ಕರ್ನಾಟಕ; 1 ಲಕ್ಷದ ಗಡಿ ದಾಟಿದ ಕೋವಿಡ್ ಸಕ್ರಿಯ ಪ್ರಕರಣಗಳು

ಬೆಂಗಳೂರು, ಸೆಪ್ಟೆಂಬರ್ 17 : ಕರ್ನಾಟಕದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,84,990.
ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷದ ಗಡಿ ದಾಟಿದೆ. ಬೆಂಗಳೂರು ನಗರದಲ್ಲಿಯೇ ಹೆಚ್ಚು ಸೋಂಕಿತರು ಇದ್ದಾರೆ.

ಬುಧವಾರ ಕರ್ನಾಟಕದಲ್ಲಿ 9725 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 4,84,990ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 101626.

ರಾಜ್ಯದಲ್ಲಿ ಅತಿ ಹೆಚ್ಚು ಸೋಂಕಿತರು ಇರುವ ಜಿಲ್ಲೆ ಬೆಂಗಳೂರು ನಗರ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 180283ಕ್ಕೆ ಏರಿಕೆಯಾಗಿದೆ. ನಗರದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 39,472. ಅತಿ ಹೆಚ್ಚು ಸಕ್ರಿಯ ಪ್ರಕರಣಗಳು ಇರುವುದ ಸಹ ಬೆಂಗಳೂರಿನಲ್ಲಿಯೇ.

ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳು ದೇಶದಲ್ಲಿಯೇ 2 ಮತ್ತು 3ನೇ ಸ್ಥಾನದಲ್ಲಿವೆ. ಆದರೆ, ಅಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಕಡಿಮೆ ಇದೆ. ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕ 4ನೇ ಸ್ಥಾನದಲ್ಲಿದೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಿದೆ.

ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ

ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ

ಭಾರತದಲ್ಲಿಯೇ ಕೋವಿಡ್ ಸೋಂಕಿತರು ಅತಿ ಹೆಚ್ಚು ಇರುವ ರಾಜ್ಯ ಮಹಾರಾಷ್ಟ್ರ. ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿಯೂ ರಾಜ್ಯ ಮೊದಲ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 11,21,221. ಸಕ್ರಿಯ ಪ್ರಕರಣಗಳು 2,97,125.

4ನೇ ಸ್ಥಾನದಲ್ಲಿ ಕರ್ನಾಟಕ

4ನೇ ಸ್ಥಾನದಲ್ಲಿ ಕರ್ನಾಟಕ

ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದೇಶದಲ್ಲಿಯೇ ಕರ್ನಾಟಕ 4ನೇ ಸ್ಥಾನದಲ್ಲಿದೆ. ಆದರೆ, ಸಕ್ರಿಯ ಪ್ರಕರಣಗಳ ಸಂಖ್ಯೆಲ್ಲಿ ರಾಜ್ಯ 2ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 101626. ಇದರಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿಯೇ 39,472 ಸಕ್ರಿಯ ಪ್ರಕರಣಗಳಿವೆ.

ಆಂಧ್ರ, ತಮಿಳುನಾಡು

ಆಂಧ್ರ, ತಮಿಳುನಾಡು

ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆಲ್ಲಿ ಆಂಧ್ರ ಪ್ರದೇಶ 2ನೇ ಸ್ಥಾನದಲ್ಲಿದೆ (5,92,760). ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳು 90,279. ತಮಿಳುನಾಡು ರಾಜ್ಯ ಒಟ್ಟು ಸೋಂಕಿತರ ಸಂಖ್ಯೆಯಲ್ಲಿ 3ನೇ ಸ್ಥಾನದಲ್ಲಿದೆ (5,19,860). ಒಟ್ಟು ಸಕ್ರಿಯ ಪ್ರಕರಣಗಳು 46,633.

Recommended Video

    Modi ಹುಟ್ಟಿದ ಹಬ್ಬಕ್ಕೆ ಯಾರೆಲ್ಲಾ ಶುಭಾಶಯ ಕೋರಿದ್ದಾರೆ ನೋಡಿ | Oneindia Kannada
    ಬೆಂಗಳೂರು ನಗರವೇ ಟಾಪ್

    ಬೆಂಗಳೂರು ನಗರವೇ ಟಾಪ್

    ದೇಶದ ಮಹಾನಗರಗಳಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ.
    ಮುಂಬೈ - 31,766
    ಚೆನ್ನೈ - 9,839
    ಲಕ್ನೋ - 9,577
    ಕೋಲ್ಕತ್ತಾ - 4,261
    ಬೆಂಗಳೂರು - 39,472

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+