ಕೊರೊನಾ ಸೋಂಕಿತರಿಗೆ ಹಾಸಿಗೆ ಮೀಸಲು: ಖಾಸಗಿ ಆಸ್ಪತ್ರೆಗಳೊಂದಿಗೆ ಸರ್ಕಾರದ ಸಭೆ

ಬೆಂಗಳೂರು, ಮಾರ್ಚ್ 18: ರಾಜ್ಯದಲ್ಲಿ ಕೊರೊನಾಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗಾಗಿ ಹಾಸಿಗೆಗಳನ್ನು ಮೀಸಲಿಡುವ ಕುರಿತು ರಾಜ್ಯ ಸರ್ಕಾರ ಮಾತುಕತೆ ನಡೆಸುತ್ತಿದೆ.

ನಿತ್ಯ ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗತ್ತಿದ್ದು, ಸೋಮವಾರದಷ್ಟೊತ್ತಿಗೆ, 1 ಸಾವಿರ ಹಾಸಿಗೆಗಳುಳ್ಳ ಕೋವಿಡ್ ಕೇರ್ ಕೇಂದ್ರಗಳನ್ನು ಸಿದ್ಧಪಡಿಸಲಾಗುತ್ತದೆ.

ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಇಂದಿನಿಂದ 50 ದಿನಗಳ ಕಾಲ ವೈದ್ಯ ಸಿಬ್ಬಂದಿ ಮತ್ತು ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ ಎಂದು ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಒಂದೇ ದಿನ ಎರಡೂವರೆ ಲಕ್ಷ ಲಸಿಕೆ ನೀಡಲಾಗಿದೆ. ಇನ್ನುಮುಂದೆ ಪ್ರತಿ ದಿನ ಮೂರು ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿ ನಿಗದಿಪಡಿಸಲಾಗಿದೆ.

Covid Cases Rise Again Karnataka Govt To Hold Talks With Private Hospitals

ಆಂಬ್ಯುಲೆನ್ಸ್ ಕೊರತೆ ಆಗಬಾರದು ಎನ್ನುವ ಕಾರಣಕ್ಕೆ ಬೆಂಗಳೂರು ನಗರದಲ್ಲಿ 200 ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ. ಎಲ್ಲಾ ಮಾಹಿತಿ ತಕ್ಷಣವೇ ಪಡೆಯಲು ರಿಯಲ್ ಟೈಂ ವ್ಯವಸ್ಥೆ ಮಾಡಲಾಗುತ್ತಿದೆ. ಗೃಹ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿಯ ನೇಮಕವನ್ನು ತಾತ್ಕಾಲಿಕವಾಗಿ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಕೋವಿಡ್ ಲಸಿಕೆ ವ್ಯರ್ಥವಾಗುವುದಕ್ಕೆ ಸಂಬಂಧಿಸಿದಂತೆ ಸರಿಯಾದ ಮಾಹಿತಿ ನೀಡಲು ಸೂಚನೆ ನೀಡಲಾಗಿದೆ. ಪ್ರತಿ ದಿನ ವರದಿ ನೀಡಲು ಸೂಚಿಸಲಾಗಿದೆ ಎಂದಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗಾಗಿ ಹಾಸಿಗೆಗಳನ್ನು ಮೀಸಲಿಡುವ ಕುರಿತು ಸರ್ಕಾರ ಆಸ್ಪತ್ರೆಗಳ ಜತೆ ಮಾತುಕತೆ ನಡೆಸಲಿದೆ.

Recommended Video

      ರಕ್ತ ಸಂಗ್ರಹಣೆ ಮತ್ತು ಸಾಗಾಟ ವಾಹನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+