ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋಲಾರದಲ್ಲಿ ಕೊವ್ಯಾಕ್ಸಿನ್ ಉತ್ಪಾದನಾ ಘಟಕ ಸ್ಥಾಪನೆ

|
Google Oneindia Kannada News

ಬೆಂಗಳೂರು, ಮೇ 14; " ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ಕೊವ್ಯಾಕ್ಸಿನ್ ತಯಾರಿಕಾ ಘಟಕ ಸ್ಥಾಪನೆಯಾಗಲಿದೆ. ಈಗಾಗಲೇ ಸರ್ಕಾರ ಎಲ್ಲಾ ಆಡಳಿತಾತ್ಮಕ ಒಪ್ಪಿಗೆ ನೀಡಿದೆ" ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ ಡಾ. ಸಿ. ಎನ್. ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಭಾರತ್ ಬಯೋಟೆಕ್ ರಾಜಧಾನಿಗೆ ಹತ್ತಿರದಲ್ಲಿರುವ ಮಾಲೂರಿನಲ್ಲಿ ಘಟಕ ಸ್ಥಾಪನೆ ಮಾಡುತ್ತಿದೆ. ಅಲ್ಲಿಗೆ ರೈಲು ಸೇರಿದಂತೆ ಉತ್ತಮ ಸಂಪರ್ಕ ವ್ಯವಸ್ಥೆ ಇದೆ" ಎಂದರು.

'ಭಾರತ ಕೊರೊನಾ ವಿರುದ್ಧ ಗೆಲ್ಲುತ್ತದೆ, ಆದಷ್ಟು ಬೇಗ ವ್ಯಾಕ್ಸಿನ್ ಸಿಗಬೇಕಿದೆ’ 'ಭಾರತ ಕೊರೊನಾ ವಿರುದ್ಧ ಗೆಲ್ಲುತ್ತದೆ, ಆದಷ್ಟು ಬೇಗ ವ್ಯಾಕ್ಸಿನ್ ಸಿಗಬೇಕಿದೆ’

"ಘಟಕ ನಿರ್ಮಾಣಕ್ಕೆ ಸರ್ಕಾರ ಎಲ್ಲಾ ರೀತಿಯ ಒಪ್ಪಿಗೆ ನೀಡಿದೆ. ಆಡಳಿತಾತ್ಮಕ ಕೆಲಸಗಳನ್ನು ಕಂಪನಿ ಪೂರ್ಣ ಮಾಡುತ್ತಿದ್ದು, ಸಿವಿಲ್ ಕಾಮಗಾರಿಗಳು ಸಹ ಆರಂಭವಾಗಿವೆ. ಅವು ತ್ವರಿತವಾಗಿ ಪೂರ್ಣಗೊಂಡು ಲಸಿಕೆ ಉತ್ಪಾದನೆ ಶೀಘ್ರವೇ ಆರಂಭವಾಗಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೊವ್ಯಾಕ್ಸಿನ್ 2, 3ನೇ ಹಂತದ ಪ್ರಯೋಗ; ಹೇಗೆ ನಡೆಯಲಿದೆ? ಕೊವ್ಯಾಕ್ಸಿನ್ 2, 3ನೇ ಹಂತದ ಪ್ರಯೋಗ; ಹೇಗೆ ನಡೆಯಲಿದೆ?

Covaxin

"ಕೋವಿಶೀಲ್ಡ್ ತಯಾರು ಮಾಡುವ ಸೀರಂ ಮಾತ್ರವಲ್ಲ ಯಾವುದೇ ಲಸಿಕಾ ತಯಾರಿಕೆ ಕಂಪನಿ ರಾಜ್ಯಕ್ಕೆ ಬಂದು ಘಟಕ ಸ್ಥಾಪನೆ ಮಾಡಲು ಮುಂದಾದರೆ ಸರ್ಕಾರ ಅಗತ್ಯ ನೆರವು ನೀಡಲಿದೆ. ಅತ್ಯಂತ ಕ್ಷಿಪ್ರಗತಿಯಲ್ಲಿ ಅನುಮೋದನೆಗಳನ್ನು ನೀಡಲಾಗುತ್ತದೆ" ಎಂದು ಅಶ್ವಥ್ ನಾರಾಯಣ್ ಹೇಳಿದರು.

ಉತ್ತರ ಪ್ರದೇಶದಲ್ಲಿ ತಿಂಗಳಿಗೆ 2 ಕೋಟಿ ಡೋಸ್ ಕೊವ್ಯಾಕ್ಸಿನ್ ಉತ್ಪಾದನೆ ಉತ್ತರ ಪ್ರದೇಶದಲ್ಲಿ ತಿಂಗಳಿಗೆ 2 ಕೋಟಿ ಡೋಸ್ ಕೊವ್ಯಾಕ್ಸಿನ್ ಉತ್ಪಾದನೆ

"ಕೇಂದ್ರ ಸರ್ಕಾರ ಸಹ ಲಸಿಕೆ ತಯಾರಿಕೆ ಕಂಪನಿಗಳಿಗೆ ಉತ್ತೇಜನವನ್ನು ನೀಡುತ್ತಿದೆ. ಜಾಗತಿಕ ಮಟ್ಟದಲ್ಲಿ ಲಸಿಕೆಗಳ ಮೇಲಿರುವ ಪೇಟೆಂಟ್ ವಿನಾಯಿತಿ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿ ವಿವಿಧ ದೇಶಗಳ ನಾಯಕರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಇನ್ನಷ್ಟು ಲಸಿಕಾ ತಯಾರಿಕಾ ಕಂಪನಿಗಳು ರಾಜ್ಯಕ್ಕೆ ಬರಲಿವೆ" ಎಂದರು.

ಪ್ರಸ್ತುತ ಹೈದರಾಬಾದ್‌ನಲ್ಲಿ ಭಾರತ್ ಬಯೋಟೆಕ್ ತನ್ನ ಮುಖ್ಯ ಕಚೇರಿ ಹೊಂದಿದೆ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಸಹಯೋಗದಲ್ಲಿ ಸ್ಥಳೀಯವಾಗಿ ಕೊವ್ಯಾಕ್ಸಿನ್ ಲಸಿಕೆಯನ್ನು ಅಭಿವೃದ್ಧಿಗೊಳಿಸಿದೆ.

Recommended Video

ದೇಶದ ಜನರಿಗೆ ಸಿಹಿ ಸುದ್ದಿ ಕೊಟ್ಟ ಬೆಂಗಳೂರು | Oneindia Kannada

ದೇಶದಲ್ಲಿ ಈಗ ನಡೆಯುತ್ತಿರುವ ಲಸಿಕಾ ಅಭಿಯಾನದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಈ ಲಸಿಕೆ ನೀಡಲಾಗುತ್ತಿದೆ. 2 ಮತ್ತು 3ನೇ ಹಂತದಲ್ಲಿ 2 ರಿಂದ 18 ವರ್ಷದ ವಯೋಮಿತಿ ಜನರ ಮೇಲೆ ಕ್ಲಿನಿಕಲ್ ಪ್ರಯೋಗ ನಡೆಸಲು ಈಗ ಅನುಮತಿ ಸಿಕ್ಕಿದೆ.

English summary
Bharat Biotech will set up Covaxin production unit in Malur industrial area of Kolar, Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X