ಅಕ್ಟೋಬರ್ ಅಂತ್ಯದವರೆಗೂ ಕೇರಳ ಪ್ರಯಾಣ ಮುಂದೂಡಿ ಎಂದ ಸರ್ಕಾರ

ಬೆಂಗಳೂರು, ಸೆಪ್ಟೆಂಬರ್ 08: ಕೇರಳದಲ್ಲಿ ಕೊರೊನಾ ಹಾಗೂ ನಿಪಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ ವರೆಗೆ ಕೇರಳಕ್ಕೆ ತೆರಳಬೇಡಿ ಎಂದು ಸರ್ಕಾರ ಸಲಹೆ ನೀಡಿದೆ.

ಕೇರಳದಿಂದ ರಾಜ್ಯಕ್ಕೆ ಆಗಮಿಸುವವರಿಗೆ ಕೋವಿಡ್-19 ಪರೀಕ್ಷೆ ಪುನರಾವರ್ತನೆ, ಆರ್ ಟಿ- ಪಿಸಿಆರ್ ನೆಗೆಟಿವ್ ವರದಿ ಕ್ರಮಗಳ ಹೊರತಾಗಿಯೂ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳ ವರದಿಯನ್ನು ಪರಿಗಣಿಸಿ ಈ ಮಾರ್ಗಸೂಚಿ ಹೊರಡಿಸಲಾಗಿದೆ.

ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಮತ್ತು ಚಾಮರಾಜನಗರದಲ್ಲಿ ಬಿಗಿ ಕಣ್ಗಾವಲು ನಿಯೋಜಿಸಲಾಗುತ್ತಿದೆ.ಈ ಕುರಿತು ಮಾರ್ಗಸೂಚಿ ಬಿಡುಗಡೆಗೊಳಿಸಿರುವ ರಾಜ್ಯ ಆರೋಗ್ಯ ಇಲಾಖೆ, ಕೇರಳದಿಂದ ಅಗಮಿಸುವವರನ್ನು ತಪಾಸಣೆಗೊಳಪಡಿಸುವವರನ್ನು ಜ್ವರ, ಮಾನಸಿಕ ಸ್ಥಿತಿಗತಿ, ದುರ್ಬಲತೆ, ತಲೆನೋವು, ಶ್ವಾಸಕೋಶದ ತೊಂದರೆ, ಕೆಮ್ಮು, ವಾಂತಿ, ಸ್ನಾಯುಸೆಳೆತದಂತಹ ಲಕ್ಷಣಗಳಿವೆಯೇ ಎಂದು ಪರಿಶೀಲಿಸಬೇಕು ಎಂದು ಸೂಚಿಸಿದೆ.

 Covid-19 Situation In Kerala: Karnataka Govt Advises Public To Defer Plans To Visit Kerala Till October End

ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ಅವರ ಮಾದರಿಗಳನ್ನು ಪಡೆದು ಪುಣೆಯ ಎನ್‌ಐವಿ ಪ್ರಯೋಗಾಲಯಕ್ಕೆ ಕಳುಹಿಸಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಇಲಾಖೆ ತಿಳಿಸಿದೆ.

Recommended Video

      ಕೇರಳಾದಲ್ಲಿ ನಿಫಾ, ಕೋವಿಡ್‌ ! ಗಡಿ ಚೆಕ್‌ಪೋಸ್ಟ್‌ನಲ್ಲಿ ಹೆಚ್ಚಿದ ಭದ್ರತೆ | Oneindia Kannada

      ಕೇರಳ ಉದ್ಯೋಗಿಗಳು ಅಕ್ಟೋಬರ್ ಅಂತ್ಯದವರೆಗೂ ಕರ್ನಾಟಕಕ್ಕೆ ಬಾರದಂತೆ ಅಥವಾ ಮುಂದೂಡುವಂತೆ ಎಲ್ಲಾ ಆಡಳಿತ ಮಂಡಳಿ, ಶಿಕ್ಷಣ ಸಂಸ್ಥೆಗಳ ಪ್ರಿನ್ಸಿಪಾಲರು, ನರ್ಸಿಂಗ್, ಪ್ಯಾರಾ ಮೆಡಿಕಲ್ ಸಂಸ್ಥೆಗಳು, ಆಸ್ಪತ್ರೆಗಳ ಮಾಲೀಕರು, ನರ್ಸಿಂಗ್ ಹೋಮ್ ಗಳು, ಕಚೇರಿಗಳು, ಹೋಟೆಲ್ ಗಳು, ಕಾರ್ಖಾನೆಗಳು, ಕೈಗಾರಿಕೆಗಳು ಮತ್ತಿತರಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

      ಕೇರಳದ ಪ್ರಸ್ತುತ ಪರಿಸ್ಥಿತಿ ಪರಿಗಣಿಸಿ, ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ, ಹೋಟೆಲ್, ಆಸ್ಪತ್ರೆ, ನರ್ಸಿಂಗ್ ಹೋಮ್, ಕಾರ್ಖಾನೆ ಮುಂತಾದ ಸಂಸ್ಥೆಗಳ ಆಡಳಿತ ವರ್ಗ/ಮಾಲೀಕರಿಗೆ ಕೇರಳದಿಂದ ಆಗಮಿಸುವ ತಮ್ಮ ವಿದ್ಯಾರ್ಥಿಗಳು/ಉದ್ಯೋಗಿಗಳಿಗೆ ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡಲು ತಿಳಿಸುವಂತೆ ಸೂಚಿಸಲಾಗಿದೆ

      ಸಾರ್ವಜನಿಕರು ಅಕ್ಟೋಬರ್ ಅಂತ್ಯದವರೆಗೂ ಕೇರಳಕ್ಕೆ ಪ್ರಯಾಣಿಸದಂತೆ ರಾಜ್ಯ ಸರ್ಕಾರ ಹೇಳಿದೆ. ತುರ್ತು ಅಗತ್ಯವಿಲ್ಲದಿದ್ದಲ್ಲಿ ಕೇರಳ ಪ್ರಯಾಣವನ್ನು ಮುಂದೂಡುವಂತೆ ಸರ್ಕಾರ ಸಲಹೆ ನೀಡಿದೆ.

      ಸಾರ್ವಜನಿಕರ ಹಿತರಕ್ಷಣೆ ನಿಟ್ಟಿನಲ್ಲಿ ಕೋವಿಡ್-19 ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಈ ಆದೇಶ ಹೊರಡಿಸಿರುವುದಾಗಿ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.ಬೆಂಗಳೂರಿಗೆ ಆಗಮಿಸುವ ಕೇರಳಿಗರಿಗೆ ವಿಶೇಷ ನಿಯಮ:

      ಮದುವೆ/ಕೌಟುಂಬಿಕ ಕಾರ್ಯಕ್ರಮಗಳಿಗೆ ಒಳಾಂಗಣದ ಶೇ. 50 ರಷ್ಟು ಸಾಮರ್ಥ್ಯದಿಂದ ಗರಿಷ್ಠ 400 ಅತಿಥಿಗಳ ಸಂಖ್ಯೆಗೆ ಮಿತಿಗೊಳಿಸಿ, ಕೋವಿಡ ನಿಯಮಾವಳಿಗಳನ್ನು ಅನುಸರಿಸಿ ಅನುಮತಿ.

      ಕರ್ನಾಟಕದಲ್ಲಿ ನರ್ಸಿಂಗ್, ವೈದ್ಯಕೀಯ, ಇಂಜಿನಿಯರಿಂಗ್, ಅರೆ ವೈದ್ಯಕೀಯ ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಕೇರಳದಿಂದ ಬರುವ 72 ಗಂಟೆಗಳ ಒಳಗಿನ ಅವಧಿಯ ಆರ್‌ಟಿಪಿಸಿಆರ್ ಟೆಸ್ಟ್ ನೆಗೆಟಿವ್ ವರದಿಯನ್ನು ತಂದಿರಬೇಕು.

      ವಿದ್ಯಾರ್ಥಿಗಳನ್ನು ಆಯಾ ವಿದ್ಯಾ ಸಂಸ್ಥೆಯವರು 7 ದಿನಗಳ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ಒಳಪಡಿಸಿ, 7ನೇ ದಿನದಂದು ಆರ್‌ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸ ಬೇಕು.

      ಕೇರಳದಿಂದ ಬರುವ ವಿದ್ಯಾರ್ಥಿಗಳನ್ನು ಆಯಾ ವಿದ್ಯಾ ಸಂಸ್ಥೆಯವರೇ ಕಡ್ಡಾಯವಾಗಿ 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ (Institutional Quarantine) ದಲ್ಲಿರಿಸಲು ವಸತಿ ನಿಲಯಗಳಲ್ಲಿ ಪ್ರತ್ಯೇಕ ಪ್ರದೇಶವನ್ನು ಸಾಂಸ್ಥಿಕ ಕ್ವಾರಂಟೈನ್ ಗಾಗಿ ಮೀಸಲಿಟ್ಟು, ಸಾಂಸ್ಥಿಕ ಕ್ವಾರಂಟೈನ್ (Institutional Quarantine) ಕಾಲದಲ್ಲಿ ಕ್ವಾರಂಟೈನ್‌ಲ್ಲಿರುವ ವಿದ್ಯಾರ್ಥಿಗಳ ದೈನಂದಿನ ಅವಶ್ಯಕತೆಗಳನ್ನು ಪೂರೈಸಬೇಕು.

      ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿರುವ ಉದ್ಯೋಗಿಗಳು, ಕೇರಳದಿಂದ ಆಗಮಿಸಿದ್ದಲ್ಲಿ ಅಥವಾ ಕಳೆದ 7 ದಿನಗಳಲ್ಲಿ ಕೇರಳಕ್ಕೆ ಭೇಟಿ ನೀಡಿದ್ದಲ್ಲಿ ಅಂತಹ ಉದ್ಯೋಗಿಗಳನ್ನು ಆಯಾ ಸಂಸ್ಥೆಯ ಆಡಳಿತ ಮಂಡಳಿಯವರು 7 ದಿನಗಳ ಕ್ವಾರಂಟೈನ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡುವುದು ಮತ್ತು ಮಾಹಿತಿಯನ್ನು ಪಾಲಿಕೆಯ ಸ್ಥಳೀಯ ಆರೋಗ್ಯಾಧಿಕಾರಿಗಳಿಗೆ ನೀಡಬೇಕು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+