾರೆ. ಸಿಎಂ ಪುತ್ರ ಬಿ.ವೈ. ವಿಜಯೇಂದ್ರ ಅವರ ಅಬ್ಬರದ ಪ್ರಚಾರದ ಮಧ್ಯೆ ದೇವೇಗೌಡರ ತಣ್ಣನೆಯ ಪ್ರಚಾರ ಕ್ಲಿಕ್ ಆಗುವ ಸಾಧ್ಯತೆ ಹೆಚ್ಚಿದೆ ಎಂದು ವಿಶ್ಲೇಷಣೆ ಮಾಡಲಾಗಿದೆ.

ಜೊತೆಗೆ ಕಾಂಗ್ರೆಸ್ವ ಅಭ್ಯರ್ಥಿ ಜಯಚಂದ್ರ ಅವರೂ ಕೂಡ ಮತದಾರರ ಮನ ಸೆಳೆಯುವಲ್ಲಿ ಸಫಲರಾಗಿದ್ದಾರೆ. ಆದರೂ ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಶಿರಾ ಕ್ಷೇತ್ರದಲ್ಲಿ ಸ್ಪರ್ಧೆಯಿದೆ. ಅದರಲ್ಲೂ ಅಮ್ಮಾಜಮ್ಮ ಅವರು ಶಾಸಕಿಯಾಗಿ ಆಯ್ಕೆಯಾದರೂ ಅಚ್ಚರಿಯಿಲ್ಲ ಎನ್ನಲಾಗಿದೆ.

ಕಡಿಮೆ ಮತದಾನ

ಕಡಿಮೆ ಮತದಾನ

ಕಳೆದ ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಹೋಲಿಕೆ ಮಾಡಿದರೆ ಈ ಸಲ ಶಿರಾ ಹಾಗೂ ಆರ್ ಆರ್ ನಗರದಲ್ಲಿ ಕಡಿಮೆ ಮತದಾನವಾಗಿದೆ. ಆರ್ ಆರ್ ನಗರ ಕ್ಷೇತ್ರದಲ್ಲಂತೂ ಅತಿ ಕಡಿಮೆ ಅಂದರೆ ಶೇಕಡಾ 45.24ರಷ್ಟು ಮತದಾನವಾಗಿದೆ. ಕಳೆದ ಚುನಾವಣೆಯಲ್ಲಿ ಇಲ್ಲಿ ಶೇಕಡಾ 54.38ರಷ್ಟು ಮತದಾನವಾಗಿತ್ತು.

ಇನ್ನು ಶಿರಾ ಕ್ಷೇತ್ರದಲ್ಲಿ ಶೇಕಡಾ 82.31ರಷ್ಟು ಮತದಾನವಾಗಿದೆ. ಆದರೂ ಇದು ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಶೇಕಡಾ 2.41ರಷ್ಟು ಕಡಿಮೆ ಅಂದರೆ ಶೇಕಡಾ 82.31ರಷ್ಟು ಮತದಾನವಾಗಿದೆ.

ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಆರ್ ಆರ್ ನಗರದಲ್ಲಿ 4.71 ಲಕ್ಷ ಮತದಾರರ ಪೈಕಿ 2.53 ಲಕ್ಷ ಮತದಾರರು ಮತ ಚಲಾಯಿಸಿದ್ದರು. ಈ ಬಾರಿ 4.62 ಲಕ್ಷ ಮತದಾರರಲ್ಲಿ ಕೇವಲ 2.09 ಲಕ್ಷ ಮತದಾರರು ಮತ ಚಲಾಯಿಸಿದ್ದಾರೆ. ಶಿರಾದಲ್ಲಿ ಕಳೆದ ಬಾರಿ 2.12 ಲಕ್ಷ ಮತದಾರರಲ್ಲಿ 1.79 ಲಕ್ಷ ಮತದಾರರು ಮತ ಚಲಾಯಿಸಿದ್ದರು. ಈ ಸಲ 2.15 ಲಕ್ಷ ಮತದಾರರ ಪೈಕಿ 1.82 ಲಕ್ಷ ಮತದಾರರು ಹಕ್ಕು ಚಲಾಯಿಸಿದ್ದಾರೆ.

Recommended Video

Muniratna vs Kusuma : RR Nagar ಕಣದಲ್ಲಿ ಗೆಲ್ಲೋದು ಯಾರು, ಎರಡೂ ಪಕ್ಷಗಳ ಜಿದ್ದಾಜಿದ್ದಿ | Oneindia Kannada
ಮತ ಎಣಿಕೆ ಕೇಂದ್ರಗಳು

ಮತ ಎಣಿಕೆ ಕೇಂದ್ರಗಳು

ರಾಜರಾಜೇಶ್ವರಿ ನಗರ ಉಪ ಚುನಾವಣೆಯ ಮತ ಎಣಿಕೆಯು ಆರ್ ಆರ್ ನಗರದ ಹಲಗೇವಡೇರಹಳ್ಳಿಯ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ನಡೆಯಲಿದೆ. ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಶಿರಾ ಪಟ್ಟಣದಲ್ಲಿ ನಡೆಯಲಿದೆ. ಎರಡೂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಮಾಡಲಾಗಿದೆ.


ನವೆಂಬರ್ 10 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಪೊಲೀಸ್ ಇಲಾಖೆ ಆದೇಶ ಮಾಡಿದೆ.

English summary
Counting of votes for Sira and RR Nagar by-elections will be held on November 10, 2020. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X