ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್ ಪರಿಸ್ಥಿತಿಯಲ್ಲಿ; ಖಾಸಗಿ ಆಸ್ಪತ್ರೆ ಕರ್ತವ್ಯಗಳು

|
Google Oneindia Kannada News

ಬೆಂಗಳೂರು, ಆಗಸ್ಟ್ 05 : ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 1,45,830ಕ್ಕೆ ಏರಿಕೆಯಾಗಿದೆ. ಕೋವಿಡ್ ಸೋಂಕಿತರಿಗೆ ಕೆಲವು ಖಾಸಗಿ ಆಸ್ಪತ್ರೆಗಳು ಬೆಡ್ ನೀಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತವೆ, ಸರ್ಕಾರದ ಆದೇಶವನ್ನು ಪಾಲನೆ ಮಾಡಲಾಗುತ್ತಿಲ್ಲ.

Recommended Video

Kabini Reservoir ಪ್ರದೇಶದಲ್ಲಿ ಭಾರೀ ಮಳೆ; ಒಳಹರಿವು ಏರಿಕೆ | Oneindia Kannada

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿ ಆಸ್ಪತ್ರೆಯಲ್ಲಿ ಕೊರೊನಾ ರೋಗಿಗಳಿಗೆ ಶೇ 50ರಷ್ಟು ಹಾಸಿಗೆ ಮೀಸಲಿಡಬೇಕು ಎಂದು ಸೂಚನೆ ನೀಡಿದ್ದರು. ಆದರೆ, ಬೆಡ್‌ಗಳನ್ನು ಮೀಸಲಿಟ್ಟಿಲ್ಲ.

ಕೋವಿಡ್ ಚಿಕಿತ್ಸೆ; ಆಸ್ಪತ್ರೆಗಳ ಜವಾಬ್ದಾರಿ ಬಗ್ಗೆ ತಿಳಿಯಿರಿ ಕೋವಿಡ್ ಚಿಕಿತ್ಸೆ; ಆಸ್ಪತ್ರೆಗಳ ಜವಾಬ್ದಾರಿ ಬಗ್ಗೆ ತಿಳಿಯಿರಿ

ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಶೇ 50ರಷ್ಟು ಹಾಸಿಗೆ ಮೀಸಲಿಡದ ಖಾಸಗಿ ಆಸ್ಪತ್ರೆಗಳ ಪರವಾನಗಿಯನ್ನು ಬಿಬಿಎಂಪಿ ಆರೋಗ್ಯಾಧಿಕಾರಿಗಳ ತಂಡ ತಾತ್ಕಾಲಿಕವಾಗಿ ರದ್ದು ಮಾಡುತ್ತಿದೆ. ಆಸ್ಪತ್ರೆ ವಿರುದ್ಧ ದೂರು ದಾಖಲು ಮಾಡಲಾಗುತ್ತಿದೆ.

ಚಿತ್ರಗಳು; ಕಚೇರಿಯನ್ನು ಕೋವಿಡ್ ಆಸ್ಪತ್ರೆ ಮಾಡಿದ ಉದ್ಯಮಿ ಚಿತ್ರಗಳು; ಕಚೇರಿಯನ್ನು ಕೋವಿಡ್ ಆಸ್ಪತ್ರೆ ಮಾಡಿದ ಉದ್ಯಮಿ

ಆರೋಗ್ಯ ಇಲಾಖೆ ಖಾಸಗಿ ಆಸ್ಪತ್ರೆಗಳ ಕರ್ತವ್ಯಗಳು ಏನು ಎಂಬ ಮಾಹಿತಿಯನ್ನು ಜನರಿಗಾಗಿ ಬಿಡುಗಡೆ ಮಾಡಿದೆ. ಸಿಬ್ಬಂದಿ ಕೊರತೆ ಸೇರಿದಂತೆ ವಿವಿಧ ನೆಪ ಹೇಳುವ ಆಸ್ಪತ್ರೆಗಳು ಬೆಡ್‌ಗಳನ್ನು ಮಾತ್ರ ನೀಡುತ್ತಿಲ್ಲ.

ಕೋವಿಡ್ ಸೋಂಕಿತರಿಗೆ ಬೆಡ್ ಇಲ್ಲ; 19 ಆಸ್ಪತ್ರೆಗಳ ಲೈಸೆನ್ಸ್ ರದ್ದು! ಕೋವಿಡ್ ಸೋಂಕಿತರಿಗೆ ಬೆಡ್ ಇಲ್ಲ; 19 ಆಸ್ಪತ್ರೆಗಳ ಲೈಸೆನ್ಸ್ ರದ್ದು!

ಆಸ್ಪತ್ರೆಗೆ ದಾಖಲು ಮಾಡಿಕೊಳ್ಳುತ್ತಿಲ್ಲ

ಆಸ್ಪತ್ರೆಗೆ ದಾಖಲು ಮಾಡಿಕೊಳ್ಳುತ್ತಿಲ್ಲ

ಕೆಲವು ಖಾಸಗಿ ಆಸ್ಪತ್ರೆಗಳು ತುರ್ತು ಚಿಕಿತ್ಸೆ ಅವಶ್ಯವಿರುವ ರೋಗಿಗಳನ್ನು ದಾಖಲು ಮಾಡಿಕೊಳ್ಳುತ್ತಿಲ್ಲ. ಇದು ರೋಗ ಉಲ್ಬಣಗೊಳ್ಳುವುದಕ್ಕೆ ಹಾಗೂ ಕೆಲವು ಸಂದರ್ಭದಲ್ಲಿ ಸಾವಿಗೆ ಕಾರಣವಾಗಿದೆ.

ಖಾಸಗಿ ಆಸ್ಪತ್ರೆಯ ಕರ್ತವ್ಯ

ಖಾಸಗಿ ಆಸ್ಪತ್ರೆಯ ಕರ್ತವ್ಯ

ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ 2017ರ ಪರಿಚ್ಛೇಧ 11 ಮತ್ತು 11 (ಎ) ಅನ್ವಯ ಪ್ರಥಮ ಚಿಕಿತ್ಸೆ ನೀಡುವುದು ಹಾಗೂ ರೋಗಿಯ ಆರೋಗ್ಯ ಸ್ಥಿತಿಯನ್ನು ಸ್ಥಿರಗೊಳಿಸಿ ಜೀವ ಉಳಿಸುವ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಪ್ರತಿ ಖಾಸಗಿ ಆಸ್ಪತ್ರೆಯ ಕರ್ತವ್ಯವಾಗಿದೆ.

ರೋಗಿಗೆ ದಾಖಲಾತಿ ನೀಡಬೇಕು

ರೋಗಿಗೆ ದಾಖಲಾತಿ ನೀಡಬೇಕು

ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಹೊರಡಿಸಲಾಗಿರುವ ಆದೇಶದ ಅನ್ವಯ ಖಾಸಗಿ ವೈದ್ಯಕೀಯ ಸಂಸ್ಥೆಗಳು ತಮ್ಮಲ್ಲಿ ಬರುವ ಯಾವುದೇ ರೋಗಿಯು ಕೋವಿಡ್ ಸೋಂಕಿತನೇ ಅಲ್ಲವೇ ಎಂಬ ಅಂಶವನ್ನು ಪರಿಗಣಿಸದೇ ಚಿಕಿತ್ಸೆ ಮತ್ತು ದಾಖಲಾತಿಯನ್ನು ನೀಡಬೇಕು. ಸಂಸ್ಥೆಗಳು ಕೋವಿಡ್ ಪರೀಕ್ಷೆ ವರದಿಗಾಗಿ ಒತ್ತಾಯ ಮಾಡುವಂತಿಲ್ಲ.

ಕಟ್ಟುನಿಟ್ಟಾಗಿ ಪಾಲಿಸಬೇಕು

ಕಟ್ಟುನಿಟ್ಟಾಗಿ ಪಾಲಿಸಬೇಕು

ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಶೇ 50ರಷ್ಟು ಹಾಸಿಗೆ ಮೀಸಲಿಡುವುದು ಹಾಗೂ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ನೀಡಿದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ನಿರ್ದೇಶನ ನೀಡಲಾಗಿದೆ. ನಿಯಮ ಪಾಲನೆ ಮಾಡದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.

English summary
Many private hospitals in Karnataka not admitting COVID 19 patients. Here are the responsibilities of hospitals according to health department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X