ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರಲು ಹೊಸ ಮಾರ್ಗಸೂಚಿ
ಬೆಂಗಳೂರು, ಜೂನ್ 29; ಮಹಾರಾಷ್ಟ್ರದಲ್ಲಿನ ಕೋವಿಡ್ ಪರಿಸ್ಥಿತಿ ಮತ್ತು ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪ್ರಕರಣಗಳು ಕೆಲವು ಜಿಲ್ಲೆಗಳಲ್ಲಿ ವರದಿಯಾದ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ಮಂಗಳವಾರ ಕರ್ನಾಟಕ ಸರ್ಕಾರ ಮಹಾರಾಷ್ಟ್ರದಿಂದ ಆಗಮಿಸುವವರಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮಹಾರಾಷ್ಟ್ರದಿಂದ ಆಗಮಿಸುವ ವ್ಯಕ್ತಿಗಳ ಕುರಿತು ವಿಶೇಷ ಕಣ್ಗಾವಲು ಕ್ರಮಗಳನ್ನು ಅನುಸರಿಸುವ ಸೂಚನೆಗಳನ್ನು ನೀಡಲಾಗಿದೆ.
ಮಹಾರಾಷ್ಟ್ರದ ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಲ್ಲಿ ವಿಶೇಷ ಕಣ್ಗಾವಲು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಲಾಗಿದೆ.

ವಿಮಾನ, ರೈಲು, ಬಸ್, ಟ್ಯಾಕ್ಸಿ, ಸ್ವಂತ ವಾಹನದ ಮೂಲಕ ಕರ್ನಾಟಕಕ್ಕೆ ಆಗಮಿಸುವ ಜನರು 72 ಗಂಟೆಗಳ ಮೊದಲ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಅಥವ ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರವನ್ನು ಹೊಂದಿರಬೇಕು ಎಂದು ಮಾರ್ಗಸೂಚಿ ಹೇಳಿದೆ.
ವಿಮಾನಯಾನ ಸಂಸ್ಥೆಗಳು 72 ಗಂಟೆಗಳ ಒಳಗೆ ಮಾಡಿಸಿದ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಅಥವ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದ ಪ್ರಮಾಣ ಪತ್ರ ಹೊಂದಿರುವ ಜನರಿಗೆ ಮಾತ್ರ ಬೋರ್ಡಿಂಗ್ ಪಾಸ್ ನೀಡಬೇಕು ಎಂದು ತಿಳಿಸಿದೆ.
ಕೋವಿಡ್ ಹಿನ್ನೆಲೆಯಲ್ಲಿ, ಮಹಾರಾಷ್ಟ್ರದಿಂದ ಆಗಮಿಸುವ ವ್ಯಕ್ತಿಗಳ ಕುರಿತು ವಿಶೇಷ ಕಣ್ಗಾವಲು ಕ್ರಮಗಳನ್ನು ಅನುಸರಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.#KarnatakaFightsCorona @CMofKarnataka pic.twitter.com/Hr87o3zu6o
— DIPR Karnataka (@KarnatakaVarthe) June 29, 2021
ರೈಲ್ವೆ ಪ್ರಾಧಿಕಾರವು ರೈಲಿನಲ್ಲಿ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರು ನೆಗೆಟಿವ್ ವರದಿ ಅಥವ ಲಸಿಕೆ ಪ್ರಮಾಣ ಪತ್ರ ಹೊಂದಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದೆ.
ಬಸ್‌ಗಳ ಮೂಲಕ ಬರುವ ಪ್ರಯಾಣಿಕರು 72 ಗಂಟೆಗಳ ಒಳಗೆ ಮಾಡಿಸಿದ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಅಥವ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದ ಪ್ರಮಾಣ ಪತ್ರ ಹೊಂದಿರುವುದನ್ನು ನಿರ್ವಾಹಕರು ಖಚಿತಪಡಿಸಿಕೊಳ್ಳಬೇಕು.
ಗಡಿ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ ಹಾಗೂ ಕಲಬುರಗಿ ಜಿಲ್ಲೆಗಳ ಮೂಲಕ ರಾಜ್ಯಕ್ಕೆ ಪ್ರವೇಶಿಸುವ ವಾಹನ ಚಾಲಕರು/ ಸಹಾಯಕರು/ ಪ್ರಯಾಣಿಕರು ಕರ್ನಾಟಕ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಇದಕ್ಕಾಗಿ ಜಿಲ್ಲಾಡಳಿತ ಚೆಕ್ ಪೋಸ್ಟ್‌ನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.












Click it and Unblock the Notifications