ಮಠಗಳ ಮೇಲೆ ನಿಯಂತ್ರಣಕ್ಕೆ ಸರ್ಕಾರಕ್ಕೆ ಅದೇಶಿಸಲಾಗದು ಎಂದ ಹೈಕೋರ್ಟ್
ಬೆಂಗಳೂರು, ಸೆ.29. ರಾಜ್ಯದಲ್ಲಿನ ಮಠ ಮಾನ್ಯಗಳ ಮೇಲೆ ನಿಯಂತ್ರಣ ಸಾಧಿಸಲು ಪ್ರತ್ಯೇಕ ಕಾನೂನು ರೂಪಿಸಲು ಸಂವಿಧಾನದಡಿ ಸರ್ಕಾರಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಆ ಮೂಲಕ ಆರು ವರ್ಷಗಳ ಸುದೀರ್ಘ ಕಾನೂನು ಸಮರಕ್ಕೆ ನ್ಯಾಯಾಲಯ ತೆರೆ ಎಳೆದಿದೆ.
ರಾಮಚಂದ್ರಾಪುರ ಮಠದ ಆಡಳಿತವನ್ನು ನಿಯಂತ್ರಣಕ್ಕೆ ಪಡೆಯಲು ನಿರ್ದೇಶನ ನೀಡಬೇಕು ಮತ್ತು ರಾಜ್ಯದ ಎಲ್ಲಾಮಠಗಳ ಮೇಲೆ ನಿಯಂತ್ರಣ ಸಾಧಿಸಲು ಶಾಸನ ರೂಪಿಸಲು ಆದೇಶ ನೀಡಬೇಕೇಂದು ಕೋರಿ ಬೆಂಗಳೂರಿನ ಎದುರ್ಕಳ ಈಶ್ವರ್ ಭಟ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನುಹಂಗಾಮಿ ಸಿಜೆ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯಪೀಠ ಗುರುವಾರ ವಿಲೇವಾರಿ ಮಾಡಿದೆ.
ಜೊತೆಗೆ ನ್ಯಾಯಾಲಯ ಒಂದು ವೇಳೆ ಯಾರಾದರೂ ಬಾಧಿತವಾಗಿದ್ದರೆ ಅಂತಹವರು ಸಿವಿಲ್ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿ ಪರಿಹಾರ ಪಡೆಯಲು ಪರ್ಯಾಯ ಮಾರ್ಗವಿದೆ' ಎಂದು ತೀರ್ಪು ನೀಡಿದೆ.

ಅರ್ಜಿದಾರರ ಮನವಿ ಮಾನ್ಯ ಮಾಡಲು ಸಾಂವಿಧಾನಿಕವಾಗಿ ನ್ಯಾಯಾಲಯಕ್ಕೆ ಯಾವುದೇ ವಿಶೇಷ ಅಧಿಕಾರಗಳಿಲ್ಲ. ಸರ್ಕಾರ ಈಗಾಗಲೇ ಮಠಗಳು ಮತ್ತು ಅದಕ್ಕೆ ಹೊಂದಿಕೊಂಡಿರುವ ದೇವಾಲಯಗಳನ್ನು ಕಾನೂನಿನಿಂದ ಹೊರಗಿಟ್ಟಿದೆ. ಹಾಗಾಗಿ, ಈ ಅರ್ಜಿ ವಿಚಾರಣೆಯ ನಿರ್ವಹಣೆಗೆ ಅರ್ಹವಲ್ಲ ಎಂದು ನ್ಯಾಯಾಲಯ ಹೇಳಿದೆ.
ಅಲ್ಲದೆ, ಒಂದು ವೇಳೆ ಯಾರದಾದರೂ ತಕರಾರು ಇದ್ದರೆ ನಾಗರಿಕ ದಂಡ ಸಂಹಿತೆ ಕಲಂ 92ರ ಅನುಸಾರ ಸಿವಿಲ್ ಕೋರ್ಟ್ ನಲ್ಲಿ ಮೊಕದ್ದಮೆ ಹೂಡಿ ಪರಿಹಾರ ಪಡೆಯಲು ಎಲ್ಲ ರೀತಿಯ ಅವಕಾಶವಿದೆ ಎಂದು ಆದೇಶ ನೀಡಿದೆ. ಅರ್ಜಿದಾರಾದ ಎದುರ್ಕುಳ ಈಶ್ವರ ಭಟ್, ಎ.ಕೆ.ಜಯಕೃಷ್ಣ, ಮಯೂರಿ ಗಜಾನನ ಉಪಾಧ್ಯಾಯ, ಮತ್ತಿತರರು 2016ರಲ್ಲಿ, ಹೊಸನಗರದ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಆದ್ದರಿಂದ, ಅವರನ್ನು ಪೀಠಾಧಿಪತಿ ಸ್ಥಾನದಿಂದ ಕೆಳಗಿಳಿಯಲು ನಿರ್ದೇಶಿಸಬೇಕು ಮತ್ತು ಮಠಕ್ಕೆ ಆಡಳಿತಾಧಿಕಾರಿ ನೇಮಿಸಬೇಕು ಎರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕು ಮತ್ತು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಪೀಠದಿಂದ ಕೆಳಗಿಳಿಯಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.
ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಪೀಠದಿಂದ ಇಳಿಯಲು ಆದೇಶ ನೀಡಬೇಕು, ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕು, ಕರ್ನಾಟಕದ ಎಲ್ಲಾಮಠಗಳ ಆಡಳಿತ ನಿಯಂತ್ರಕ್ಕೆ ಒಂದು ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.
ಮಠದಲ್ಲಿ ಸಾಕಷ್ಟು ಆರ್ಥಿಕ ಅವ್ಯವಹಾರ ನಡೆಯುತ್ತಿದೆ ಎಂದು ಅರ್ಜಿದಾರರು ದೂರಿದ್ದರೂ, ಯಾವುದೇ ದಾಖಲಾತಿಗಳನ್ನು ನೀಡದೇ ಸುಳ್ಳು ಆರೋಪ ಮಾಡಿದ್ದರು. ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಯಾವುದೇ ಕಾರಣಕ್ಕೂ ನ್ಯಾಯಾಲಯದಲ್ಲಿ ಪರಿಗಣಿಸಲ್ಪಡ ತಕ್ಕದ್ದಲ್ಲಎಂದು ಮಠದ ಕಡೆಯಿಂದ ಆಕ್ಷೇಪಣೆ ಸಲ್ಲಿಸಲಾಗಿತ್ತು. ಜೊತೆಗೆ ನ್ಯಾಯಾಲಯವು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಅರ್ಜಿದಾರರು ಮನವಿ ಸಲ್ಲಿಸಿದರೆ ಅದನ್ನು ಕಾನೂನಾತ್ಮಕವಾಗಿ ಪರಿಗಣಿಸುವಂತೆ ಮಾಡಿದ್ದ ಕೋರಿಕೆಯ ಆದೇಶವನ್ನು ಹಿಂಪಡೆಯುವಂತೆಯೂ ಅರ್ಜಿಯನ್ನು ಸಲ್ಲಿಸಲಾಗಿತ್ತು. 2016 ರಲ್ಲಿಸಲ್ಲಿಸಿದ್ದ ಈ ಅರ್ಜಿಯನ್ನು ರಾಜ್ಯ ಹೈಕೋರ್ಟ್ 2019 ರಲ್ಲಿತಿರಸ್ಕರಿಸಿ ಆದೇಶಿಸಿತ್ತು.
ಈ ಆದೇಶವನ್ನು ಪ್ರಶ್ನಿಸಿ ಮಠ ಸುಪ್ರೀಂಕೋರ್ಟ್‌ನಲ್ಲಿಮೇಲ್ಮನವಿ ಸಲ್ಲಿಸಿತ್ತು. ಇದನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್, ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಮರ್ಥನೀಯತೆಯನ್ನು ಪರಿಶೀಲಿಸುವಂತೆ ಮತ್ತೆ ಹೈಕೋರ್ಟ್‌ಗೆ ಸೂಚನೆ ನೀಡಿತ್ತು.
ಶ್ರೀಮಠದ ವಿರುದ್ಧ ಷಡ್ಯಂತ್ರದ ಭಾಗವಾಗಿ ಈ ಅರ್ಜಿ ಸಲ್ಲಿಸಲಾಗಿದೆ ಎಂದು ಆಕ್ರೋಶಗೊಂಡ ಶ್ರೀಮಠದ 15 ಸಾವಿರಕ್ಕೂ ಹೆಚ್ಚು ಮಂದಿ ಭಕ್ತರು ಹೊಸನಗರದ ಪ್ರಧಾನ ಮಠದಲ್ಲಿಶಪಥ ಪರ್ವ ನಡೆಸಿ, ಎಚ್ಚರಿಕೆ ಸಂದೇಶ ರವಾನಿಸಿದ್ದನ್ನು ಇಲ್ಲಿಸ್ಮರಿಸಬಹುದು. ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ತಿಮ್ಮಪ್ಪ ಮಡಿಯಾಳ್ ಅವರ ಸಮರ್ಥ ಮಾರ್ಗದರ್ಶನದಲ್ಲಿಶ್ರೀಮಠದ ಎಲ್ಲಕಾರ್ಯಚಟುವಟಿಕೆಗಳು ಪಾರದರ್ಶಕವಾಗಿ ನಡೆಯುತ್ತಿದ್ದು, ಶ್ರೀಮಠದ ಪಾರದರ್ಶಕತೆಗೆ ಐಎಸ್‌ಓ ಪ್ರಮಾಣಪತ್ರ ಬಂದಿರುವುದು ಕೂಡಾ ಉಲ್ಲೇಖನೀಯ ಎಂದು ಮಠದ ಪ್ರಕಟಣೆ ತಿಳಿಸಿದೆ.












Click it and Unblock the Notifications