Get Updates
Get notified of breaking news, exclusive insights, and must-see stories!

ಕರ್ನಾಟಕದಲ್ಲಿ ದೇಶದ ಮೊದಲ ಸೈಬರ್ ಕಮಾಂಡ್ ಘಟಕ ಸ್ಥಾಪನೆ, ವಿಶೇಷತೆಗಳು

ಬೆಂಗಳೂರು, ಏಪ್ರಿಲ್ 10: ಇಂದಿನ ಜಗತ್ತಿನಲ್ಲಿ ತಂತ್ರಜ್ಞಾನ ಅಭಿವೃದ್ಧಿ ಹೊಂದುತ್ತಿರುವಂತೆ, ಸೈಬರ್ ಅಪರಾಧ ಪ್ರಕರಣಗಳು ಕೂಡ ಅಧಿಕವಾಗುತ್ತಿವೆ. ಬದಲಾದ ನಮ್ಮ ಜೀವನ ಶೈಲಿಯಿಂದಾಗಿ ತಂತ್ರಜ್ಞಾನ ಬಳಕೆ ಹೆಚ್ಚಾಗುತ್ತಿವೆ. ಹೊಸ ಹೊಸ ರೀತಿಯ ವಂಚನೆಗಳು ಹೆಚ್ಚುತ್ತಿದ್ದು, ಸೈಬರ್ ಅಪರಾಧಗಳ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ. ದೇಶದ ಮೊದಲ ಸೈಬರ್ ಕಮಾಂಡ್ ಘಟಕ ಕರ್ನಾಟಕದಲ್ಲಿ ಸ್ಥಾಪನೆಯಾಗುತ್ತಿದೆ.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಕೆ. ಎನ್‌. ವನಜ ಸರ್ಕಾರದ ಅಧೀನ ಕಾರ್ಯದರ್ಶಿ, ಒಳಾಡಳಿತ ಇಲಾಖೆ (ಪೊಲೀಸ್‌ ವೆಚ್ಚ) ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶ ಕರ್ನಾಟಕ ರಾಜ್ಯದಲ್ಲಿ ಹೊಸದಾಗಿ ಸೈಬರ್ ಕಮಾಂಡ್ ಘಟಕ (Cyber Command Unit) ಸ್ಥಾಪಿಸುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ.

Country First Cyber Command Centre To Open In Karnataka

ಪ್ರಸ್ತಾವನೆ ಏನಿತ್ತು?; ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ವಿಜ್ಞಾನ ಹಾಗೂ ತಂತ್ರಜ್ಞಾನದ ಬಳಕೆಯು ಮಾನವನ ಜೀವನ ಶೈಲಿಯನ್ನು ಅತ್ಯಂತ ಸರಳೀಕರಣಗೊಳಿಸಿದ್ದು, ದೈನಂದಿನ ಜೀವನದಲ್ಲಿ ತಂತ್ರಜ್ಞಾನದ ಅತಿಯಾದ ಬಳಕೆ ಹಾಗೂ ಅವಲಂಬನೆಯಿಂದಾಗಿ ಅತಿ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗುತ್ತಿದ್ದು, ಹಳೆಯ ವೃತ್ತಿಪರ ಅಪರಾಧಗಳಾದ ಡಕಾಯಿತಿ, ರಾಬರಿ ಹಾಗೂ ಇತರೆ ಭೌತಿಕ ಕಳ್ಳತನಗಳನ್ನು ಹಿಂದಿಕ್ಕಿ ಅತಿ ಹೆಚ್ಚು ಸೈಬರ್ ಅಪರಾಧಗಳು ವರದಿಯಾಗುತ್ತಿದೆ ಎಂದು ಹೇಳಿದ್ದರು.

ಮಹಾನಗರಗಳಲ್ಲಿ ದಾಖಲಾಗುವ ಅಪರಾಧ ಪ್ರಕರಣಗಳಲ್ಲಿ ಶೇ 20ರಷ್ಟು ಸೈಬರ್ ಪಕರಣಗಳಾಗಿದ್ದು ರಾಜ್ಯದಲ್ಲಿ ಕಳೆದ 4 ವರ್ಷಗಳಲ್ಲಿ ಒಟ್ಟಾರೆಯಾಗಿ 52,000 ಸೈಬರ್ ಅಪರಾಧ ಪ್ರಕರಣಗಳು ವರದಿಯಾಗಿದ್ದು, ಕರ್ನಾಟಕ ರಾಜ್ಯವು ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ದಾಖಲಾಗುವ ಸೈಬರ್ ಅಪರಾಧಗಳ ಸಂಖ್ಯೆಯಲ್ಲಿ ಮಂಚೂಣಿಯಲ್ಲಿರುವುದರಿಂದ ಕರ್ನಾಟಕ ರಾಜ್ಯದಲ್ಲಿ ಸೈಬರ್ ಅಪರಾಧಗಳನ್ನು ತಡೆಗಟ್ಟಲು ಪ್ರತ್ಯೇಕ ಸೈಬರ್ ಅಪರಾಧ ತಡೆ ಘಟಕ ಸೃಜಿಸುವ ಅವಶ್ಯಕತೆ ಕಂಡುಬರುತ್ತದೆ ಎಂದು ತಿಳಿಸಿದ್ದರು.

ರಾಜ್ಯದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 43 ಸಿ.ಇ.ಎನ್ (ಸೈಬರ್, ಎಕನಾಮಿಕ್ಸ್ & ನಾರ್ಕೋಟಿಕ್ಸ್) ಪೊಲೀಸ್ ಠಾಣೆಗಳನ್ನು ಸೈಬರ್ ಅಪರಾಧ ಪೊಲೀಸ್ ಠಾಣೆಗಳೆಂದು ಮರುಪದನಾಮೀಕರಿಸಿ ಹಾಗೂ ಪ್ರಸ್ತುತ ಡಿಜಿಪಿ, ಸಿ.ಐ.ಡಿ ಅವರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಮಟ್ಟದ ವ್ಯಾಪ್ತಿಯನ್ನು ಹೊಂದಿರುವ ಸೈಬರ್ ಅಪರಾಧ ಪೊಲೀಸ್ ಠಾಣೆ ಹಾಗೂ ಬೆಂಗಳೂರು ನಗರ ಪೊಲೀಸ್ ಘಟಕದಲ್ಲಿ ಬೆಂಗಳೂರು ನಗರ ವ್ಯಾಪ್ತಿಯನ್ನು ಒಳಗೊಂಡಿರುವ ಸೈಬರ್ ಅಪರಾಧ ಪೊಲೀಸ್ ಠಾಣೆಗಳನ್ನು ಒಟ್ಟಾರೆ 45 ಪೊಲೀಸ್ ಠಾಣೆಗಳನ್ನು ಪ್ರಸ್ತಾಪಿತ ಸೈಬರ್ ಅಪರಾಧ ತಡೆ ಘಟಕದ ಅಧೀನಕ್ಕೆ ಒಳಪಡಿಸುವಂತೆ ಕೋರಿದ್ದರು.

ಅಲ್ಲದೇ ಕರ್ನಾಟಕ ರಾಜ್ಯದಲ್ಲಿ ಸೈಬರ್ ಅಪರಾಧ ತಡೆ ಘಟಕ ಸ್ಥಾಪಿಸಲು ಹೆಚ್ಚುವರಿಯಾಗಿ ಅವಶ್ಯವಿರುವ 193 ವಿವಿಧ ದರ್ಜೆಯ ಹುದ್ದೆಗಳನ್ನು ಸೃಜಿಸಲು ವಾರ್ಷಿಕವಾಗಿ ಅಂದಾಜು ರೂ.12,93,90307ಗಳ ಆವರ್ತಕ ವೆಚ್ಚ ಹಾಗೂ ರೂ.62,25,00,000 ಅನಾವರ್ತಕ ವೆಚ್ಚ ತಗುಲುವುದಾಗಿ ತಿಳಿಸಿ ಸೈಬರ್ ಅಪರಾಧ ತಡೆ ಘಟಕವನ್ನು ಸ್ಥಾಪಿಸಿ ಮಂಜೂರಾತಿ ನೀಡುವಂತೆ ಮನವಿ ಮಾಡಿದ್ದರು.

ಪ್ರಸ್ತಾವನೆಯನ್ನು ಪರಿಶೀಲಿಸಿ, ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿ ಸೈಬರ್ ಅಪರಾಧಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಸಲುವಾಗಿ ಯಾವುದೇ ಹೊಸ ಹುದ್ದೆಗಳ ಸೃಜನೆ ಇಲ್ಲದೆ, ಈಗಾಗಲೇ ಇರುವ ಹುದ್ದೆಗಳನ್ನು ಬಳಸಿಕೊಂಡು ಮತ್ತು ಹೆಚ್ಚಿನ ಆರ್ಥಿಕ ಹೊರೆ ಇಲ್ಲದೇ ರಾಜ್ಯದಲ್ಲಿ ಹೊಸದಾಗಿ ಸೈಬರ್ ಕಮಾಂಡ್ ಘಟಕವನ್ನು ಸ್ಥಾಪಿಸುವುದು ಸೂಕ್ತವೆಂದು ಪರಿಗಣಿಸಿ ಆದೇಶವನ್ನು ಹೊರಡಿಸಲಾಗಿದೆ.

* ಸಿಐಡಿ ವಿಭಾಗದಲ್ಲಿನ ಡಿಜಿಪಿ, ಮಾದಕ ವಸ್ತು ಮತ್ತು ಸೈಬರ್ ಅಪರಾಧ ಹುದ್ದೆಯನ್ನು ಬೇರ್ಪಡಿಸಿ, ಡಿ.ಜಿ., ಸೈಬರ್ ಕಮಾಂಡ್ ಎಂದು ಪದನಾಮೀಕರಿಸಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಒಳಾಡಳಿತ ಇಲಾಖೆ ಇವರ ಅಧೀನದಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಿದೆ.

* ಸೈಬರ್ ಕಮಾಂಡ್ ಘಟಕವು ಈಗಾಗಲೇ ಅಸ್ತಿತ್ವದಲ್ಲಿರುವ ಹುದ್ದೆಗಳು, ಕಾರ್ಯನಿರ್ವಹಿಸುತ್ತಿರುವ ಕಛೇರಿ ಹಾಗೂ ಮೂಲಸೌಕರ್ಯಗಳನ್ನು ಬಳಸಿಕೊಂಡು ಕಾರ್ಯನಿರ್ವಹಿಸುವಂತೆ ಸೂಚಿಸಿದೆ.

* ಸಿಐಡಿ ವಿಭಾಗದಲ್ಲಿನ ಮಾದಕ ವಸ್ತು ಮತ್ತು ಸೈಬರ್ ಅಪರಾಧಗಳ ಘಟಕವನ್ನು ಕಾರ್ಯನಿರ್ವಹಿಸುತ್ತಿರುವ ಹುದ್ದೆಗಳೊಂದಿಗೆ ಸಿಐಡಿಯಿಂದ ಬೇರ್ಪಡಿಸಿ ಸೈಬರ್ ಕಮಾಂಡ್ ಘಟಕದ ವ್ಯಾಪ್ತಿಗೆ ಒಳಪಡಿಸಿದೆ.

* 43 ಸಿ.ಇ.ಎನ್. ಪೊಲೀಸ್ ಠಾಣೆಗಳು ಸೈಬರ್ ಅಪರಾಧಕ್ಕೆ ಸಂಬಂಧಿಸಿದಂತೆ ಸೈಬರ್ ಕಮಾಂಡ್ ಘಟಕಕ್ಕೆ ಕಾರ್ಯವರದಿ ಮಾಡಿಕೊಳ್ಳುವಂತೆ ಸೂಚಿಸಿದೆ.

* ಸೈಬರ್ ಅಪರಾಧಕ್ಕೆ ಸಂಬಂಧಿಸಿದಂತೆ 43 ಸಿ.ಇ.ಎನ್. ಪೊಲೀಸ್ ಠಾಣೆಗಳ ಮೇಲುಸ್ತುವಾರಿಯನ್ನು ಸಂಬಂಧಪಟ್ಟ ವಲಯಗಳಲ್ಲಿನ ಕೇಂದ್ರ ಸ್ಥಾನದಲ್ಲಿರುವ ಪೊಲೀಸ್‌ ಅಧೀಕ್ಷಕರಿಗೆ ವಹಿಸಲು ಕಮವಹಿಸತಕ್ಕದ್ದು.

* ಡಿ.ಜಿ., ಸೈಬರ್ ಕಮಾಂಡ್‌ರವರು ರಾಜ್ಯದ ಮುಖ್ಯ ಮಾಹಿತಿ ಸುರಕ್ಷತಾ ಅಧಿಕಾರಿಯಾಗಿ (Chief Information Security Officer) ಕರ್ನಾಟಕ ಸೈಬರ್ ಸೆಕ್ಯೂರಿಟಿ ಪಾಲಿಸಿ-2023ರನ್ವಯ ಪ್ರಸ್ತುತ ನಿರ್ವಹಿಸುತ್ತಿರುವ ಡಿ.ಜಿ. (ಪಿ.ಸಿ.ಡಬ್ಲ್ಯೂ) ಕರ್ತವ್ಯವನ್ನು ಮುಂದುವರೆಸತಕ್ಕದ್ದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+