ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎರಡು-ಮೂರು ವಾರಗಳಲ್ಲಿ ಕೋವಿಡ್ 3ನೇ ಅಲೆ ತೀವ್ರತೆ ಕಡಿಮೆಯಾಗಲಿದೆ: ಡಾ.ಸುಧಾಕರ್

|
Google Oneindia Kannada News

ಬೆಂಗಳೂರು, ಜನವರಿ 22: ಸದ್ಯ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್-19 ಮೂರನೇ ಅಲೆಯ ತೀವ್ರತೆ ಮುಂದಿನ ಎರಡು ಮೂರು ವಾರಗಳಲ್ಲಿ ಕಡಿಮೆಯಾಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ರಾಜ್ಯದ ಕೋವಿಡ್ ಸ್ಥಿತಿಗತಿ ಬಗ್ಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ತಜ್ಞರೊಂದಿಗೆ ಸುಧೀರ್ಘವಾಗಿ ಚರ್ಚಿಸಲಾಯಿತು. ಸದ್ಯ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಆಗಿದೆ. ಆದರೆ, ಮುಂದಿನ ಎರಡು ಮೂರು ವಾರಗಳಲ್ಲಿ ಇದು ತೀವ್ರತೆ ಕಳೆದುಕೊಳ್ಳಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ ಎಂದು ಶನಿವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಕೊರೊನಾ ಲಕ್ಷಣ ಇದ್ದರೆ ಮಾತ್ರ ಪರೀಕ್ಷೆ:

ICMR ಮಾರ್ಗಸೂಚಿಯಂತೆ ರಾಜ್ಯದಲ್ಲಿ ಕೊರೊನಾ ಲಕ್ಷಣ ಹೊಂದಿರುವವರಿಗೆ ಮಾತ್ರ ಟೆಸ್ಟ್ ಮಾಡಲಾಗುವುದು. ಜನರು ಎಚ್ಚರಿಕೆಯಿಂದ ಇದ್ದಷ್ಟು ಕೊರೊನಾ ವಿರುದ್ಧ ಹೋರಾಡಲು ಸಹಾಯವಾಗುತ್ತದೆ ಎಂದು ಸಚಿವರು ಹೇಳಿದರು.

Covid-19 3rd wave is going to lose intensity in 2 to 3 weeks says Minister Dr K Sudhakar

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಆಗಿರುವುದು ಸಮಾಧಾನ ತಂದಿದೆ. ವೈಜ್ಞಾನಿಕವಾಗಿ ಪರಾಮರ್ಶೆ ಮಾಡಿ, ತಜ್ಞರ ಅಭಿಪ್ರಾಯ ಪಡೆದು ಸರ್ಕಾರ ವೀಕೆಂಡ್ ಕರ್ಫ್ಯೂ ರದ್ದು ಮಾಡಿದೆ ಎಂದು ಹೇಳಿದರು.

ಜನರ ಜೀವ ಹಾಗೂ ಜೀವನ ಎರಡೂ ಮುಖ್ಯ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಈಗ ಜನರು ಜವಾಬ್ದಾರಿ ಹಾಗೂ ಕರ್ತವ್ಯಗಳನ್ನು ಅರಿತು ನಡೆಯಬೇಕು. ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ, ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಒಂದು ವೇಳೆ ಮತ್ತೆ ಕೊರೊನಾ ಸೋಂಕಿತರು ಆಸ್ಪತ್ರೆಗಳಿಗೆ ದಾಖಲಾಗುವುದು ಗಣನೀಯವಾಗಿ ಹೆಚ್ಚಾದರೆ ಸರ್ಕಾರ ಬೇರೆ ದಾರಿ ಇಲ್ಲದೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಲಿದೆ ಎಂದು ತಿಳಿಸಿದರು.

Recommended Video

Rohit Sharmaಗೆ ನಾಯಕತ್ವದ ಒತ್ತಡ ತಿಳಿಯೋದು ಆಗ | Oneindia Kannada

ಮುಖ್ಯಮಂತ್ರಿಗಳ ಜೊತೆ ನಡೆದ 3 ಗಂಟೆಗಳ ಸುಧೀರ್ಘ ಸಭೆಯಲ್ಲಿ ರಚನಾತ್ಮಕ ಸಲಹೆಗಳನ್ನು ತೆಗೆದುಕೊಂಡು ವೈಜ್ಞಾನಿಕ ಆಧಾರದಲ್ಲಿ ಸರ್ಕಾರ ನಿರ್ಧಾರ ಮಾಡಿದೆ. ಜನರು ಅನಗತ್ಯವಾಗಿ ಗುಂಪು ಸೇರುವುದನ್ನು ಕಡಿಮೆ ಮಾಡಬೇಕು. ಒಳಾಂಗಣ ಹಾಗೂ ಹೊರಾಂಗಣ ಕಾರ್ಯಕ್ರಮಗಳನ್ನು ಮುಂದಕ್ಕೆ ಹಾಕುವುದು ಉತ್ತಮ ಎಂದು ಸಚಿವರು ಮನವಿ ಮಾಡಿದರು.

English summary
Covid-19 3rd wave is going to lose intensity in 2 to 3 weeks predicts experts says Health Minister Dr K Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X