• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೊರೊನಾ ಅನ್ ಲಾಕ್ 2.0: ರಾಜ್ಯದಲ್ಲಿ ಷರತ್ತು ಬದ್ಧ ಬಸ್ ಸಂಚಾರಕ್ಕೆ ಅವಕಾಶ!

|
Google Oneindia Kannada News

ಬೆಂಗಳೂರು, ಜೂ. 20: ಕೊರೊನಾ ಸೋಂಕು ಕಡಿಮೆಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಷರತ್ತು ಬದ್ಧ ಸಾರ್ವಜನಿಕ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದೆ. ಸೋಮವಾರದಿಂದ ರಾಜ್ಯದಲ್ಲಿ ಕೆಎಸ್ಆರ್‌ಟಿಸಿ ಹಾಗೂ ಬೆಂಗಳೂರಿನಲ್ಲಿ ಬಿಎಂಟಿಸಿ ಮತ್ತು ಮೆಟ್ರೊ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕೊರೊನಾ ಸೋಂಕು ನಿಯಂತ್ರಣದ ಷರತ್ತುಗಳನ್ನು ಪ್ರಯಾಣಿಕರು ಕಡ್ಡಾಯವಾಗಿ ಪಾಲಿಸಲು ಸೂಚಿಸಿದೆ.

ಕೆಎಸ್ಆರ್‌ಟಿಸಿ ಬಸ್ ಸಂಚಾರ

ಕೆಎಸ್ಆರ್‌ಟಿಸಿ ಬಸ್ ಸಂಚಾರ

ಬೆಂಗಳೂರಿನಲ್ಲಿ 6400 ಬಿಎಂಟಿಸಿ ಬಸ್‌ಗಳಿವೆ. ಆದರೆ ಮೊದಲ ಪಾಳಿಯಲ್ಲಿ 1200 ಎರಡನೇ ಪಾಳಿಯಲ್ಲಿ 800 ಬಸ್‌ಗಳ ಸಂಚಾರಕ್ಕೆ ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆ ನಿರ್ಧರಿಸಿದೆ. ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಎಸಿ ರಹಿತ ಸಾಮಾನ್ಯ ಬಸ್‌ಗಳ ಸಂಚಾರಕ್ಕೆ ಅವಕಾಶ ಮಾಡಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ವಿವಿಧೆಡೆ ಸಂಚರಿಸುತ್ತಿದ್ದ ಎಸಿ ಬಸ್ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿಲ್ಲ.

ರಾಜ್ಯ ಅನ್‌ಲಾಕ್ 2.0; ಜೂನ್ 21ರಿಂದ ಏನಿರುತ್ತೆ? ಏನಿರಲ್ಲ?ರಾಜ್ಯ ಅನ್‌ಲಾಕ್ 2.0; ಜೂನ್ 21ರಿಂದ ಏನಿರುತ್ತೆ? ಏನಿರಲ್ಲ?

ಬಿಎಂಟಿಸಿ ಬಸ್ ಸಂಚಾರ

ಬಿಎಂಟಿಸಿ ಬಸ್ ಸಂಚಾರ

ಬೆಂಗಳೂರಿನಲ್ಲಿ 6400 ಬಿಎಂಟಿಸಿ ಬಸ್‌ಗಳಿವೆ. ಆದರೆ ಮೊದಲ ಪಾಳಿಯಲ್ಲಿ 1200 ಎರಡನೇ ಪಾಳಿಯಲ್ಲಿ 800 ಬಸ್‌ಗಳ ಸಂಚಾರಕ್ಕೆ ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆ ನಿರ್ಧರಿಸಿದೆ. ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಎಸಿ ರಹಿತ ಸಾಮಾನ್ಯ ಬಸ್‌ಗಳ ಸಂಚಾರಕ್ಕೆ ಅವಕಾಶ ಮಾಡಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ವಿವಿಧೆಡೆ ಸಂಚರಿಸುತ್ತಿದ್ದ ಎಸಿ ಬಸ್ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿಲ್ಲ.

ಶೇ. 50 ರಷ್ಟು ಪ್ರಯಾಣಿಕರಿಗೆ ಅವಕಾಶ

ಶೇ. 50 ರಷ್ಟು ಪ್ರಯಾಣಿಕರಿಗೆ ಅವಕಾಶ

ಇನ್ನು ಬೆಂಗಳೂರಿನಲ್ಲಿ ಸಂಚರಿಸುವ ಬಸ್‌ಗಳಲ್ಲಿ ಬಸ್ ಸಾಮರ್ಥ್ಯದ ಸೀಟುಗಳಲ್ಲಿ ಶೇ. 50 ರಷ್ಟು ಪ್ರಯಾಣಿಕರಷ್ಟೇ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ. ಒಂದು ಸೀಟಿನಲ್ಲಿ ಒಬ್ಬರಷ್ಟೇ ಕೂರಬೇಕು. ಅನ್ ಲಾಕ್ ನಿಯಮದ ಪ್ರಕಾರ ಒಂದು ಬಿಎಂಟಿಸಿ ಬಸ್ ನಲ್ಲಿ ಸರಾಸರಿ 25 ರಿಂದ 30 ಪ್ರಯಾಣಿಕರಷ್ಟೇ ಪ್ರಯಾಣಿಸಲ ಅವಕಾಶ ಕಲ್ಪಿಸಲಾಗುತ್ತಿದೆ. ಆದರೆ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ನಿರ್ವಾಹಕರು ಸಹ ಕಡ್ಡಾಯವಾಗಿ ಮಾಸ್ಕ್ ಧರಿಸುವ ಜತೆಗೆ ಎರಡು ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಕರ್ತವ್ಯಕ್ಕೆ ಹಾಜರಾಗಲು ಸೂಚಿಸಲಾಗಿದೆ.

ಜೂನ್ 21ರಿಂದ ಮೆಟ್ರೋ ಸಂಚಾರ ಆರಂಭ; ಪ್ರಯಾಣಿಕರಿಗೆ ಮಾರ್ಗಸೂಚಿ ಪ್ರಕಟಜೂನ್ 21ರಿಂದ ಮೆಟ್ರೋ ಸಂಚಾರ ಆರಂಭ; ಪ್ರಯಾಣಿಕರಿಗೆ ಮಾರ್ಗಸೂಚಿ ಪ್ರಕಟ

  ನಾಳೆಯಿಂದ Namma Metro ಸಂಚಾರ ಆರಂಭ-ಮೆಟ್ರೋ ಸ್ಟೇಶನ್, ಬೋಗಿಗಳಿಗೆ ಸ್ಯಾನಿಟೈಸ್| Oneindia Kannada
  ಮೆಟ್ರೋ ಸಂಚಾರ

  ಮೆಟ್ರೋ ಸಂಚಾರ

  ಬೆಂಗಳೂರು ನಮ್ಮ ಮೆಟ್ರೋ ರೈಲು ಸಂಚಾರ ಕೂಡ ಸೋಮವಾರ ಬೆಳಗ್ಗೆ ಆರಂಭವಾಗಲಿದೆ. ಎರಡು ಪಾಳಿಯ ಮೆಟ್ರೋ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದು, ಐದು ನಿಮಿಷಕ್ಕೆ ಒಂದು ರೈಲು ಸಂಚರಿಸಲಿದೆ. ಬೆಳಗ್ಗೆ 7 ರಿಂದ 11 ಗಂಟೆ ವರೆಗೆ ಮೊದಲ ಪಾಳಿ ಹಾಗೂ ಮಧ್ಯಾಹ್ನ 3 ರಿಂದ ಸಂಜೆ 6 ಗಂಟೆ ವರೆಗೆ ಮೆಟ್ರೋ ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಡ್ಡಾಯವಾಗಿ ಸ್ಮಾರ್ಟ್ ಹೊಂದಿದವರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಿದೆ.

  English summary
  The state government has issued conditional permission for public transport in the state after the corona virus was reduced know more
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X