25 ವರ್ಷ ಹಿಂದಿನ ಪ್ರಕರಣಕ್ಕೆ ಮರುಜೀವ, ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್
Recommended Video

ಮೈಸೂರು, ಜೂನ್ 18: ಯಾಕೋ ಸಿದ್ದರಾಮಯ್ಯ ಅವರ ಟೈಮೇ ಸರಿ ಇದ್ದಂತಿಲ್ಲ. ಕಾಂಗ್ರೆಸ್‌ನಲ್ಲಿ ಮೂಲೆಗುಂಪಾಗಿ ಅನುಭವಿಸುತ್ತಿರುವ ನೋವಿನ ಜೊತೆಗೆ ಈಗ ಕೋರ್ಟ್ ಕಂಟಕವೂ ಎದುರಾಗಿದೆ.
25 ವರ್ಷ ಹಲೆಯ ಪ್ರಕರಣಕ್ಕೆ ಮರುಜೀವ ಬಂದಿದ್ದು, ಮೈಸೂರಿನ ಎರಡನೇ ಸತ್ರ ಪ್ರಧಾನ ನ್ಯಾಯಾಲಯವು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿದೆ. ಇಂದು ಸಂಜೆ ಒಳಗೆ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗಲಿದೆ.
1988ರಲ್ಲಿ ಸಿದ್ದರಾಮಯ್ಯ ಅವರು ಮೈಸೂರಿನ ಹಿಣಕಲ್ ಗ್ರಾಮ ಪಂಚಾಯಿತಿಗೆ ಸೇರಿದ 10 ಗುಂಟೆ ಜಮೀನು ಖರೀದಿಸಿದ್ದರು. ಆದರೆ ಈ ಜಾಗ ಮತ್ತು ಇದರ ಜೊತೆಗೆ ಇನ್ನೂ 20 ಗುಂಟೆ ಜಾಗವನ್ನು ಮುಡಾ ಅನಧಿಕೃತವಾಗಿ ಢಿನೋಟಿಫೈ ಮಾಡಿದೆ ಎಂದು ಜಾಗದ ಮಾಲೀಕರು ನ್ಯಾಯಾಲಯದ ಮೆಟ್ಟಿಲೇರಿದ್ದರು.

ಸಿದ್ದರಾಮಯ್ಯ ಅವರು ಆಗ ಕೊಂಡಿದ್ದ 107-74 ಅಡಿ ಜಾಗದಲ್ಲಿ ಅನಧಿಕೃತವಾಗಿ 120-75 ಅಡಿ ಮನೆ ನಿರ್ಮಿಸಿದ್ದರು, ಆ ನಂತರ ಅದನ್ನು ಕರ್ನಾಟಕದ ಮಧ್ಯದ ದೊರೆ ಹರಿ ಖೋಡೆ ಅವರಿಗೆ ಮಾರಾಟ ಮಾಡಿದ್ದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗಲೇ ವಕೀಲರಾದ ಗಂಗರಾಜು ಮತ್ತು ಸಂಗಮೇಶ್ ಎಂಬುವರು ಈ ಪ್ರಕರಣವನ್ನು ಕೈಗೆತ್ತಿಕೊಂಡು ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಲು ರಾಜ್ಯಪಾಲರ ಒಪ್ಪಿಗೆ ಕೇಳಿದ್ದರು ಆದರೆ ರಾಜ್ಯಪಾಲರು ಒಪ್ಪಿರಲಿಲ್ಲ. ಆದರೆ ಈಗ ನ್ಯಾಯಾಲಯ ಎಫ್‌ಐಆರ್ ದಾಖಲಿಸಲು ಸೂಚಿಸಿದೆ.
ಇದೇ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಜೊತೆಗೆ ಇನ್ನೂ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತಿದೆ. ಇಂದು ಸಂಜೆ (ಜೂನ್ 18) ಒಳಗೆ ಮೈಸೂರಿನ ಲಕ್ಷ್ಮೀಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಲಿದೆ.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications