ಕರ್ನಾಟಕದಲ್ಲಿ ಯಾರಿಗೂ ಸಿಗುವುದಿಲ್ಲ ಕೊವ್ಯಾಕ್ಸಿನ್ ಮೊದಲ ಡೋಸ್ ಲಸಿಕೆ
ಬೆಂಗಳೂರು, ಮೇ 24: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ಸಂದರ್ಭದಲ್ಲಿ ದೇಶವ್ಯಾಪಿ ಲಸಿಕೆ ಅಭಾವ ಸೃಷ್ಟಿಯಾಗಿದೆ. ಕೊವಿಡ್-19 ಲಸಿಕೆ ಕೊರತೆ ಎದುರಿಸುತ್ತಿರುವ ರಾಜ್ಯಗಳಿಲ್ಲಿ ಕರ್ನಾಟಕ ಸಹ ಒಂದಾಗಿದೆ.
ಪ್ರಸ್ತುತ ಸನ್ನಿವೇಶದಲ್ಲಿ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುವ ಕೊವ್ಯಾಕ್ಸಿನ್ ಲಸಿಕೆ ಸರಬರಾಜು ಮಾಡುವುದಕ್ಕೆ ಸಾಧ್ಯವಾಗದ ಹಿನ್ನೆಲೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೊಸ ಸಲಹೆಯನ್ನು ನೀಡಿದೆ.
ಈಗಾಗಲೇ ಎರಡನೇ ಡೋಸ್ ಲಸಿಕೆ ಪಡೆಯಲು ಹೆಸರು ನೋಂದಾಯಿಸಿಕೊಂಡಿರುವ 45 ವರ್ಷದ ಮೇಲ್ಪಟ್ಟವರಿಗೆ ಲಸಿಕೆ ವಿತರಿಸಲು ಮೊದಲ ಆದ್ಯತೆಯನ್ನು ನೀಡಬೇಕು. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬಾಕಿ ಉಳಿದಿರುವ ಕೊವ್ಯಾಕ್ಸಿನ್ ಲಸಿಕೆಯನ್ನು 45 ವರ್ಷ ಮೇಲ್ಪಟ್ಟವರಿಗೆ ನೀಡುವಂತೆ ಸೂಚಿಸಲಾಗಿದೆ.

ಕರ್ನಾಟಕದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ:
ಕರ್ನಾಟಕದಲ್ಲಿ ಈವರೆಗೂ7,08,915 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 4,66,479 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 5,55,858 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 2,02,541 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. 45 ವರ್ಷಕ್ಕಿಂತ ಮೇಲ್ಪಟ್ಟ 80,59,190 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 19,59,977 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.












Click it and Unblock the Notifications