ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್ 19: ರಾಜ್ಯದಲ್ಲಿ ಪರಿಸ್ಥಿತಿ ಕೈಮೀರುತ್ತಿದೆ ಎಂದ ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಏಪ್ರಿಲ್ 24: ರಾಜ್ಯದಲ್ಲಿ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಒಂದೇ ದಿನ 124 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದಲ್ಲಿ 26962 ಹೊಸ ಕೊರೊನಾ ಪ್ರಕರಣ ದಾಖಲುಕರ್ನಾಟಕದಲ್ಲಿ 26962 ಹೊಸ ಕೊರೊನಾ ಪ್ರಕರಣ ದಾಖಲು

ಶುಕ್ರವಾರ ವ್ಯಕ್ತಿಯೊಬ್ಬರಿಗೆ ಸೋಂಕು ಹೆಚ್ಚಾಗಿ ಉಸಿರಾಟದ ಸಮಸ್ಯೆಯಿಂದಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಬಂದಿದ್ದರು, ಆದರೆ ಐಸಿಯುನಲ್ಲಿ ಹಾಸಿಗೆ ಖಾಲಿ ಇರಲಿಲ್ಲ.

Covid 19: BS Yediyurappa Says Situation Out Of Control

ಆಸ್ಪತ್ರೆಗಳಲ್ಲಿ 30 ನಿಮಿಷಗಳಷ್ಟು ಕಾದ ಬಳಿಕವೂ ಹಾಸಿಗೆಗಳಿಲ್ಲ, ಬೇರೆ ಆಸ್ಪತ್ರೆಗಳನ್ನು ನೋಡಿಕೊಳ್ಳಿ ಎಂಬ ಉತ್ತರ ಆಸ್ಪತ್ರೆಯಿಂದ ಬಂದಿದೆ. ಬಳಿಕ ಅವರು ಸಾಗರ್ ಅಪೋಲೊ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು, ಗುಣಮುಖರಾಗುತ್ತಾರೋ ಇಲ್ಲವೋ ಗೊತ್ತಿಲ್ಲ ಎಂದು ಕುಟುಂಬದವರು ಹೇಳಿದ್ದಾರೆ.

ಇದೇ ರೀತಿಯ ಘಟನೆಗಳು ಬಹುತೇಕ ಎಲ್ಲಾ ಸರ್ಕಾರಿ ಕಾಲೇಜುಗಳಲ್ಲಿ ಸಂಭವಿಸುತ್ತಿದೆ. ಐಸಿಯು ಹಾಗೂ ವೆಂಟಿಲೇಟರ್‌ಗಾಗಿ ಕಾಯುತ್ತಾ ಸಾಕಷ್ಟು ಮಂದಿ ಸಾವನ್ನಪ್ಪುತ್ತಿದ್ದಾರೆ.

ಬೆಂಗಳೂರಲ್ಲಿ ಕಳೆದ 24 ಗಂಟೆಗಳಲ್ಲಿ 124 ಮಂದಿ ಮೃತಪಟ್ಟಿದ್ದಾರೆ, ಮೊದಲ ಬಾರಿಗೆ 100ಕ್ಕಿಂತ ಹೆಚ್ಚು ಸಾವು ಒಂದೇ ದಿನದಲ್ಲಿ ಸಂಭವಿಸಿದೆ.

ಆರೋಗ್ಯ ಸಿಬ್ಬಂದಿ ಜತೆ ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಶುಕ್ರವಾರ ಮಾತನಾಡಿದ್ದು, ರಾಜ್ಯದ ಪರಿಸ್ಥಿತಿ ಕೈಮೀರುತ್ತಿದೆ ಎಂದಿರುವ ಅವರು 10 ಪಟ್ಟು ಐಸಿಯು ವೆಂಟಿಲೇಟರ್ ಹಾಸಿಗೆಗಳನ್ನು ಸಿದ್ಧಪಡಿಸುವಂತೆ ಸೂಚಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಶುಕ್ರವಾರ ಒಂದೇ ದಿನ ಬೆಂಗಳೂರುನಲ್ಲಿ 124 ಮಂದಿ ಸೇರಿ ರಾಜ್ಯದಲ್ಲಿ ಬರೋಬ್ಬರಿ 190 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 14 ಸಾವಿರ ಗಡಿ ದಾಟಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 26,962 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 12,74,959ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 16,662 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 6,15,581ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 124 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 8,697 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,46,554ಕ್ಕೆ ಏರಿಕೆಯಾಗಿದೆ. ಇನ್ನು 2,14,311 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 1128 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Recommended Video

IPL ಗೆ ಗುಡ್ ಬೈ ಹೇಳಿದ T Natarajan | Oneindia Kannada

English summary
Karnataka Chief Minister B S Yediyurappa remarking that the situation has gone “out of control”. At a meeting with health officials on Friday, Yediyurappa ordered a 10-fold increase in ICU ventilator beds in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X