ಇದರಲ್ಲಿ ಯಾವುದು ಸತ್ಯ, ಯಾವುದು ಸುಳ್ಳು: ಸಿದ್ದರಾಮಯ್ಯ ಗಂಭೀರ ಪ್ರಶ್ನೆ

ಬೆಂಗಳೂರು, ಮಾರ್ಚ್ 27: ಲಾಕ್ ಡೌನ್ ಜಾರಿ ಮಾಡಬೇಡಿ, ಆರ್ಥಿಕತೆಗೆ ತೊಂದರೆ ಬರದಂತೆ ವೈಜ್ಞಾನಿಕವಾಗಿ ಕೋವಿಡ್ ನಿಯಂತ್ರಿಸಿ ಎಂದು ಸಲಹೆ ನೀಡಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೊರೊನಾ ಲೆಕ್ಕದಲ್ಲಿ ಸರಕಾರದ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ.

ಈ ಹಿಂದೆಯೂ ಕೊರೊನಾ ನಿರ್ವಹಣೆಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ವಿರುದ್ದ ಮುಗಿಬಿದ್ದಿದ್ದ ಕಾಂಗ್ರೆಸ್, ಸಾವುನೋವಿನ ವಿಚಾರದಲ್ಲಿ ರಾಜ್ಯ ಆರೋಗ್ಯ ಇಲಾಖೆ ಸುಳ್ಳು ಮಾಹಿತಿ ನೀಡುತ್ತಿದೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯ ಮಾಡಿರುವ ಟ್ವೀಟ್ ಹೀಗಿದೆ, "ರಾಜ್ಯದ ಆರೋಗ್ಯ ಇಲಾಖೆ ದಾಖಲೆ ಪ್ರಕಾರ 2020ರ ಡಿಸೆಂಬರ್ ವರೆಗಿನ ಕೊರೊನಾ ಸಾವಿನ ಸಂಖ್ಯೆ- 12,090. ರಾಜ್ಯ ಯೋಜನಾ ಮತ್ತು ಅಂಕಿಅಂಶ ಇಲಾಖೆಯ ಪ್ರಕಾರ ಇದೇ ಅವಧಿಯಲ್ಲಿ ಕೊರೊನಾ ಸಾವಿನ ಸಂಖ್ಯೆ- 22,320. @CMofKarnataka, @mla_sudhakar ಇದರಲ್ಲಿ ಯಾವುದು ಸತ್ಯ, ಯಾವುದು ಸುಳ್ಳು?" ಎಂದು ಪ್ರಶ್ನಿಸಿದ್ದಾರೆ.

Covid Deaths In Karnataka: State Government Showing False Information, Siddaramaiah Tweet

"ಕೊರೊನಾ ಉಲ್ಭಣಕ್ಕೆ @BJP4Karnataka ಸರ್ಕಾರದ ಅಸಾಮರ್ಥ್ಯ, ಭ್ರಷ್ಟಾಚಾರ ಹಾಗೂ ಸುಳ್ಳುಗಳು ಕಾರಣ ಎಂದು ಮೊದಲ ದಿನದಿಂದ ಹೇಳುತ್ತಾ ಬಂದಿದ್ದೇನೆ. ತಪ್ಪನ್ನು ತಿದ್ದಿಕೊಳ್ಳದೆ ಎಲ್ಲವನ್ನು ಸಮರ್ಥಿಸಿಕೊಂಡ ಸರ್ಕಾರದ ಲಜ್ಜೆಗೇಡಿತನದ ಫಲವನ್ನು ರಾಜ್ಯದ ಜನ ಅನುಭವಿಸಬೇಕಾಗಿದೆ" ಎಂದು ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.

"@BJP4Karnataka ಸುಳ್ಳು ಹೇಳಿರುವುದು ಕೊರೊನಾ ಸಾವಿನ ಬಗ್ಗೆ ಮಾತ್ರ ಅಲ್ಲ, ಔಷಧಿ,ಮಾಸ್ಕ್,ಸ್ಯಾನಿಟೈಸರ್ ಪಿಪಿ ಕಿಟ್ ಗಳಿಂದ ಹಿಡಿದು ಆಸ್ಪತ್ರೆಗಳ ಹಾಸಿಗೆ ಖರೀದಿವರೆಗೆ ಎಲ್ಲದರಲ್ಲಿಯೂ ನಡೆದಿರುವ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು @CMofKarnataka ಮತ್ತು @mla_sudhakar ಸುಳ್ಳು ಹೇಳುತ್ತಲೇ ಇದ್ದಾರೆ"ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

"ಕೊರೊನಾ ಸೋಂಕು, ಸಾವು, ಚಿಕಿತ್ಸೆ ಮತ್ತು ನೊಂದ ಕುಟುಂಬಗಳಿಗೆ ನೀಡಿರುವ ಪರಿಹಾರದ ಬಗ್ಗೆ ರಾಜ್ಯದ @BJP4Karnataka ಸರ್ಕಾರ ತಕ್ಷಣ ಶ್ವೇತಪತ್ರ ಹೊರಡಿಸಿ ನಿಜಸಂಗತಿಯನ್ನು ರಾಜ್ಯದ ಜನತೆಗೆ ತಿಳಿಸಬೇಕು. ಕೊರೊನಾವನ್ನು ಔಷಧಿ-ಚಿಕಿತ್ಸೆಯಿಂದ ಗೆಲ್ಲಬೇಕೇ ಹೊರತು ಸುಳ್ಳುಗಳಿಂದಲ್ಲ"ಎಂದು ಸಿದ್ದರಾಮಯ್ಯ ಸರಕಾರದ ಕಿವಿಹಿಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+