ನನಗೆ 10,000 ದಂಡ ಹಾಕವ್ರೆ: ಕಷ್ಟ ಹೇಳಿಕೊಂಡ ಸಿದ್ದರಾಮಯ್ಯ
ಮೈಸೂರು, ಮಾರ್ಚ್ 02: ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಅಡಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಪ್ರಮುಖ ಸಚಿವರಿಗೆ 10 ಸಾವಿರ ದಂಡವನ್ನು ಹೈಕೋರ್ಟ್ ವಿಧಿಸಿತ್ತು. 10,000 ದಂಡದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕಷ್ಟ ಹೇಳಿಕೊಂಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಕೋರ್ಟ್ ನನಗೆ 10,000 ರೂ. ದಂಡ ವಿಧಿಸಿದೆ ಎಂದು ತುಂಬಿದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಷ್ಟ ಹೇಳಿಕೊಂಡಿದ್ದಾರೆ. ಬೆಂಗಳೂರಲ್ಲಿ ಯಾವುದೇ ಹೋರಾಟ ಫ್ರೀಡಂಪಾರ್ಕ್ನಲ್ಲೇ ಮಾಡಬೇಕು. ಫ್ರೀಡಂಪಾರ್ಕ್ನಲ್ಲೇ ಹೋರಾಟ ಮಾಡಬೇಕೆಂದು ಹೈಕೋರ್ಟ್ ಸೂಚಿಸಿದೆ.

ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ನಾವು ಹೋರಾಟ ಮಾಡಿದ್ದೆವು. ಆಗ ನನ್ನ ವಿರುದ್ಧ ಪೊಲೀಸರು ಕೇಸ್ ಹಾಕಿದ್ದರು. ಫ್ರೀಡಂಪಾರ್ಕ್ನಲ್ಲೇ ಬಿಟ್ಟು ಬೇರೆ ಜಾಗದಲ್ಲಿ ಹೋರಾಟ ಮಾಡಿದ್ದಕ್ಕೆ ಕೇಸ್. ಇತ್ತೀಚೆಗೆ ಹೈಕೋರ್ಟ್ ನನಗೆ ದಂಡ ಹಾಕಿದೆ. ನಾನು ಈಗ ಸುಪ್ರೀಂಕೋರ್ಟ್ನಲ್ಲಿ ಹೋರಾಟ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಭಾರತದ ಸಂವಿಧಾನ ಜಾರಿಯಾಗಿ 75 ನೇ ವರ್ಷದಲ್ಲಿದ್ದೇವೆ. ಇದು ಅಮೃತ ವರ್ಷವಾಗಿರುವುದರಿಂದ ರಾಜ್ಯ ಸರ್ಕಾರ 2024 ಜನವರಿ 26 ರಿಂದ ರಾಜ್ಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಏರ್ಪಾಡು ಮಾಡಲಾಗಿದೆ. ಫೆಬ್ರವರಿ 23 ರವರೆಗೆ ರಾಜ್ಯದ 31 ಜಿಲ್ಲೆಗಳಲ್ಲಿ 6000 ಗ್ರಾಮ ಪಂಚಾಯಿತಿ ಗಳನ್ನು ತಲುಪಿದೆ.
24 ಮತ್ತು 25 ರಂದು ನಡೆದ ಬೃಹತ್ ಸಮಾವೇಶದಲ್ಲಿ 50 ಸಾವಿರ ಜನ ಪಾಲ್ಗೊಂಡಿದ್ದರು. ದೇಶದಲ್ಲಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ಬಂದಿದೆ. ಸಂವಿಧಾನಕ್ಕೆ ರಕ್ಷಣೆ ಇಲ್ಲದಿರುವ ಪರಿಸ್ಥಿತಿ ನಿರ್ಮಾಣ ವಾಗುತ್ತಿದೆ. ಪ್ರಜಾಸತ್ತೆಯನ್ನು ಹಾಗೂ ಸಂವಿಧಾನವನ್ನು ಉಳಿಸಿಕೊಳ್ಳಬೇಕಾಗಿರುವುದು ಪ್ರತಿ ಭಾರತೀಯನ ಕರ್ತವ್ಯ. ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸಲು ನಾವು ಮತ್ತೊಂದು ಸ್ವಾತಂತ್ರ್ಯ ಹೋರಾಟವನ್ನೇ ಮಾಡಬೇಕಾಗುತ್ತದೆ ಎಂದು ಭಾಷಣಕಾರರು ಅಭಿಪ್ರಾಯ ಪಟ್ಟಿದ್ದಾರೆ ಎಂದು ತಿಳಿಸಿದರು.
ವೈರುಧ್ಯತೆ ಇರುವ ಸಮಾಜಕ್ಕೆ ನಾವು ಕಾಲಿಡುತ್ತಿದ್ದೇವೆ. ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಅಸಮಾನತೆ ಇದ್ದು, ರಾಜಕೀಯ ಸ್ವಾತಂತ್ರ್ಯ ದೊರೆತಿದೆ. ರಾಜಕೀಯ ಪ್ರಜಾಪ್ರಭುತ್ವದಲ್ಲಿ ಒಂದು ಮತ ಒಂದು ಮೌಲ್ಯವಿದ್ದಂತೆ ಸಾಮಾಜಿಕ ಹಾಗೂ ಆರ್ಥಿಕವಾಗಿ ಇಲ್ಲ. ನಮ್ಮಲ್ಲಿ ಅಸಮಾನತೆ ಇದೆ. ಎಲ್ಲಿಯವರೆಗೆ ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಲ್ಲುವುದಿಲ್ಲವೋ ಅಲ್ಲಿಯವರೆಗೆ ರಾಜಕೀಯ ಪ್ರಜಾಪ್ರಭುತ್ವ ಸಾರ್ಥಕವಾಗುವುದಿಲ್ಲ ಎಂದರು.
ಜಾತಿ ವ್ಯವಸ್ಥೆಯ ಕಾರಣಕ್ಕಾಗಿ ಸಾಮಾಜಿಕ, ಆರ್ಥಿಕ ಅಸಮಾನತೆ ನಿರ್ಮಾಣ ಸಂವಿಧಾನದಲ್ಲಿ ಹೇಳಿರುವ ಸ್ವಾತಂತ್ರ್ಯ, ಸಮಾನತೆ , ಭ್ರಾತೃತ್ವ ವನ್ನು ಒಂದರಿಂದ ಮತ್ತೊಂದನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಸಾಮಾಜಿಕ, ಆರ್ಥಿಕ ಸಮಾನತೆ ಇರಬೇಕು. ಜಾತಿ ವ್ಯವಸ್ಥೆಯ ಕಾರಣಕ್ಕಾಗಿ ಸಾಮಾಜಿಕ, ಆರ್ಥಿಕ ಅಸಮಾನತೆ ನಿರ್ಮಾಣವಾಗಿದೆ ಎಂದರು.
ನರೇಂದ್ರ ಮೋದಿಯವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುತ್ತಾರೆ. ನಮ್ಮ ಶಾಸಕ ಬಸನಗೌಡ ಯತ್ನಾಳ್, ಟೋಪಿ ಹಾಕಿದವರು, ಗಡ್ಡ ಬಿಟ್ಟವರು ಹಾಗೂ ಬುರ್ಖಾ ಹಾಕಿದವರು ಕಚೇರಿಗೆ ಬರಬೇಡಿ ಎನ್ನುತ್ತಾರೆ. ನಮ್ಮ ನಡವಳಿಕೆ ಹೇಗಿದೆ ಎಂದು ಗಮನಿಸಬೇಕು. ವಿಮರ್ಶೆ ಮಾಡುವ ಶಕ್ತಿ ಇಲ್ಲದಿದ್ದರೆ ಹೀಗಾಗುತ್ತದೆ ಎಂದರು.
ವಿದ್ಯಾವಂತರು ಅನೇಕರಿಗೆ ಸಂವಿಧಾನದ ಪೀಠಿಕೆ ಏನು ಹೇಳುತ್ತದೆ ಎಂದು ಗೊತ್ತಿಲ್ಲ. ಸಂವಿಧಾನದ ರೀತಿಯಲ್ಲಿ ನಡೆದುಕೊಳ್ಳುವವ ಕೈಯಲ್ಲಿ ಸಂವಿಧಾನವಿದ್ದರೆ ಅದು ಶ್ರೇಷ್ಠ ಸಂವಿಧಾನವಾಗುತ್ತದೆ ಎಂದು ಅಂಬೇಡ್ಕರ್ ಹೇಳಿದ್ದರು. ಸಂವಿಧಾನದ ಬಗ್ಗೆ ನಂಬಿಕೆ, ಗೌರವ ಇಲ್ಲದಿದ್ದವರ ಕೈಯಲ್ಲಿ ಅದು ಉಳಿಯುವುದಿಲ್ಲ, ಸಂವಿಧಾನದ ಬಗ್ಗೆ ನಂಬಿಕೆ, ಗೌರವ ಇಲ್ಲದಿದ್ದವರ ಕೈಯಲ್ಲಿ ಅದು ಉಳಿಯುವುದಿಲ್ಲ. ಇದು ನಮ್ಮ ಮುಂದಿರುವ ಸವಾಲು ಎಂದರು. ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ವನ್ನೇ ದುರ್ಬಲಗೊಳಿಸಿದರೆ ಸಂವಿಧಾನ ಹೇಗೆ ಶಕ್ತಿ ಯುತವಾಗಿರಲು ಸಾಧ್ಯ? ಎಂದು ಹೇಳಿದರು.












Click it and Unblock the Notifications