ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಗಸ್ಟ್ 15ರಿಂದ ರಾಜ್ಯದಲ್ಲಿ ಕಠಿಣ ನಿಯಮ ಜಾರಿ ಬಗ್ಗೆ ಸುಳಿವು ಕೊಟ್ಟ ಸಚಿವ ಆರ್ ಅಶೋಕ್

|
Google Oneindia Kannada News

ಬೆಂಗಳೂರು, ಆಗಸ್ಟ್ 14: ರಾಜ್ಯದಲ್ಲಿ ಆಗಸ್ಟ್ 15ರ ಬಳಿಕ ಕಠಿಣ ನಿಯಮ ಜಾರಿಗೊಳಿಸುವ ಬಗ್ಗೆ ಸಚಿವ ಆರ್ ಅಶೋಕ್ ಸುಳಿವು ಕೊಟ್ಟಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜತೆ ಇಂದು ಸಭೆ ನಡೆಯಲಿರುವುದಾಗಿ ತಿಳಿಸಿದ್ದಾರೆ.

ಮಾಧ್ಯಮಗಳ ಎದುರು ಮಾತನಾಡಿರುವ ಸಚಿವರು, ಬಹುಶಃ ಆಗಸ್ಟ್ 15ರ ನಂತರ ರಾಜ್ಯದಲ್ಲಿ ಕಠಿಣ ಮಾರ್ಗಸೂಚಿಗಳನ್ನು ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯದಲ್ಲಿ 9 ರಿಂದ 12ನೇ ತರಗತಿ ಶಾಲೆಗಳು ಇದೆ 23ರಂದು ಆರಂಭಿಸುವುದಾಗಿ ಸರ್ಕಾರ ಘೋಷಣೆ ಮಾಡಿದೆ. ಈ ಹಿನ್ನೆಲೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಬೊಮ್ಮಾಯಿ ಸೂಚಿಸಿದ್ದಾರೆ.

COVID-19 3rd Wave: Karnataka Likely To Impose Stricter Rules After August 15, Says Minister

ಈಗಾಗಲೇ ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ವಾತ್ಸಲ್ಯ ಯೋಜನೆ ಆರಂಭಿಸಲಾಗಿದೆ. ಈ ಯೋಜನೆಯಲ್ಲಿ ಮಕ್ಕಳು ಎಲ್ಲಾ ರೀತಿಯ ಆರೋಗ್ಯ ತಪಾಸಣೆಗೆ ಒಳಗಾಗಬಹುದು. ಇದರಲ್ಲಿ ಮಕ್ಕಳ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುವುದು ಕೂಡ ಒಳಗೊಂಡಿದೆ.

ಯೋಜನೆಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬ ಸಂಬಂಧಿತ ಅಧಿಕಾರಿಗಳಿಗೆ ನಾವು ತರಬೇತಿ ನೀಡಿದ್ದೇವೆ ಮತ್ತು ಈ ವೈರಸ್‌ನಿಂದ ಮಕ್ಕಳನ್ನು ರಕ್ಷಿಸಲು ಪ್ರಯತ್ನಿಸುತ್ತೇವೆ. ಎಲ್ಲಾ ಜಿಲ್ಲಾ ಆಸ್ಪತ್ರೆಗಳಿಗೆ ಮಕ್ಕಳ ಐಸಿಯು ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ ಎಂದು ಸಿಎಂ ತಿಳಿಸಿರುವುದಾಗಿ ಅಶೋಕ್ ಹೇಳಿದ್ದಾರೆ.

ಕೋವಿಡ್ 3ನೇ ಅಲೆ ನಿರ್ವಹಣೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ತಜ್ಞರು, ಉನ್ನತಾಧಿಕಾರಿಗಳು ಭಾಗವಹಿಸಲಿದ್ದಾರೆ. ಪ್ರಮುಖ ನಿರ್ಧಾರಗಳನ್ನು ಸಭೆಯಲ್ಲಿ ಕೈಗೊಳ್ಳುವ ಸಾಧ್ಯತೆ ಇದೆ.

ಸಭೆಯಲ್ಲಿ ತಜ್ಞರೊಂದಿಗೆ ಚರ್ಚಿಸಿ ಮುಖ್ಯಮಂತ್ರಿ ಬೊಮ್ಮಾಯಿಯವರು ಬೆಂಗಳೂರು ಸೇರಿದಂತೆ ಜಿಲ್ಲೆಗಳಿಗೆ ಕೊರೊನಾ ಮೂರನೇ ಅಲೆಯನ್ನು ಆರಂಭದಲ್ಲಿಯೇ ನಿಯಂತ್ರಿಸಲು ಹೊಸ ನಿಯಮಗಳನ್ನು ಪ್ರಕಟಿಸುವ ಸಾಧ್ಯತೆಯಿದೆ.

ವಾರಾಂತ್ಯ ಕರ್ಫ್ಯೂ, ಕಟ್ಟುನಿಟ್ಟಿನ ನಿರ್ಬಂಧ: ಮೊದಲಿಗೆ ಬೆಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ, ವೀಕೆಂಡ್ ಲಾಕ್ ಡೌನ್ ಸೇರಿದಂತೆ ಹಂತಹಂತವಾಗಿ ನಿರ್ಬಂಧಗಳನ್ನು ಬೆಂಗಳೂರಿನಲ್ಲಿ ಜಾರಿಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. ಹಾಗಾದರೆ ಇನ್ನು ಕೆಲದಿನಗಳವರೆಗೆ ಬೆಂಗಳೂರು ವಾರಾಂತ್ಯಗಳಲ್ಲಿ ಲಾಕ್ ಆಗುವುದು ಪಕ್ಕಾ ಎನ್ನಲಾಗುತ್ತಿದೆ.

ನಿನ್ನೆ ಉಡುಪಿಯಲ್ಲಿ ಮಾತನಾಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ನಾಳೆ ಸ್ವಾತಂತ್ರ್ಯ ದಿನಾಚರಣೆ ನಂತರ ಬೆಂಗಳೂರಿನಲ್ಲಿ ಹೆಚ್ಚಿನ ಕಠಿಣ ನಿಯಮ ಜಾರಿಗೆ ತರುವ ಸಾಧ್ಯತೆಯಿದೆ ಎಂದು ಸುಳಿವು ನೀಡಿದ್ದು ಲಾಕ್ ಡೌನ್ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ನಾವು ತಾಂತ್ರಿಕ ಸಲಹಾ ಸಮಿತಿಯೊಂದಿಗೆ ವಿವರವಾಗಿ ಚರ್ಚೆಯನ್ನು ನಡೆಸಿ ಪ್ರಸ್ತುತ ಪರಿಸ್ಥಿತಿಯನ್ನು ಪರಿಶೀಲಿಸುತ್ತೇವೆ.

ಲಾಕ್ ಡೌನ್ ಹೇರಿದರೆ ಜನರಿಗೆ ಸಾಕಷ್ಟು ಸಮಸ್ಯೆಗಳಾಗುತ್ತವೆ. ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸಲು ನಾವು ಇತರ ಸಂಭವನೀಯ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.

ರಾಜ್ಯದ ಮಕ್ಕಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಯಾವುದೇ ತೀವ್ರ ಏರಿಕೆಯಾಗಿಲ್ಲ ಎಂದು ಕೂಡ ಸಿಎಂ ಹೇಳಿದ್ದಾರೆ."ಆದಾಗ್ಯೂ, ಸರ್ಕಾರವು ಹೊಸ ಮಕ್ಕಳ ಆಸ್ಪತ್ರೆಗಳ ಸ್ಥಾಪನೆ ಮತ್ತು ಮಕ್ಕಳಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ತರಬೇತಿ ನೀಡುವುದು ಸೇರಿದಂತೆ ಮೂಲಸೌಕರ್ಯವನ್ನು ಹೆಚ್ಚಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ಕೇರಳದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಮೂರನೇ ಅಲೆಯನ್ನು ತಡೆಗಟ್ಟಲು ನಾವು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಅವರು ಬೆಂಗಳೂರಿನಲ್ಲಿ ನಿನ್ನೆ ಹೇಳಿದ್ದಾರೆ.

Recommended Video

ಭಾರತವನ್ನು ತಾಲಿಬಾನ್ ಹೊಗಳುತ್ತಿರೋದು ಯಾಕೆ ಗೊತ್ತಾ? | Oneindia Kannada

ಈಗ ಶ್ರಾವಣ ಮಾಸವಾಗಿರುವುದರಿಂದ ಸಾಲು ಸಾಲು ಹಬ್ಬಗಳು ಬರುವುದರಿಂದ ಜನಸಂದಣಿಯನ್ನು ನಿರ್ಬಂಧಿಸುವಂತಹ ಮಾರ್ಗಸೂಚಿಗಳನ್ನು ಈಗಾಗಲೇ ಜಾರಿಗೆ ತರಲಾಗಿದೆ ಎಂದು ಹೇಳಿದ್ದಾರೆ. ಹಾಗೆಂದು ಲಾಕ್ ಡೌನ್ ಕೊರೋನಾ ನಿಯಂತ್ರಣಕ್ಕೆ ಪರಿಹಾರವಾಗಬಹುದು ಎಂದು ಹೇಳಲು ಸಾಧ್ಯವಿಲ್ಲ ಎಂದು ಕೂಡ ಹೇಳಿದ್ದಾರೆ.

English summary
Amid scare of the third COVID-19 wave, Karnataka is likely to implement stricter measures in order to curb the transmission of the coronavirus. A meeting that will be chaired by Chief Minister Basavaraj Bommai has been called on Saturday to discuss the COVID-19 situation in the state, State Revenue Minister, R Ashok said on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X