ಪಂಚಾಯಿತಿ ಚುನಾವಣೆ; ಕೋವಿಡ್ ಸೋಂಕಿತರು ಮತ ಚಲಾಯಿಸಬಹುದು

ಬೆಂಗಳೂರು, ಡಿಸೆಂಬರ್ 21: ಕರ್ನಾಟಕದಲ್ಲಿ ಮೊದಲನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಡಿಸೆಂಬರ್ 22ರ ಮಂಗಳವಾರ ನಡೆಯಲಿದೆ. ಕೋವಿಡ್ ಸಂದರ್ಭದಲ್ಲಿಯೇ ಚುನಾವಣೆ ಎದುರಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ರಾಜ್ಯದ 117 ತಾಲೂಕುಗಳ 3019 ಗ್ರಾಮ ಪಂಚಾಯಿತಿಗಳ 43,238 ಸ್ಥಾನಗಳಿಗೆ ಮಂಗಳವಾರ ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಕೋವಿಡ್ ಸೋಂಕು ಹೊಂದಿರುವ ವ್ಯಕ್ತಿಗಳು ಸಹ ಮತ ಚಲಾವಣೆ ಮಾಡಲು ಅವಕಾಶ ನೀಡಲಾಗಿದೆ.

ಮಾರ್ಗಸೂಚಿಯ ಪ್ರಕಾರ ಕೋವಿಡ್ 19 ಸೋಂಕಿತರು ಹಾಗೂ ಮತದಾನದ ದಿನ ತಪಾಸಣೆಯಿಂದ ಕಂಡುಬಂದ ಕೋವಿಡ್ ಶಂಕಿತರು ಮತಗಟ್ಟೆಗಳಿಗೆ ತೆರಳಿ ಖುದ್ದು ಮತದಾನ ಮಾಡಲು ಇಚ್ಚಿಸಿದಲ್ಲಿ ಇವರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

COVID Patients Can Vote In Gram Panchayat Election

ತಾಲೂಕು ಆರೋಗ್ಯಾಧಿಕಾರಿಗಳು ಮತ್ತು ಆರೋಗ್ಯ ಇಲಾಖಾ ಸಿಬ್ಬಂದಿಗಳು ಕೋವಿಡ್ ಸೋಂಕಿತರು ಹಾಗೂ ಕೋವಿಡ್ ಶಂಕಿತರನ್ನು ಅಗತ್ಯ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಸಂಬಂಧಪಟ್ಟ ಮತಗಟ್ಟೆಗಳಿಗೆ ಮತದಾನದ ಕೊನೆಯ ಒಂದು ಗಂಟೆಯ ಅವಧಿಯಲ್ಲಿ ಕರೆತಂದು ಮತದಾನದ ನಂತರ ಅವರನ್ನು ಸ್ವಸ್ಥಾನಕ್ಕೆ ಮರಳಿ ಕರೆದುಕೊಂಡು ಹೋಗಲಿದ್ದಾರೆ.

ಪ್ರತಿ ಮತದಾನ ಕೇಂದ್ರಕ್ಕೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಮತದಾನ ಕೊಠಡಿಗೆ ಆಗಮಿಸುವ ವ್ಯಕ್ತಿಗಳನ್ನು ಪ್ರವೇಶದ್ವಾರದಲ್ಲಿ ಕೋವಿಡ್-19 ಥರ್ಮಲ್ ಸ್ಕ್ಯಾನರ್ ನಿಂದ ಜ್ವರ ತಪಾಸಣೆ ಮಾಡಲಾಗುವುದು ಹಾಗೂ ಒಳಪ್ರವೇಶಿಸುವ ವ್ಯಕ್ತಿಗಳು ಮಾಸ್ಕ್ ಧರಿಸಿರುವುದನ್ನು ಹಾಗೂ ಪ್ರತಿಯೊಬ್ಬರೂ ಸ್ಯಾನಿಟೈಸರ್ ಬಳಸಿ ಕೈ ಶುಚಿಗೊಳಿಸಿಕೊಳ್ಳುವುದು ಕಡ್ಡಾಯ.

ಕೋವಿಡ್-19 ಲಕ್ಷಣಗಳು ಕಂಡುಬಂದ ವ್ಯಕ್ತಿಗಳನ್ನು ಕೂಡಲೇ ಪ್ರತ್ಯೇಕಿಸಿ, ಹೆಚ್ಚಿನ ತಪಾಸಣೆಗೆ ಆರೋಗ್ಯ ಕೇಂದ್ರಕ್ಕೆ ಕಳುಹಿಸಿಕೊಡಲಾಗುತ್ತದೆ. ಮತದಾನಕ್ಕೆ ನಿಗದಿಪಡಿಸಿದ ಕೊಠಡಿಯನ್ನು ಸ್ಯಾನಿಟೈಸ್ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+