ಕುತೂಹಲಕಾರಿ ಕಥೆ: ಕರ್ನಾಟಕದಲ್ಲಿ ಕೊರೊನಾ ಕಡಿಮೆ, ಸಾವು ಜಾಸ್ತಿ!

ಬೆಂಗಳೂರು, ಮೇ 17: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಟ್ಟಹಾಸ ಕಡಿಮೆಯಾಗಿದೆ. ಪ್ರತಿನಿತ್ಯ 10,000ಕ್ಕಿಂತ ಕಡಿಮೆ ಕೊವಿಡ್-19 ಹೊಸ ಪ್ರಕರಣಗಳು ವರದಿಯಾಗುತ್ತಿದ್ದರೂ ರಾಜ್ಯದ ಜನರಿಗೆ ಆತಂಕ ತಪ್ಪಿದ್ದಲ್ಲ.

ಕೊರೊನಾವೈರಸ್ ಸೋಂಕಿತ ಪ್ರಕರಣ ಸಂಖ್ಯೆ ಇಳಿಮುಖವಾಗುತ್ತಿದ್ದರೆ ಮತ್ತೊಂದು ದಿಕ್ಕಿನಲ್ಲಿ ಸಾವಿನ ಸಂಖ್ಯೆ ಏರುಮುಖವಾಗಿ ಸಾಗಿದೆ. ರಾಜ್ಯದಲ್ಲಿ ಕೊವಿಡ್-19 ಹೊಸ ಪ್ರಕರಣಗಳ ಶೇಕಡಾವಾರು ಪ್ರಮಾಣ 4.35ರಷ್ಟಿದೆ. ಅದೇ ರೀತಿ ಸೋಂಕಿನಿಂದ ಪ್ರಾಣ ಬಿಟ್ಟವರ ಶೇಕಡಾವಾರು ಪ್ರಮಾಣ 2..01ರಷ್ಟಿದೆ.

ಕಳೆದ 24 ಗಂಟೆಗಳಲ್ಲಿ 7345 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 148 ಮಂದಿ ಮೃತಪಟ್ಟಿದ್ದು, ಇದೇ ಅವಧಿಯಲ್ಲಿ 17,913 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 47,730 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,20,982 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,68,712 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 56,73,849 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 2,62,18,464 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 3,20,92,313 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ರಾಜ್ಯದಲ್ಲಿ 24 ಗಂಟೆಗಳ ಹಿಂದಿನ ಕೊರೊನಾ ಲೆಕ್ಕಾಚಾರ?

ರಾಜ್ಯದಲ್ಲಿ 24 ಗಂಟೆಗಳ ಹಿಂದಿನ ಕೊರೊನಾ ಲೆಕ್ಕಾಚಾರ?

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾವೈರಸ್ ಹೊಸ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ ಹೆಚ್ಚಾಗಿದೆ. ಒಂದು ದಿನದಲ್ಲಿ 17913 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 148 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಬುಧವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2784355ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ 33296 ಜನರು ಪ್ರಾಣ ಬಿಟ್ಟಿದ್ದು, ಈವರೆಗೂ 2599472 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ 151566 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ದಾಖಲೆಯ ಇಳಿಕೆ

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ದಾಖಲೆಯ ಇಳಿಕೆ

ಸಿಲಿಕಾನ್ ಸಿಟಿಯಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತೊಮ್ಮೆ 1,600ರ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 1611 ಮಂದಿಗೆ ಕೊವಿಡ್-19 ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1200754ಕ್ಕೆ ಏರಿಕೆಯಾಗಿದೆ. 16 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15354ಕ್ಕೆ ಏರಿಕೆಯಾಗಿದೆ.

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಒಟ್ಟು 7345 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ - 47, ಬಳ್ಳಾರಿ 183, ಬೆಳಗಾವಿ 254, ಬೆಂಗಳೂರು ಗ್ರಾಮಾಂತರ 275, ಬೆಂಗಳೂರು 1611, ಬೀದರ್14, ಚಾಮರಾಜನಗರ 97, ಚಿಕ್ಕಬಳ್ಳಾಪುರ 145, ಚಿಕ್ಕಮಗಳೂರು 254, ಚಿತ್ರದುರ್ಗ 95, ದಕ್ಷಿಣ ಕನ್ನಡ 790, ದಾವಣಗೆರೆ 207, ಧಾರವಾಡ 112, ಗದಗ 52, ಹಾಸನ 531, ಹಾವೇರಿ 27, ಕಲಬುರಗಿ 26, ಕೊಡಗು 116, ಕೋಲಾರ 102, ಕೊಪ್ಪಳ 77, ಮಂಡ್ಯ 317, ಮೈಸೂರು 841, ರಾಯಚೂರು 22, ರಾಮನಗರ 58, ಶಿವಮೊಗ್ಗ 262, ತುಮಕೂರು 347, ಉಡುಪಿ 159, ಉತ್ತರ ಕನ್ನಡ 239, ವಿಜಯಪುರ 73, ಯಾದಗಿರಿ 12 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ರಾಜ್ಯದಲ್ಲಿ ಮೇ 1ರಿಂದ ಈವರೆಗೂ 32,85,128 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ಮೊದಲ ಡೋಸ್ ನೀಡಲಾಗಿದ್ದು, 14,604 ಜನರಿಗೆ 2ನೇ ಡೋಸ್ ಲಸಿಕೆ ವಿತರಿಸಲಾಗಿದೆ. ರಾಜ್ಯದಲ್ಲಿ ಈವರೆಗೂ 7,39,667 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 4,84,497 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 7,11,485 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 2,29,291 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 97,84,975 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 23,65,476 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+