ಕರ್ನಾಟಕದಲ್ಲಿ ಕೋವಿಡ್ ಹೆಚ್ಚಳ: ಎರಡು ದಿನಗಳಲ್ಲಿ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ
ಬೆಂಗಳೂರು, ಜೂನ್ 06: ಕೋವಿಡ್ ಸಂಪೂರ್ಣ ನಿಯಂತ್ರಣದಲ್ಲಿದೆ. ಅನಗತ್ಯವಾಗಿ ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಸಭೆ ನಡೆಸಿ ಎಲ್ಲಾ ಜಿಲ್ಲೆಗಳಲ್ಲಿನ ಪರಿಸ್ಥಿತಿಯ ಬಗ್ಗೆ ವರದಿ ಸಲ್ಲಿಸಲಿದ್ದಾರೆ. ಅದರ ಆಧಾರದ ಮೇಲೆ 2-3 ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಕಲುಷಿತ ನೀರು ಸೇವನೆಯಿಂದ ಸಾವು: ತಲಾ 5 ಲಕ್ಷ
ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವಿಗೀಡಾಗಿರುವವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಸಂಪೂರ್ಣ ತನಿಖೆ ಮಾಡಿ ತಾಂತ್ರಿಕ ವರದಿ ಸಲ್ಲಿಸುವಂತೆ ಕೆ. ಡಬ್ಲ್ಯೂ. ಎಸ್ಎಸ್‌ಬಿ ಮುಖ್ಯ ಇಂಜಿನಿಯರ್‌ಗೆ ಸೂಚಿಸಲಾಗಿದೆ. ರಾಯಚೂರಿನ ಎಲ್ಲಾ ವಾರ್ಡ್‌ಗಳ ನೀರಿನ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಬೇಕು. ಕುಡಿಯುವ ನೀರಿನ ಸುರಕ್ಷತೆಯ ಬಗ್ಗೆ ಪ್ರಮಾಣೀಕರಣವಾಗಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಅಧಿಕಾರಿಗಳ ಲೋಪದೋಷವಿದೆಯೇ ಎಂಬ ಬಗ್ಗೆಯೂ ಅಲ್ಲಿಯ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ತನಿಖೆಯನ್ನು ಕೂಡ ಕೈಗೊಳ್ಳ ಲಾಗುವುದು. ತಪ್ಪಿತಸ್ಥರಿದ್ದರೆ ಅವರ ಮೇಲೆ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದರು.

ಸಿದ್ದರಾಮಯ್ಯ ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ
ಪಠ್ಯ ಪರಿಷ್ಕರಣೆ ಸಮಿತಿ ವಿಸರ್ಜನೆ ಮೊದಲ ಬಾರಿ ಆಗುತ್ತಿಲ್ಲ. ಸಿದ್ದರಾಮಯ್ಯ ಅವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ರಾಜ್ಯದಲ್ಲಿ ಈ ಬಗ್ಗೆ ಹಲವಾರು ಬಾರಿ ಬದಲಾವಣೆಗಳಾಗಿವೆ. ಅವರ ಕಾಲದಲ್ಲಿಯೂ ಹೀಗೆ ಆಗಿದೆ. ಆಗೇನು ಅವರು ಪಠ್ಯ ಪುಸ್ತಕ ಪರಿಷ್ಕರಣೆ ಹಿಂದೆಗೆದುಕೊಂಡರೆ? ಸುಮ್ಮನೆ ಗೊಂದಲ ಸೃಷ್ಟಿ ಮಾಡಬಾರದು. ನಾವು ಈ ಬಗ್ಗೆ ಮುಕ್ತವಾಗಿದ್ದೇವೆ. ತಪ್ಪುಗಳನ್ನು ಸರಿಪಡಿಸಲು ಸಿದ್ಧರಿದ್ದೇವೆ. ಅದ್ಯಾವುದರ ಬಗ್ಗೆಯೇ ಆಗಲಿ ಸರಿಪಡಿಸಿ ಮರುಮುದ್ರಣ ಮಾಡಲಾಗುವುದು ಎಂದರು.
ಪೀರ್ ಪಾಷಾ ದರ್ಗಾ
ಪೀರ್ ಪಾಷಾ ದರ್ಗಾ ಕುರಿತು ಸಂಶೋಧನೆ ಮಾಡುವಂತೆ ಸ್ವಾಮೀಜಿಗಳು ಮನವಿ ನೀಡಿದ್ದಾರೆ ಪುರಾತತ್ವ ಇಲಾಖೆ ಪರಿಶೀಲನೆ ನಡೆಸಲಿದೆ ಎಂದು ಮುಖ್ಯಮಂತ್ರಿ ಗಳು ತಿಳಿಸಿದರು.












Click it and Unblock the Notifications