ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಲೆ ಪುನರಾರಂಭದ ಬಗ್ಗೆ ಆರೋಗ್ಯ ಸಚಿವರು ನೀಡಿದ ಸಲಹೆ ಏನು?

|
Google Oneindia Kannada News

ಬೆಂಗಳೂರು, ನ 23: ಕೋವಿಡ್ ಹಿನ್ನೆಲೆಯಲ್ಲಿ ಡಿಸೆಂಬರ್ ನಲ್ಲಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಪುನರಾರಂಭಿಸುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದ್ದಾರೆ. ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸು ಹಾಗೂ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಶಿಕ್ಷಣ ಇಲಾಖೆಯ ಸಭೆಯಲ್ಲಿ, ಡಿಸೆಂಬರ್ ನಲ್ಲಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಪುನರಾರಂಭ ಬೇಡ ಎಂದು ತೀರ್ಮಾನಿಸಲಾಯಿತು. ಈ ಸಭೆಯಲ್ಲಿ ಆನ್ ಲೈನ್ ಮೂಲಕ ಪಾಲ್ಗೊಂಡ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.

ಕರ್ನಾಟಕದಲ್ಲಿ ಶಾಲೆ ಪುನರಾರಂಭ ಸೂಕ್ತವಲ್ಲ ತಜ್ಞರ ಅಭಿಪ್ರಾಯಕರ್ನಾಟಕದಲ್ಲಿ ಶಾಲೆ ಪುನರಾರಂಭ ಸೂಕ್ತವಲ್ಲ ತಜ್ಞರ ಅಭಿಪ್ರಾಯ

ಡಿಸೆಂಬರ್ ತಿಂಗಳಲ್ಲಿ ಚಳಿಗಾಲ ಸೋಂಕು ಹರಡಲು ಅನುಕೂಲ ಮಾಡಿಕೊಡಬಹುದು. ಕೊರೊನಾದ ಎರಡನೇ ಅಲೆಯೂ ಬರಲಿದೆ ಎಂಬ ಸುದ್ದಿಯೂ ಇರುವುದರಿಂದ ಮುಂದಾಲೋಚನೆ ಮಾಡಬೇಕಿದೆ. ಈ ಕುರಿತು ತಾಂತ್ರಿಕ ಸಲಹಾ ಸಮಿತಿಯ ಸಭೆಯಲ್ಲಿ ಕೂಡ ಚರ್ಚೆಯಾಗಿದ್ದು, ಈಗಾಗಲೇ ಸಭೆಯ ನಿರ್ಣಯವನ್ನು ಸರ್ಕಾರಕ್ಕೆ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ ನಲ್ಲಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ತೆರೆಯುವುದು ಬೇಡ ಎಂದು ಸಚಿವರು ಸಲಹೆ ನೀಡಿದರು.

Covid 19: Health Minister Dr Sudhakar Suggestion on re opening of Schools

ಡಿಸೆಂಬರ್ ಅಂತ್ಯದವರೆಗೂ ಶಾಲೆಗಳನ್ನು ತೆರೆಯುವುದಿಲ್ಲ: ಸರ್ಕಾರದ ಮಹತ್ವದ ತೀರ್ಮಾನಡಿಸೆಂಬರ್ ಅಂತ್ಯದವರೆಗೂ ಶಾಲೆಗಳನ್ನು ತೆರೆಯುವುದಿಲ್ಲ: ಸರ್ಕಾರದ ಮಹತ್ವದ ತೀರ್ಮಾನ

Recommended Video

Samsung ಭಾರತದಲ್ಲಿ ನೂತನವಾಗಿ 5 ಸಾವಿರ ಕೋಟಿ ಹೂಡಿಕೆ | Oneindia Kannada

ಶಾಲೆ ಪುನರಾರಂಭಕ್ಕೆ ಸಂಬಂಧಿಸಿದಂತೆ, ಡಿಸೆಂಬರ್ 3 ನೇ ವಾರದಲ್ಲಿ ಸಭೆ ನಡೆಸಿ, ಅವಲೋಕನ ಮಾಡಿ ನಿರ್ಧಾರ ತೆಗೆದುಕೊಳ್ಳಬಹುದು. ಆ ಸಮಯದಲ್ಲಿ ಕೋವಿಡ್ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳಬಹುದು ಎಂದು ಸಚಿವರು ಸಭೆಗೆ ತಿಳಿಸಿದರು.

English summary
Health Minister Dr Sudhakar suggested not to re open Schools and colleged in December month based on Technical expert committee.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X