ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ವ ಪಕ್ಷಗಳ ಸಭೆ; ರಾಜ್ಯದಲ್ಲಿ ಲಾಕ್ ಡೌನ್ ಅನಿವಾರ್ಯ

|
Google Oneindia Kannada News

ಬೆಂಗಳೂರು, ಏಪ್ರಿಲ್ 20; ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲು ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ ನಡೆಯುತ್ತಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಸ್ಪತ್ರೆಯಿಂದಲೇ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಬೆಂಗಳೂರು ಮತ್ತು ರಾಜ್ಯದ ಕೋವಿಡ್ ಪರಿಸ್ಥಿತಿ ಬಗ್ಗೆ ಚರ್ಚೆಯನ್ನು ನಡೆಸಲಾಗುತ್ತಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಹಲವಾರು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

Corona Effect: ರಾಜಸ್ಥಾನದಲ್ಲಿ ಸಂಜೆ 6 ರಿಂದ ಬೆಳಗ್ಗೆ 6ರವರೆಗೂ ನಿಷೇಧಾಜ್ಞೆ Corona Effect: ರಾಜಸ್ಥಾನದಲ್ಲಿ ಸಂಜೆ 6 ರಿಂದ ಬೆಳಗ್ಗೆ 6ರವರೆಗೂ ನಿಷೇಧಾಜ್ಞೆ

COVID-19 Situation Karnataka All Party Meeting Highlights

ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಜೆಡಿಎಸ್ ನಾಯಕ ಎಚ್. ಡಿ. ರೇವಣ್ಣ ಸೇರಿದಂತೆ ಅನೇಕ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದಾರೆ.

ಬೆಂಗಳೂರಲ್ಲಿ ಕೋವಿಡ್ ಪರಿಸ್ಥಿತಿ; ಲಾಕ್ ಡೌನ್‌ ಜಾರಿಗೆ ವಿರೋಧ ಬೆಂಗಳೂರಲ್ಲಿ ಕೋವಿಡ್ ಪರಿಸ್ಥಿತಿ; ಲಾಕ್ ಡೌನ್‌ ಜಾರಿಗೆ ವಿರೋಧ

ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, "ಎರಡನೇ ಅಲೆ ವೇಗವಾಗಿ ಹಬ್ಬುತ್ತಿದೆ. ಇಂತಹ ಸಂದರ್ಭದಲ್ಲಿ ನೀವು ಎಲ್ಲರ ಅಭಿಪ್ರಾಯ ಕೇಳಲು ಮುಂದಾಗಿರುವುದು ಸ್ವಾಗತಾರ್ಹ" ಎಂದರು.

ಕೋವಿಡ್ 19ಕ್ಕೆ ಚಿಕಿತ್ಸೆ ಪ್ಲಾಸ್ಮಾ ಹುಡುಕಾಟ ಇಲ್ಲಿವೆ Helplines ಕೋವಿಡ್ 19ಕ್ಕೆ ಚಿಕಿತ್ಸೆ ಪ್ಲಾಸ್ಮಾ ಹುಡುಕಾಟ ಇಲ್ಲಿವೆ Helplines

"ನಾನು ಕೂಡಾ ಸೋಂಕಿಗೆ ತುತ್ತಾಗಿದ್ದೇನೆ. ಕೋವಿಡ್ ಪರಿಸ್ಥಿತಿಯ ಸಂದರ್ಭದಲ್ಲಿ ಜನರನ್ನು ಕಾಪಾಡಬೇಕು. ಕೋವಿಡ್ ನಿಯಂತ್ರಣಕ್ಕೆ ಸೋಂಕು ಹೆಚ್ಚಿರುವ ಕಡೆ ಇಂದಿನಿಂದಲೇ ಲಾಕ್ ಡೌನ್" ಮಾಡಿ ಎಂದು ಕುಮಾರಸ್ವಾಮಿ ಸಲಹೆ ನೀಡಿದರು.

yediyurappa

"15 ದಿನ ಲಾಕ್ ಡೌನ್ ಮಾಡಬಹುದು. ಅದಕ್ಕೂ ಮೊದಲು ಬಡವರಿಗೆ ನೆರವಾಗಬೇಕು. ಅಧಿಕಾರಿಗಳ ಮೂಲಕ ಈ ಕಾರ್ಯ ಸಾಧ್ಯವಿಲ್ಲ. ಬೇರೆ ಮಾರ್ಗದಲ್ಲಿ ನಡೆಸಬೇಕು" ಎಂದು ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ಕೊಟ್ಟರು.

ಸಿದ್ದರಾಮಯ್ಯ ಹೇಳಿಕೆ; ಸಭೆಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, "ರಾಜ್ಯಪಾಲರ ಮೇಲೆ ಗೌರವವಿಟ್ಟು ನಾವು ಸಭೆಗೆ ಬಂದಿದ್ದೇವೆ. ಸಭೆ ಕರೆದಿರುವುದೇ ಅಸಂವಿಧಾನಿಕ. ರಾಜ್ಯಪಾಲರು ಸಭೆ ಕರೆಯುವ ಮೂಲಕ ಆಡಳಿತದಲ್ಲಿ ಹಸ್ತಕ್ಷೇಪ ಮಾಡಲು ಅವಕಾಶವಿಲ್ಲ" ಎಂದರು.

"ಸರ್ಕಾರ ತಜ್ಞರು ನೀಡಿದ ವರದಿಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಆದ್ದರಿಂದ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ನಿಭಾಯಿಸುವಲ್ಲಿ ಕೇವಲ ಮುಖ್ಯಮಂತ್ರಿ, ಆರೋಗ್ಯ ಸಚಿವರು ಮಾತ್ರವಲ್ಲ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರ ಪಾತ್ರವಿದೆ" ಎಂದು ಸಿದ್ದರಾಮಯ್ಯ ಹೇಳಿದರು.

English summary
Karnataka Governor Vajubhai R. Vala chair all-party meeting to review the COVID-19 situation in state. Here are the highlights.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X