ಬಂಧನ ಭೀತಿಯಿಂದ ಡಿ.ಕೆ. ಶಿವಕುಮಾರ್, ಸುರೇಶ್ ಪಾರು
ಬೆಂಗಳೂರು, ಮಾರ್ಚ್ 22: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ.ಕೆ. ಸುರೇಶ್ ಬಂಧನ ಭೀತಿಯಿಂದ ಪಾರಾಗಿದ್ದಾರೆ. ಆರ್ಥಿಕ ಅಪರಾಧಗಳ ನ್ಯಾಯಾಲಯ ಇಬ್ಬರಿಗೂ ಜಾಮೀನು ಮಂಜೂರು ಮಾಡಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಆಗಸ್ಟ್ 2, 2017ರಂದು ಈಗಲ್ಟನ್ ರೆಸಾರ್ಟ್ ಮೇಲೆ ಐಟಿ ದಾಳಿ ನಡೆಸಿದ ಸಂದರ್ಭ ಡಿ.ಕೆ. ಶಿವಕುಮಾರ್ ಕಾಗದ ಪತ್ರಗಳನ್ನು ಹರಿದು ಹಾಕಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದರು ಎಂದು ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಇಂದು ವಿಚಾರಣೆಗೆ ಡಿಕೆ ಸಹೋದರರು ಹಾಜರಾಗಿದ್ದರು. ಮತ್ತು ಇದೇ ವೇಳೆ ಜಾಮೀನಿಗೆ ಅರ್ಜಿಯನ್ನೂ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ 25 ಸಾವಿರ ಮೊತ್ತದ ಬಾಂಡ್ ಮತ್ತು ಇಬ್ಬರ ಭದ್ರತೆ ಮೇಲೆ ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ಗೆ ಜಾಮೀನು ಮಂಜೂರು ಮಾಡಿದೆ. ಹೀಗಾಗಿ ಇಬ್ಬರೂ ಬಂಧನ ಭೀತಿಯಿಂದ ಪಾರಾಗಿದ್ದಾರೆ.












Click it and Unblock the Notifications