ಕರ್ನಾಟಕದ ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊರೊನಾ ಲಸಿಕೆ?

ಬೆಂಗಳೂರು, ಫೆಬ್ರವರಿ.04: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಭಾರತವು ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ಕೊರೊನಾ ವಾರಿಯರ್ಸ್ ಆರೋಗ್ಯ ರಕ್ಷಣೆ ವಿಚಾರದಲ್ಲಿ ಕರ್ನಾಟಕ ಕೂಡ ಹಿಂದೆ ಬಿದ್ದಿಲ್ಲ. ಅತಿಹೆಚ್ಚು ಲಸಿಕೆ ನೀಡಿರುವ ಟಾಪ್-5 ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಕೂಡಾ ಸ್ಥಾನ ಪಡೆದುಕೊಂಡಿದೆ.

ರಾಜ್ಯದಲ್ಲೂ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಕ್ಷಿಪ್ರಗತಿಯಲ್ಲಿ ನಡೆಸಲಾಗುತ್ತಿದೆ. ಇದುವರೆಗೂ 3,16,368 ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ.

ಕೊರೊನಾವೈರಸ್ ಲಸಿಕೆ ನೀಡುವುದರಲ್ಲಿ ರಾಜ್ಯದಲ್ಲೇ ಉತ್ತರ ಕನ್ನಡ ಜಿಲ್ಲೆಯು ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ಜಿಲ್ಲೆಯಲ್ಲಿ ಅಂದುಕೊಂಡಿರುವ ಸಂಖ್ಯೆಯ ಶೇ.65ರಷ್ಟು ಆರೋಗ್ಯ ಸಿಬ್ಬಂದಿಗೆ ಈಗಾಗಲೇ ಲಸಿಕೆ ಹಾಕಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕನ್ನಡದಲ್ಲಿ ಅತಿಹೆಚ್ಚು ಜನರಿಗೆ ಕೊರೊನಾ ಲಸಿಕೆ

ಉತ್ತರ ಕನ್ನಡದಲ್ಲಿ ಅತಿಹೆಚ್ಚು ಜನರಿಗೆ ಕೊರೊನಾ ಲಸಿಕೆ

ಕೊರೊನಾವೈರಸ್ ಲಸಿಕೆ ವಿತರಿಸುವಲ್ಲಿ ಉತ್ತರ ಕನ್ನಡ ಜಿಲ್ಲೆಯು ಅಗ್ರಸ್ಥಾನದಲ್ಲಿದೆ. ಜಿಲ್ಲೆಯ 14,834 ಜನರಿಗೆ ಕೊವಿಡ್-19 ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಈ ಪೈಕಿ ಶೇ.65ರಷ್ಟು ಆರೋಗ್ಯ ಸಿಬ್ಬಂದಿಗೆ ಲಸಿಕೆಯನ್ನು ನೀಡಲಾಗಿದೆ. ಜಿಲ್ಲೆಯಲ್ಲಿ ಇದುವರೆಗೂ 9698 ಕೊರೊನಾ ವಾರಿಯರ್ಸ್ ಗೆ ಲಸಿಕೆಯನ್ನು ನೀಡಿರುವುದು ವರದಿಯಾಗಿದೆ.

ಅತಿಹೆಚ್ಚು ಕೊರೊನಾ ಲಸಿಕೆ ನೀಡಿದ ಜಿಲ್ಲೆಗಳ ಪಟ್ಟಿ

ಅತಿಹೆಚ್ಚು ಕೊರೊನಾ ಲಸಿಕೆ ನೀಡಿದ ಜಿಲ್ಲೆಗಳ ಪಟ್ಟಿ

ಜಿಲ್ಲೆ ಗುರಿ ಲಸಿಕೆ ಪಡೆದವರು ಶೇಕಡಾವಾರು ಪ್ರಮಾಣ
ಉತ್ತರ ಕನ್ನಡ 14834 9698 ಶೇ.65
ಯಾದಗಿರಿ 4619 2967 ಶೇ.64
ಕೊಡಗು 6904 4352 ಶೇ.63
ಚಿಕ್ಕಬಳ್ಳಾಪುರು 10416 6449 ಶೇ.62
ಚಿಕ್ಕಮಗಳೂರು 7340 4489 ಶೇ.61
ಒಟ್ಟು ಕರ್ನಾಟಕ 6,11,907 313639 ಶೇ.51
ಅತಿಹೆಚ್ಚು ಜನಸಂಖ್ಯೆಯುಳ್ಳ ಬೆಂಗಳೂರಿನಲ್ಲಿ ಶೇ.46 ಲಸಿಕೆ

ಅತಿಹೆಚ್ಚು ಜನಸಂಖ್ಯೆಯುಳ್ಳ ಬೆಂಗಳೂರಿನಲ್ಲಿ ಶೇ.46 ಲಸಿಕೆ

ಕೊರೊನಾವೈರಸ್ ಲಸಿಕೆ ವಿತರಣೆಗೆ ಜನವರಿ.16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಧಿಕೃತವಾಗಿ ಚಾಲನೆ ನೀಡಿದ್ದರು. ಲಸಿಕೆ ವಿತರೆಯ ಮೊದಲ ದಿನ ರಾಜ್ಯ ರಾಜಧಾನಿಯಲ್ಲಿ ಅತಿಹೆಚ್ಚು ಜನರಿಗೆ ಲಸಿಕೆ ನೀಡಲಾಗಿತ್ತು. ಅಂದು 78587 ಜನರಿಗೆ ಲಸಿಕೆ ನೀಡಲಾಗಿದ್ದು, ಈವರೆಗೂ ಬೆಂಗಳೂರಿನಲ್ಲಿ ಅಂದುಕೊಂಡಿದ್ದ ಪ್ರಮಾಣದಲ್ಲಿ ಶೇ.46ರಷ್ಟು ಜನರಿಗೆ ಕೊವಿಡ್-19 ಲಸಿಕೆಯನ್ನು ನೀಡಲಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಅತಿಕಡಿಮೆ ಅಂದರೆ ಶೇ.38 ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಶೇ.39ರಷ್ಟು ಜನರಿಗೆ ಲಸಿಕೆಯನ್ನು ನೀಡಲಾಗಿದೆ.

ಪೂರ್ವಭಾವಿ ಸಿದ್ಧತೆಯೇ ಲಸಿಕೆ ವಿತರಣೆಗೆ ಕಾರಣ

ಪೂರ್ವಭಾವಿ ಸಿದ್ಧತೆಯೇ ಲಸಿಕೆ ವಿತರಣೆಗೆ ಕಾರಣ

ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನಕ್ಕೂ ಮೊದಲು ಫಲಾನುಭವಿ ವೈದ್ಯಕೀಯ ಸಿಬ್ಬಂದಿಯ ಪಟ್ಟಿ ಸಿದ್ಧಪಡಿಸಲಾಗಿತ್ತು. ಪಟ್ಟಿ ಮಾಡಿದ ಕೊರೊನಾ ವಾರಿಯರ್ಸ್ ಗಳು ಸ್ವಯಂಪ್ರೇರಿತರಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ, ಕೊವಿಡ್-19 ಲಸಿಕೆ ಕೇಂದ್ರಕ್ಕೆ ತೆರಳಿ ಲಸಿಕೆ ಹಾಕಿಸಿಕೊಳ್ಳುವಂತೆ ಪ್ರೇರೇಪಿಸಲಾಯಿತು. ಆರೋಗ್ಯ ಸಿಬ್ಬಂದಿಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆ ಶೇ.65ರಷ್ಟು ಜನರಿಗೆ ಲಸಿಕೆ ನೀಡಲಾಗಿದೆ. ಈ ವಾರದಲ್ಲೇ ಶೇ.90ರಷ್ಟು ಜನರಿಗೆ ಕೊರೊನಾವೈರಸ್ ಲಸಿಕೆ ನೀಡಲಾಗುವುದು ಎಂದು ಜಿಲ್ಲಾ ವೈದ್ಯಾಧಿಕಾರಿ ಶರದ್ ನಾಯಕ್ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+