ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿ.ಜೆ.ಪುಟ್ಟಸ್ವಾಮಿ ಪೀಠಾರೋಹಣಕ್ಕೆ ಕೋರ್ಟ್ ಬ್ರೇಕ್

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ಮೇ 13. ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪೀಠಾಧಿಪತಿ ಸ್ಥಾನ ಅಲಂಕರಿಸಲು ಬ್ರೇಕ್ ಬಿದ್ದಿದೆ. ಇದರೊಂದಿಗೆ ಗಾಣಿಗ ಮಠದ ಪೀಠಾಧಿಪತಿ ವಿವಾದಕ್ಕೆ ಹೊಸ ತಿರುವು ಸಿಕ್ಕಿದೆ.

ಪುಟ್ಟಸ್ವಾಮಿ ಪೀಠಾರೋಹಣ ಮಾಡುವುದಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಮಧ್ಯಂತರ ಆದೇಶಿಸಿದೆ.

ಎನ್. ರಾಜು, ರಂಗಸ್ವಾಮಿ, ಎಂ.ಪಿ. ಹೇಮಾವತಿ, ಟಿ.ಎಂ.ಸಿ ಯತೀಶ್ ಕುಮಾರ ಹಾಗೂ ಗೋವಿಂದರಾಜು ಮತ್ತಿತರರು ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಮಾಡಿದೆ.

 Court puts break for former minister BJ Puttaswamy to take over as Peethadhipathi

ಬಿ.ಜೆ. ಪುಟ್ಟಸ್ವಾಮಿ ಅವರು ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪೀಠಾಧಿಪತಿ ಸ್ಥಾನ ಅಧಿರೋಹಣ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ನಿರ್ದೇಶಿಸಿದ ನ್ಯಾಯಪೀಠ, ಜೂ.13ಕ್ಕೆ ವಿಚಾರಣೆ ಮುಂದೂಡಿದೆ.

ಅಲ್ಲದೆ, ಬಿ.ಜೆ.ಪುಟ್ಟಸ್ವಾಮಿ, ಅಖಿಲ ಕರ್ನಾಟಕ ಗಾಣಿಗ ಸಂಘದ ಆಡಳಿತಾಧಿಕಾರಿ ಎಂ.ಪಿ ಮಂಜುನಾಥ್ ಸೇರಿದಂತೆ ವಿಶ್ವ ಗಾಣಿಗ ಸಮುದಾಯದ ಟ್ರಸ್ಟ್‌ನ 10 ಮಂದಿ ಟ್ರಸ್ಟಿಗಳು ಮತ್ತು ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠಕ್ಕೆ ನ್ಯಾಯಾಲಯ ತುರ್ತು ನೋಟಿಸ್ ಜಾರಿ ಮಾಡಿದೆ.

ಅರ್ಜಿದಾರರ ಪರ ವಕೀಲರು, ವಿಶ್ವ ಗಾಣಿಗ ಸಮುದಾಯದ ಟ್ರಸ್ಟ್ ರಚನೆಯೇ ಕಾನೂನು ಬಾಹಿರವಾಗಿದೆ. ಹಾಗಾಗಿ, ಟ್ರಸ್ಟ್ ಚಟುವಟಿಕೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡು ಹೋಗಬೇಕು. ಇದೇ 15ರಂದು ಬಿ.ಜೆ.ಪುಟ್ಟಸ್ವಾಮಿ ಅವರು ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಮೊದಲ ಪೀಠಾಧಿಪತಿಯಾಗಿ ಅಧಿಕಾರ ಸ್ವೀಕರಿಸುವುದಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಿದ್ದರು.

ಇದೇ ಮೇ 4ರಂದು ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ, ಐದು ದಶಕಗಳ ಸುಧೀರ್ಘ ಸಾಮಾಜಿಕ ಹಾಗೂ ರಾಜಕೀಯ ಜೀವನದಲ್ಲಿ ನಡೆಸಿದ್ದೇನೆ ಎಂದು ಹೇಳಿಕ ಲೌಖಿಕ ಜೀವನ ತ್ಯಜಿಸಿ ಮೇ 6ಕ್ಕೆ ಸನ್ಯಾಸ ದೀಕ್ಷೆ ಸ್ವೀಕರಿಸುವುದಾಗಿ ಹೇಳಿದ್ದರು.

ಮೇ 15 ರಂದು ಮಾದನಾಯ್ಕನಹಳ್ಳಿಯಲ್ಲಿ ಇರುವ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪೀಠಾಧಿಪತಿಯಾಗಿ ಅಧಿಕಾರ ವಹಿಸಿಕೊಳ್ಳುತ್ತೇನೆ. ಕೈಲಾಸ ಮಠದ ಜಯತೀರ್ಥ ಸ್ವಾಮೀಜಿಗಳು ಪಟ್ಟಾಭಿಷೇಕ ಮಹೋತ್ಸವ ನೆರವೇರಿಸಿಕೊಡಲಿದ್ದಾರೆಂದು ತಿಳಿಸಿದ್ದರು.

English summary
Court puts break for former minister B J Puttaswamy to take over as Sri Kshetra Thaileshwara Ganigar Maha Sangha Peethadhipathi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X