ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಲಾ ಶಿಕ್ಷಕರು ಪಾಲಿಸಬೇಕಾಗಿರುವ ಕೋವಿಡ್ -19 ಗೈಡ್ ಲೈನ್

|
Google Oneindia Kannada News

ಬೆಂಗಳೂರು, ಜೂ. 14: ಕೋವಿಡ್ 19 ಪಾಸಿಟಿವಿಟಿ ದರ ಕೆಲವು ಜಿಲ್ಲೆಗಳಲ್ಲಿ ಪಾಸಿಟೀವಿಟಿ ದರ ಕಡಿಮೆಯಾಗಿಲ್ಲ. ಹೀಗಾಗಿ ರಾಜ್ಯದ ಹನ್ನೊಂದು ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮ ಸಡಿಲಿಸಿಲ್ಲ. ಹೀಗಾಗಿ ಕೊರೊನಾ ಲಾಕ್ ಡೌನ್ ಕಠಿಣ ನಿಯಮ ಜಾರಿಯಲ್ಲಿರುವ ಶಿಕ್ಷಕರಿಗೆ ಪ್ರತ್ಯೇಕ ಮಾರ್ಗದರ್ಶಿ ಸೂತ್ರ ಪಾಲನೆಗೆ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.

ಕೋವಿಡ್ 19 ಕಡಿಮೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರಿ, ಖಾಸಗಿ ಶಾಲೆಗಳ ಕಾರ್ಯಾರಂಭಕ್ಕೆ ಜೂ. 15 ರಿಂದಲೇ ಅವಕಾಶ ನೀಡಲಾಗಿದೆ. ಮಕ್ಕಳ ಕಲಿಕೆಗೆ ಪೂರ್ವ ತಯಾರಿಗೆ ಅವಕಾಶ ನೀಡಲಾಗಿತ್ತು. ಆದರೆ, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯದ ಹನ್ನೊಂದು ಜಿಲ್ಲೆಗಳಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧಗಳು ಜಾರಿಯಲ್ಲಿವೆ. ಹೀಗಾಗಿ ಈ ಶೈಕ್ಷಣಿಕ ಜಿಲ್ಲೆಗಳಲ್ಲಿಕೆಲಸ ಮಾಡುವ ಶಿಕ್ಷಕರು ಮನೆಯಿಂದಲೇ ಜೂ. 21 ರ ವರೆಗೂ ಕೆಲಸ ನಿರ್ವಹಿಸಬೇಕು. ಕಠಿಣ ಲಾಕ್ ಡೌನ್ ನಿಯಮಗಳನ್ನು ಭಾಗಶಃ ತೆರವುಗೊಳಿಸುವವರೆಗೂ ಶಿಕ್ಷಕರು ಶಾಲೆಗೆ ಹೋಗುವಂತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ತಿಳಿಸಿದ್ದಾರೆ.

ಖಾಸಗಿ ಶಾಲಾ ಶುಲ್ಕ ವಿಚಾರದಲ್ಲಿ ಶಿಕ್ಷಣ ಸಚಿವರ ದ್ವಂದ್ವ ಹೇಳಿಕೆ ವಿವಾದಖಾಸಗಿ ಶಾಲಾ ಶುಲ್ಕ ವಿಚಾರದಲ್ಲಿ ಶಿಕ್ಷಣ ಸಚಿವರ ದ್ವಂದ್ವ ಹೇಳಿಕೆ ವಿವಾದ

ಉಲ್ಲೇಖಿತ ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಶಾಲಾ ದಾಖಲಾತಿ ಪೂರ್ವ ತಯಾರಿ ತರಗತಿಗಳಿಗೆ ಅವಕಾಶ ನೀಡಲಾಗಿದೆ. ಉಲ್ಲೇಖಿತ ಹನ್ನೊಂದು ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಶಾಲಾ ಶಿಕ್ಷಕರು ಶಾಲೆಗಗಳ ದಾಖಲಾತಿ ಕಾರ್ಯ ಚಟುವಟಿಕೆ ಕೈಗೊಳ್ಳಬಹುದು ಎಂದು ಸಾರ್ವಶನಿಕ ಶಿಕ್ಷಣ ಇಲಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಹುತೇಕ ಶಾಲೆಗಳು ಸೋಮವಾರದಿಂದವೇ ಆರಂಭವಾಗಿವೆ.

 Covid 19: Education Department released the Revised guidelines for schools

ಬಸ್ ಇಲ್ಲದೇ ಪರದಾಟ: ರಾಜಧಾನಿ ಬೆಂಗಳೂರು ಸೇರಿದಂತೆ ಕೊರೊನಾ ಸೋಂಕು ಕಡಿಮೆ ಇರುವ ಬಹುತೇಕ ಜಿಲ್ಲೆಗಳಲ್ಲಿ ಶಾಲಾ ಚಟುವಟಿಕೆಗೆ ಶಿಕ್ಷಣ ಇಲಾಖೆ ಅವಕಾಶ ನೀಡಿದೆ. ಆದರೆ, ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸದ ಹಿನ್ನೆಲೆಯಲ್ಲಿ ಶಿಕ್ಷಕರು ಮನೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದಾರೆ. ಸಾರಿಗೆ ಸೌಲಭ್ಯ ಇಲ್ಲದ ಕಾರಣ ಲಾಕ್ ಡೌನ್ ನಿಯಮ ಸಡಿಲಗೊಂಡರೂ ಸಹ ಜನರ ಸಂಚಾರ ತೀರ ವಿರಳವಾಗಿದೆ. ಶಾಲೆಗಳು ಸಹ ಕೊರೊನಾ ಸಂಕಷ್ಟ ಕಾಲದಂತೆ ಬಾಗಿಲು ಮುಚ್ಚಿಕೊಂಡಿವೆ.

English summary
The Education Department has released the Guidelines on the Inception of Private and Government Schools.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X