• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಈ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಿಗೆ ಕೊರೊನಾ ಪರೀಕ್ಷೆ ಕಡ್ಡಾಯ!

|

ಬೆಂಗಳೂರು, ಫೆ. 19: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಸತತವಾಗಿ ಇಳಿಮುಖವಾಗುತ್ತಿದೆ. ಆದರೆ ದೇಶದ ಹಲವು ರಾಜ್ಯಗಳಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಏಕಾಏಕಿ ಹೆಚ್ಚಾಗುತ್ತಿರುವುದು ಆತಂಕ ಸೃಷ್ಟಿಸಿದೆ.

ಹೊರ ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಉಪಾಧ್ಯಕ್ಷ ಆರ್. ಅಶೋಕ್ ಅವರು ರಾಜ್ಯಕ್ಕೆ ಬರುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಎಂದು ಆದೇಶ ಮಾಡಿದ್ದಾರೆ.

ಮಹಾರಾಷ್ಟ್ರ, ಕೇರಳ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಯಲ್ಲಿ, ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷನಾಗಿ ಸೂಚನೆ ನೀಡಿದ್ದೇನೆ. ಕೊಡಗು, ಮೈಸೂರು, ಬೆಳಗಾವಿ, ಮಂಗಳೂರು ಮೂಲಕ ರಾಜ್ಯ ಪ್ರವೇಶಿಸುವವರಿಗೆ ಕೋವಿಡ್ ಪರೀಕ್ಷಾ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಕೋವಿಡ್ ಟೆಸ್ಟ್ ರಿಪೋರ್ಟ್ ಇದ್ದರೆ ಮಾತ್ರ ರಾಜ್ಯ ಪ್ರವೇಶಕ್ಕೆ ಅವಕಾಶ ಎಂದು ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಆರ್. ಅಶೋಕ್ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ

ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಗಳ ಸಂಖ್ಯೆ 400ಕ್ಕಿಂತ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ 386 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 947246ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 291 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 5 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೂ 929058 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಜಿಲ್ಲಾವಾರು ಸೋಂಕಿತರು

ಜಿಲ್ಲಾವಾರು ಸೋಂಕಿತರು

ರಾಜ್ಯದಲ್ಲಿ ಒಟ್ಟು 386 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 3, ಬಳ್ಳಾರಿ 6, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು 209, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 3, ಚಿತ್ರದುರ್ಗ 2, ದಕ್ಷಿಣ ಕನ್ನಡ 20, ದಾವಣಗೆರೆ 5, ಧಾರವಾಡ 2, ಗದಗ 1, ಹಾಸನ 7, ಹಾವೇರಿ 1, ಕಲಬುರಗಿ 23, ಕೊಡಗು 2, ಕೋಲಾರ 6, ಕೊಪ್ಪಳ 0, ಮಂಡ್ಯ 4, ಮೈಸೂರು 34, ರಾಯಚೂರು 1, ರಾಮನಗರ 0, ಶಿವಮೊಗ್ಗ 6, ತುಮಕೂರು 11, ಉಡುಪಿ 4, ಉತ್ತರ ಕನ್ನಡ 3, ವಿಜಯಪುರ 9, ಯಾದಗಿರಿ 1 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

ದೇಶದಲ್ಲಿ ಹೆಚ್ಚಾಗುತ್ತಿದೆ ಸೋಂಕು

ದೇಶದಲ್ಲಿ ಹೆಚ್ಚಾಗುತ್ತಿದೆ ಸೋಂಕು

ದೇಶದಲ್ಲಿ ಕಡಿಮೆಯಾಗುತ್ತಿದ್ದ ಕೊರೊನಾ ವೈರಸ್ ಪ್ರಕರಣಗಳಲ್ಲಿ ಮತ್ತೆ ಆಘಾತಕಾರಿ ಹೆಚ್ಚಳವಾಗುತ್ತಿದೆ. ಪ್ರಕರಣಗಳ ಸಂಖ್ಯೆ ತಗ್ಗಿದಂತೆ ಜನರು ಮೈಮರೆಯ ತೊಡಗಿದ್ದರು. ಈಗ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದು ಎಚ್ಚರಿಕೆಯ ಗಂಟೆ ಮೊಳಗಿಸಿದೆ.

ದೇಶದಲ್ಲಿ 24 ಗಂಟೆಗಳಲ್ಲಿ 13,193 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಸತತ ಎರಡನೆಯ ದಿನ 12 ಸಾವಿರಕ್ಕಿಂತ ಅಧಿಕ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆಯಾಗಿದೆ. ಗುರುವಾರ ಸಹ ಬಿಡುಗಡೆಯಾದವರ ಸಂಖ್ಯೆಗಿಂತ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ.

ದೇಶದಲ್ಲಿ ಇಳಿಕೆಯಾದ ಸಾವಿನ ಸಂಖ್ಯೆ

ದೇಶದಲ್ಲಿ ಇಳಿಕೆಯಾದ ಸಾವಿನ ಸಂಖ್ಯೆ

ಕಳೆದ ಎರಡು ದಿನ 100 ಗಡಿ ಮುಟ್ಟಿದ್ದ ಸಾವಿನ ಸಂಖ್ಯೆ 97ಕ್ಕೆ ಇಳಿದಿರುವುದು ಸಮಾಧಾನಕರ ಸಂಗತಿ. ಗುರುವಾರ ಸಂಜೆಯವರೆಗೆ ಆಸ್ಪತ್ರೆಗಳಿಂದ 10,896 ಮಂದಿ ಸೋಂಕಿತರು ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ.

ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1,09,63,394ಕ್ಕೆ ಏರಿಕೆಯಾಗಿದೆ. ಇದುವರೆಗೂ ಒಟ್ಟು 1,06,67,741 ಮಂದಿ ಬಿಡುಗಡೆಯಾಗಿದ್ದಾರೆ. 1,56,111 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ನಡುವೆ ಸಕ್ರಿಯ ಪ್ರಕರಣಗಳು 1,39,542ಕ್ಕೆ ಏರಿಕೆಯಾಗಿದೆ. ಕೋವಿಡ್ ರಕ್ಷಣೆ ವಿರುದ್ಧ ನೀಡಲಾಗುತ್ತಿರುವ ಲಸಿಕೆ ಕಾರ್ಯಕ್ರಮದಲ್ಲಿ ಸಹ ಭಾರತ ಗಮನಾರ್ಹ ಪ್ರಗತಿ ಸಾಧಿಸಿದೆ. ಇದುವರೆಗೂ ಒಂದು ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಒಟ್ಟು 1,01,88,007 ಮಂದಿಗೆ ಲಸಿಕೆ ಕೊಡಲಾಗಿದೆ ಎಂದು ವರದಿ ಹೇಳಿದೆ.

   ಮಹಾರಾಷ್ಟ್ರದಲ್ಲಿ ಹೆಚ್ಚಿದ ಕೊರೊನಾ ಸೋಂಕು-ಬೆಳಗಾವಿ ಗಡಿಯಲ್ಲಿ ಹೈ ಅಲರ್ಟ್..! | Covid Cases | Oneindia Kannada

   English summary
   Covid 19 test report has been made compulsory for those entering from Maharashtra and Kerala state to the state through Kodagu, Mysore, Belagavi and Mangalore.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X