ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಅವಧಿ 5 ವರ್ಷಕ್ಕೆ ವಿಸ್ತರಣೆ ಇಲ್ಲ

ಬೆಂಗಳೂರು, ಆಗಸ್ಟ್ 21 : ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಅವಧಿಯನ್ನು 5 ವರ್ಷಕ್ಕೆ ವಿಸ್ತರಣೆ ಮಾಡಲು ನ್ಯಾಯಾಲಯ ನಿರಾಕರಿಸಿದೆ. ಅಧ್ಯಕ್ಷರ ಅವಧಿಯನ್ನು 3 ರಿಂದ 5 ವರ್ಷಕ್ಕೆ ವಿಸ್ತರಣೆ ಮಾಡುವ ಪ್ರಸ್ತಾಪವಿತ್ತು.

ಅರೆ ನ್ಯಾಯಿಕ ನ್ಯಾಯಾಲಯ (ಜಿಲ್ಲಾ ನೋಂದಣಾಧಿಕಾರಿಗಳು ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರು) ಅಧ್ಯಕ್ಷರ ಅವಧಿಯನ್ನು ವಿಸ್ತರಣೆ ಮಾಡುವ ಪ್ರಸ್ತಾಪವನ್ನು ತಿರಸ್ಕರಿಸಿದೆ. ಕನ್ನಡ ಸಾಹಿತ್ಯ ಪರಿಷತ್ ಈ ಆದೇಶವನ್ನು ಕೆಎಟಿಯಲ್ಲಿ ಪ್ರಶ್ನಿಸುವ ಸಾಧ್ಯತೆ ಇದೆ.

2018ರ ಮಾರ್ಚ್‌ನಲ್ಲಿ ಉಡುಪಿಯಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ವಿಶೇಷ ಸಕಲ ಸದಸ್ಯರ ಸಭೆಯಲ್ಲಿ ಅಧ್ಯಕ್ಷರ ಅವಧಿಯನ್ನು 3 ರಿಂದ 5 ವರ್ಷಕ್ಕೆ ಏರಿಕೆ ಮಾಡುವ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಕನ್ನಡ ಸಂಘರ್ಷ ಸಮಿತಿ ಈ ನಿರ್ಣಯವನ್ನು ಅರೆ ನ್ಯಾಯಿಕ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿತ್ತು.

Court rejects term extension of Kannada Sahitya Parishat president

ಕನ್ನಡ ಸಂಘರ್ಷ ಸಮಿತಿಯ ಕೋ.ವೆಂ.ರಾಮಕೃಷ್ಣೇಗೌಡರು ಕನ್ನಡ ಸಾಹಿತ್ಯ ಪರಿಷತ್ತು, ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರ ಅವಧಿಯನ್ನು 5 ವರ್ಷಕ್ಕೆ ಏರಿಸಬೇಕು ಎಂಬ ನಿರ್ಣಯವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಉಡುಪಿಯಲ್ಲಿ ನಡೆದ ಸಭೆಯ ನಿರ್ಣಯವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದರು.

ಕೆಎಟಿಗೆ ಮೇಲ್ಮನವಿ : ಅರೆ ನ್ಯಾಯಿಕ ನ್ಯಾಯಾಲಯದ ಆದೇಶದ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಅವರು ಪ್ರತಿಕ್ರಿಯೆ ನೀಡಿದ್ದು, 'ನ್ಯಾಯಾಲಯದ ಆದೇಶ ಏಕಪಕ್ಷೀಯವಾಗಿದೆ ಎಂದು ನಮ್ಮ ವಕೀಲರು ಅಭಿಪ್ರಾಯಪಟ್ಟಿದ್ದಾರೆ. ಈ ಆದೇಶವನ್ನು ಕೆಎಟಿಯಲ್ಲಿ ಪ್ರಶ್ನೆ ಮಾಡುವುದಾಗಿ' ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+