ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್ ಉಚಿತ ಚಿಕಿತ್ಸೆ ಅಕ್ರಮ: 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್

|
Google Oneindia Kannada News

ಬೆಂಗಳೂರು, ಆ. 21: ಕೋವಿಡ್ ರೋಗಿಳಿಂದ ಹಣ ವಸೂಲಿ ಮಾಡಿದ್ದಲ್ಲದೇ ಸರ್ಕಾರದಿಂದಲೂ ಹಣ ಪಡೆದಿದ್ದ ರಾಜ್ಯದ 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ನೀಡಲಾಗಿದೆ. ಮಾತ್ರವಲ್ಲ ಹೆಚ್ಚುವರಿ ಹಣ ವಾಪಸು ಪಡೆದು 1.58 ಕೋಟಿ ರೂ. ಹಣವನ್ನು ರೋಗಿಗಳ ಕುಟುಂಬಕ್ಕೆ ಮರಳಿಸಲಾಗಿದೆ. ಅಕ್ರಮ ಎಸಗಿದ ಆಸ್ಪತ್ರೆಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಆರೊಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಕೋವಿಡ್ ರೋಗದಿಂದ ಬಳಲುತ್ತಿದ್ದ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಸಹ ಚಿಕಿತ್ಸೆ ನೀಡಲು ಸರ್ಕಾರ ಅವಕಾಶ ಕಲ್ಪಿಸಿತ್ತು. ಆದ್ರೆ ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ಶುಲ್ಕ ಪಡೆಯುವ ಜತೆಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಹಣವನ್ನು ಪಡೆದಿವೆ. ರಾಜ್ಯದ 577 ಆಸ್ಪತ್ರೆಗಳಿಗೆ ಈ ಸಂಬಂಧ ನೋಟಿಸ್ ನೀಡಿದ್ದು, 403 ಕುಟುಂಬಗಳಿಗೆ 1.58 ಕೋಟಿ ರೂ ಹಣವನ್ನು ಹಿಂತಿರುಗಿಸಲಾಗಿದೆ.

ಬೆಂಗಳೂರು: ಮಕ್ಕಳಲ್ಲಿ ಹೆಚ್ಚಾದ ಉಸಿರಾಟ ತೊಂದರೆ, ಇದಕ್ಕೆ ಕಾರಣವೇನು?ಬೆಂಗಳೂರು: ಮಕ್ಕಳಲ್ಲಿ ಹೆಚ್ಚಾದ ಉಸಿರಾಟ ತೊಂದರೆ, ಇದಕ್ಕೆ ಕಾರಣವೇನು?

ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ, ರೆಫರಲ್‌ ಆಧಾರದಲ್ಲಿ ಕೋವಿಡ್‌ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಹಿಂದೆಯೇ ಕ್ರಮ ವಹಿಸಲಾಗಿತ್ತು. ಕೋವಿಡ್‌ ರೋಗಿಗಳ ಕುಟುಂಬಕ್ಕೆ ನೆರವಾಗುವ ಸದುದ್ದೇಶದಿಂದ ಸರ್ಕಾರ ಈ ಪ್ರಯೋಜನವನ್ನು ನೀಡುತ್ತಿದೆ. ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಿಂದ ಭರಿಸಲಾಗುತ್ತದೆ. ಆದರೆ ಕೆಲ ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ಶುಲ್ಕ ವಸೂಲಿ ಮಾಡುವುದರ ಜೊತೆಗೆ, ಟ್ರಸ್ಟ್‌ನಿಂದಲೂ ಹಣ ಪಡೆದುಕೊಂಡಿವೆ.

Covid free Treatment scam: Health Minister Dr Sudhakar warns Private hospitals

ಈ ಕುರಿತು ದೂರುಗಳು ಬಂದಾಗ, ತಕ್ಷಣ ಕ್ರಮ ವಹಿಸಿದ ಸಚಿವ ಡಾ.ಕೆ.ಸುಧಾಕರ್‌, ಪರಿಶೀಲನೆ ನಡೆಸಿ ನೋಟಿಸ್‌ ಜಾರಿ ಮಾಡುವಂತೆ ಸೂಚನೆ ನೀಡಿದ್ದರು. ಅದರಂತೆ, ಈವರೆಗೆ 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಒಟ್ಟು 18.87 ಕೋಟಿ ರೂ. ಹಣವನ್ನು ಖಾಸಗಿ ಆಸ್ಪತ್ರೆಗಳು ಹೆಚ್ಚುವರಿಯಾಗಿ ಪಡೆದಿರುವುದು ತಿಳಿದುಬಂದಿದೆ. ಈ ಪೈಕಿ ಈಗಾಗಲೇ 1.58 ಕೋಟಿ ರೂ. ಹಣವನ್ನು ರೋಗಿಗಳ ಕುಟುಂಬಕ್ಕೆ ಹಿಂದಿರುಗಿಸಲಾಗಿದೆ. ಕೆಲ ಪ್ರಕರಣಗಳಲ್ಲಿ ಹೆಚ್ಚಿನ ಪರಿಶೀಲನೆಗಾಗಿ ದೂರುಗಳನ್ನು ಜಿಲ್ಲಾ ಮಟ್ಟದ ಕುಂದು ಕೊರತೆ ಸಮಿತಿಗೆ ವರ್ಗಾಯಿಸಲಾಗಿದೆ.

Covid free Treatment scam: Health Minister Dr Sudhakar warns Private hospitals

ಚಿಕಿತ್ಸಾ ವೆಚ್ಚ ಭರಿಸಿದ ಸರ್ಕಾರ:

ಕೋವಿಡ್‌ ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲಾಗಿದೆ. ಮೊದಲನೇ ಅಲೆಯಲ್ಲಿ, 2020 ರ ಮಾರ್ಚ್‌ನಿಂದ 2021 ರ ಮಾರ್ಚ್‌ವರೆಗೆ 391.26 ಕೋಟಿ ರೂ., ಎರಡನೇ ಅಲೆಯಲ್ಲಿ, 2021ರ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ 376.76 ಕೋಟಿ ರೂ. ಹಾಗೂ ಮೂರನೇ ಅಲೆಯ ವೇಳೆ, 2022 ರ ಜನವರಿಯಿಂದ ಮಾರ್ಚ್‌ವರೆಗೆ 11.80 ಕೋಟಿ ರೂ. ಪಾವತಿಸಲಾಗಿದೆ.

Covid free Treatment scam: Health Minister Dr Sudhakar warns Private hospitals

ಈ ಕುರಿತು ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ಸರ್ಕಾರದಿಂದ ಹಣ ಪಡೆಯುವುದರ ಜೊತೆಗೆ ಕೋವಿಡ್‌ ರೋಗಿಗಳಿಂದಲೂ ಶುಲ್ಕ ವಸೂಲಿ ಮಾಡಿದ ಆಸ್ಪತ್ರೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಈವರೆಗೆ 1.58 ಕೋಟಿ ರೂ.ನಷ್ಟು ಹಣವನ್ನು ರೋಗಿಗಳ ಕುಟುಂಬಕ್ಕೆ ಹಿಂದಿರುಗಿಸಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಇದು, ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ನೀಡಿರುವ ಸ್ಪಷ್ಟ ಎಚ್ಚರಿಕೆ ಎಂದು ತಿಳಿಸಿದ್ದಾರೆ.

English summary
Covid free treatment scam: Notice issued to 577 private hospitals and collected 1.58 Cr treatmemt cost which illegally collected from patents know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X