ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಘವೇಶ್ವರ ಶ್ರೀಗಳಿಗೆ ಸಂಕಷ್ಟ ತಂದ ಕೋರ್ಟ್ ಸಮನ್ಸ್

|
Google Oneindia Kannada News

ಬೆಂಗಳೂರು, ಅಕ್ಟೋಬರ್ 08 : ಎರಡು ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಯಾಗಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿಗಳಿಗೆ ಖುದ್ದಾಗಿ ಕೋರ್ಟ್‌ಗೆ ಹಾಜರಾಗುವಂತೆ 1ನೇ ಎಸಿಎಂಎಂ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.

ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಘವೇಶ್ವರ ಭಾರತಿ ಸ್ವಾಮೀಜಿಗಳು ಪಡೆದಿರುವ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಸಿಐಡಿ ಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಶುಕ್ರವಾರ ಕೋರ್ಟ್‌ ಮುಂದೆ ಖುದ್ದಾಗಿ ಹಾಜರಾಗುವಂತೆ ಗುರುವಾರ ಸಮನ್ಸ್ ಜಾರಿಗೊಳಿಸಿದೆ. [ಶ್ರೀಗಳ ಜಾಮೀನು ರದ್ದುಗೊಳಿಸಿ : ಸಿಐಡಿ]

raghaveshwara swamiji

ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎ.ಬೆಳ್ಳಿಯಪ್ಪ ಅವರು ಸೋಮವಾರ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಐಡಿ ಪರವಾಗಿ ಅರ್ಜಿ ಸಲ್ಲಿಸಿದ್ದು, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ವೈದ್ಯಕೀಯ ಪರೀಕ್ಷೆಗೆ ಶ್ರೀಗಳು ಹಾಜರಾಗಿಲ್ಲ. ಆದ್ದರಿಂದ ಅವರ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದರು. [ಶ್ರೀಗಳ ವಿರುದ್ಧದ ಚಾರ್ಜ್ ಶೀಟ್ ನಲ್ಲೇನಿದೆ ಏನಿದೆ?]

ರಾಮಕಥಾ ಗಾಯಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ನಂತರ ಶ್ರೀಗಳಿಗೆ ಸೆ.30ರಂದು ವೈದ್ಯಕೀಯ ಪರೀಕ್ಷೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ, ತಾವು ಈಗಾಗಲೇ ಡಿಎನ್‌ಎ ಪರೀಕ್ಷೆಗೆ ಹಾಜರಾಗಿದ್ದೇನೆ ಉಳಿದ ಮೂರು ಪರೀಕ್ಷೆಗಳು ಅಗತ್ಯವಿಲ್ಲ ಎಂದು ಪತ್ರ ಬರೆದಿದ್ದ ಶ್ರೀಗಳು ವೈದ್ಯಕೀಯ ಪರೀಕ್ಷೆಗೆ ಹಾಜರಾಗಿರಲಿಲ್ಲ. [ರಾಘವೇಶ್ವರ ಶ್ರೀಗಳ ಪುರುಷತ್ವ ಪರೀಕ್ಷೆ ಆಗಿಲ್ಲ ಮುಂದೇನು?]

ಇದನ್ನೇ ಆಧಾರವಾಗಿಟ್ಟುಕೊಂಡು ಸಿಐಡಿ ಕೋರ್ಟ್ ಮೆಟ್ಟಿಲೇರಿತ್ತು. ರಾಘವೇಶ್ವರ ಶ್ರೀಗಳು ವೈದ್ಯಕೀಯ ಪರೀಕ್ಷೆಗೆ ಸಹಕಾರ ನೀಡುತ್ತಿಲ್ಲ. ಆದ್ದರಿಂದ ಅವರು ಪಡೆದಿರುವ ಜಾಮೀನನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಅಕ್ಟೋಬರ್ 9ರ ಶುಕ್ರವಾರ ಖುದ್ದಾಗಿ ಹಾಜರಾಗುವಂತೆ ಶ್ರೀಗಳಿಗೆ ಸಮನ್ಸ್ ಜಾರಿಗೊಳಿಸಿದೆ.

English summary
Bengaluru 1st ACMM court on Thursday issued summons to the Ramachandrapura math Raghaveshwara Bharathi Swamiji to appear before court on Friday, October 9, 2015. CID has filed an application before the court to cancel the bail granted to Swamiji who is facing two rape charges.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X