ಕರ್ನಾಟಕ; ಕೋವಿಡ್‌ ಗುಣಮುಖ ಸಂಖ್ಯೆ ಹೆಚ್ಚಳ

ಬೆಂಗಳೂರು, ಆಗಸ್ಟ್ 26: ಕರ್ನಾಟಕದಲ್ಲಿ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 2 ಲಕ್ಷದ ಗಡಿ ದಾಟಿದೆ. ಬೆಂಗಳೂರು ನಗರವೊಂದರದಲ್ಲಿಯೇ 1 ಲಕ್ಷಕ್ಕೂ ಅಧಿಕ ಸೋಂಕಿತರು ಇದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳಿಗಿಂತ ಗುಣಮುಖರಾದವರ ಸಂಖ್ಯೆಯೇ ಅಧಿಕವಾಗಿದೆ.

Recommended Video

      ಬಿಡುಗಡೆಯಾಯ್ತು RCB ಹೊಸ ಜೆರ್ಸಿ | Oneindia Kannada

      ಕರ್ನಾಟಕದ ಆರೋಗ್ಯ ಇಲಾಖೆಯ ಮಂಗಳವಾರ ಹೆಲ್ತ್ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ ಕೋವಿಡ್‌ನಿಂದ ಗುಣಮುಖರಾದವರ ಸಂಖ್ಯೆ 204439. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 82,410.

      ಆರೋಗ್ಯ ಇಲಾಖೆಯ ಮಾಹಿತಿಯಂತೆ ರಾಜ್ಯದಲ್ಲಿ‌ ಕೋವಿಡ್‌ನಿಂದ ಗುಣಮುಖರಾದವರ ಸಂಖ್ಯೆ 2 ಲಕ್ಷ ದಾಟಿದೆ. ಕಳೆದ 7 ದಿನಗಳಲ್ಲಿ 55,000 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳಿಗಿಂತ ಗುಣಮುಖರಾದವರ ಸಂಖ್ಯೆ 1.2 ಲಕ್ಷ ಹೆಚ್ಚಿದೆ.

      COVID Recovery Rate Karnataka More Than Active Cases

      ಕರ್ನಾಟಕದಲ್ಲಿ ಗುಣಮುಖರಾದವರು 2,04,439. ಕೋವಿಡ್ ಸೋಂಕಿನ ಚೇತರಿಕೆ ಪ್ರಮಾಣ ಶೇ 70.05. ಮರಣ‌ ಪ್ರಮಾಣ 1.69 ಎಂದು ಆರೋಗ್ಯ ಇಲಾಖೆ ಹೇಳಿದೆ.

      4958 ಕೋವಿಡ್ ಸೋಂಕಿತರು ಕರ್ನಾಟಕದಲ್ಲಿ ಇದುವರೆಗೂ ಮೃತಪಟ್ಟಿದ್ದಾರೆ. ಮಂಗಳವಾರ ಬೆಂಗಳೂರು ನಗರದಲ್ಲಿ 2294 ಹೊಸ ಕೋವಿಡ್ ಸೋಂಕಿತ ಪ್ರಕರಣಗಳು ದಾಖಲಾಗಿವೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 1,12,087ಕ್ಕೆ ಏರಿಕೆಯಾಗಿದೆ.

      ಬೆಂಗಳೂರು ನಗರದಲ್ಲಿಯೂ ಸಕ್ರಿಯ ಪ್ರಕರಣಗಳಿಗಿಂತ ಡಿಸ್ಚಾರ್ಜ್ ಆದವರ ಸಂಖ್ಯೆ ಅಧಿಕವಾಗಿದೆ. 74,901 ಜನರು ಇದುವರೆಗೂ ಡಿಸ್ಚಾರ್ಜ್ ಆಗಿದ್ದಾರೆ. ನಗರದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 35,430.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+