ಕೊರೊನಾ ಅನ್ ಲಾಕ್ 2.0: ರಾಜ್ಯದಲ್ಲಿ ಷರತ್ತು ಬದ್ಧ ಬಸ್ ಸಂಚಾರಕ್ಕೆ ಅವಕಾಶ!
ಬೆಂಗಳೂರು, ಜೂ. 20: ಕೊರೊನಾ ಸೋಂಕು ಕಡಿಮೆಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಷರತ್ತು ಬದ್ಧ ಸಾರ್ವಜನಿಕ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದೆ. ಸೋಮವಾರದಿಂದ ರಾಜ್ಯದಲ್ಲಿ ಕೆಎಸ್ಆರ್‌ಟಿಸಿ ಹಾಗೂ ಬೆಂಗಳೂರಿನಲ್ಲಿ ಬಿಎಂಟಿಸಿ ಮತ್ತು ಮೆಟ್ರೊ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕೊರೊನಾ ಸೋಂಕು ನಿಯಂತ್ರಣದ ಷರತ್ತುಗಳನ್ನು ಪ್ರಯಾಣಿಕರು ಕಡ್ಡಾಯವಾಗಿ ಪಾಲಿಸಲು ಸೂಚಿಸಿದೆ.

ಕೆಎಸ್ಆರ್‌ಟಿಸಿ ಬಸ್ ಸಂಚಾರ
ಬೆಂಗಳೂರಿನಲ್ಲಿ 6400 ಬಿಎಂಟಿಸಿ ಬಸ್‌ಗಳಿವೆ. ಆದರೆ ಮೊದಲ ಪಾಳಿಯಲ್ಲಿ 1200 ಎರಡನೇ ಪಾಳಿಯಲ್ಲಿ 800 ಬಸ್‌ಗಳ ಸಂಚಾರಕ್ಕೆ ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆ ನಿರ್ಧರಿಸಿದೆ. ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಎಸಿ ರಹಿತ ಸಾಮಾನ್ಯ ಬಸ್‌ಗಳ ಸಂಚಾರಕ್ಕೆ ಅವಕಾಶ ಮಾಡಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ವಿವಿಧೆಡೆ ಸಂಚರಿಸುತ್ತಿದ್ದ ಎಸಿ ಬಸ್ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿಲ್ಲ.

ಬಿಎಂಟಿಸಿ ಬಸ್ ಸಂಚಾರ

ಶೇ. 50 ರಷ್ಟು ಪ್ರಯಾಣಿಕರಿಗೆ ಅವಕಾಶ
ಇನ್ನು ಬೆಂಗಳೂರಿನಲ್ಲಿ ಸಂಚರಿಸುವ ಬಸ್‌ಗಳಲ್ಲಿ ಬಸ್ ಸಾಮರ್ಥ್ಯದ ಸೀಟುಗಳಲ್ಲಿ ಶೇ. 50 ರಷ್ಟು ಪ್ರಯಾಣಿಕರಷ್ಟೇ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ. ಒಂದು ಸೀಟಿನಲ್ಲಿ ಒಬ್ಬರಷ್ಟೇ ಕೂರಬೇಕು. ಅನ್ ಲಾಕ್ ನಿಯಮದ ಪ್ರಕಾರ ಒಂದು ಬಿಎಂಟಿಸಿ ಬಸ್ ನಲ್ಲಿ ಸರಾಸರಿ 25 ರಿಂದ 30 ಪ್ರಯಾಣಿಕರಷ್ಟೇ ಪ್ರಯಾಣಿಸಲ ಅವಕಾಶ ಕಲ್ಪಿಸಲಾಗುತ್ತಿದೆ. ಆದರೆ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ನಿರ್ವಾಹಕರು ಸಹ ಕಡ್ಡಾಯವಾಗಿ ಮಾಸ್ಕ್ ಧರಿಸುವ ಜತೆಗೆ ಎರಡು ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಕರ್ತವ್ಯಕ್ಕೆ ಹಾಜರಾಗಲು ಸೂಚಿಸಲಾಗಿದೆ.
Recommended Video

ಮೆಟ್ರೋ ಸಂಚಾರ
ಬೆಂಗಳೂರು ನಮ್ಮ ಮೆಟ್ರೋ ರೈಲು ಸಂಚಾರ ಕೂಡ ಸೋಮವಾರ ಬೆಳಗ್ಗೆ ಆರಂಭವಾಗಲಿದೆ. ಎರಡು ಪಾಳಿಯ ಮೆಟ್ರೋ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದು, ಐದು ನಿಮಿಷಕ್ಕೆ ಒಂದು ರೈಲು ಸಂಚರಿಸಲಿದೆ. ಬೆಳಗ್ಗೆ 7 ರಿಂದ 11 ಗಂಟೆ ವರೆಗೆ ಮೊದಲ ಪಾಳಿ ಹಾಗೂ ಮಧ್ಯಾಹ್ನ 3 ರಿಂದ ಸಂಜೆ 6 ಗಂಟೆ ವರೆಗೆ ಮೆಟ್ರೋ ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಡ್ಡಾಯವಾಗಿ ಸ್ಮಾರ್ಟ್ ಹೊಂದಿದವರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಿದೆ.

Click it and Unblock the Notifications